ನಗರದೆಲ್ಲೆಡೆ ಗಾಳಿ ಮಳೆ; ಜನಜೀವನ ಅಸ್ತವ್ಯಸ್ತ 


Team Udayavani, Oct 5, 2018, 11:30 AM IST

5-october-5.gif

ಮಹಾನಗರ: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮದಿಂದಾಗಿ ನಗರದಲ್ಲಿ ಗುರುವಾರ ಸಂಜೆ ವೇಳೆಗೆ ಗುಡುಗು ಸಿಡಿಲಿನಿಂದ ಕೂಡಿದ ಭಾರೀ ಗಾಳಿ ಮಳೆಯಾಗಿದ್ದು, ಜನಜೀವನ ಕೂಡ ಸ್ವಲ್ಪ ಮಟ್ಟಿಗೆ ಅಸ್ತವ್ಯಸ್ಥಗೊಂಡಿತ್ತು.

ಕಳೆದ ಕೆಲವು ದಿನಗಳಿಂದ ಮಂಗಳೂರು ನಗರದಲ್ಲಿ ತುಸು ಬಿಡುವು ನೀಡಿದ್ದ ಮಳೆ ಮತ್ತೆ ಬಿರುಸುಗೊಂಡಿದ್ದು, ತಗ್ಗು ಪ್ರದೇಶಗಳಲ್ಲಿ ಕೃತಕ ನೆರೆ ಉಂಟಾಗಿದೆ. ನಗರದ ಉರ್ವಸ್ಟೋರ್‌, ಕೊಟ್ಟಾರ, ಕೊಟ್ಟಾರಚೌಕಿ, ಲೇಡಿಹಿಲ್‌, ಕಂಕನಾಡಿ, ಪಡೀಲ್‌ ಸಹಿತ ಮತ್ತಿತರ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿತ್ತು.

ನಗರದ ಮೇರಿಹಿಲ್‌ ಸಮೀಪದ ವಿಕಾಸ್‌ ಕಾಲೇಜು ಪಕ್ಕದಲ್ಲಿ ನೀರು ನಿಂತು ಸುತ್ತಮುತ್ತಲಿನ ಮನೆ, ಅಂಗಡಿಗಳಿಗೆ ತೊಂದರೆ ಉಂಟಾಗಿದೆ. ಕಳೆದ ಕೆಲ ವರ್ಷಗಳ ಹಿಂದೆ ಈ ರಸ್ತೆಯ ಕಾಂಕ್ರೀಟ್‌ ಕಾಮಗಾರಿ ನಡೆಸುವಾಗ ಮಳೆ ನೀರು ಹರಿಯಲು ಚರಂಡಿ ವ್ಯವಸ್ಥೆ ಕಲ್ಪಿಸಲಿಲ್ಲ. ಇದೇ ಕಾರಣದಿಂದ ರಸ್ತೆಯ ಎತ್ತರ ಪ್ರದೇಶದಿಂದ ತಗ್ಗು ಪ್ರದೇಶಕ್ಕೆ ಹರಿದು ಬರುವ ಮಳೆ ನೀರು ರಸ್ತೆಯಲ್ಲೇ ನಿಲ್ಲುತ್ತಿದೆ. ಸಂಜೆ ವೇಳೆ ಮಳೆ ಸುರಿದ ಕಾರಣ ಶಾಲಾ-ಕಾಲೇಜು ವಿದ್ಯಾರ್ಥಿಗಳು ಮನೆಗೆ ತೆರಳಲು ಕಷ್ಟಪಟ್ಟರು.

ನಗರದ ಪಂಪ್‌ವೆಲ್‌, ಕಂಕನಾಡಿ, ಬಲ್ಮಠ, ಪಿವಿಎಸ್‌, ಜ್ಯೋತಿ ಸ ಹಿತ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿ ವಾಹನ ಸವಾರರು ಕಷ್ಟ ಅನುಭವಿಸಿದರು. ನಗರ ಭಾಗಗಳಲ್ಲಿ ವಾಹನಗಳು ನಿಧಾನವಾಗಿ ಸಂಚರಿಸಿದ್ದರಿಂದ ಕೆಲವು ಹೊತ್ತು ಟ್ರಾμಕ್‌ ಸಮಸ್ಯೆಯೂ ಎದುರಾಯ್ತು. ಬಹುದಿನಗಳಿಂದ ಮಳೆಯ ಮುನ್ಸೂಚನೆ ಇದ್ದರೂ ಕೊಡೆ, ರೈನ್‌ ಕೋಟ್‌ ಇಲ್ಲದೆ ಕೆಲಸಕ್ಕೆ ಬಂದವರೆಲ್ಲ ಸಂಜೆ ವೇಳೆ ಕೆಲಸದಿಂದ ಹಿಂದಿರುವಾಗ ಪರದಾಡುವಂತಾಯಿತು.

ಮೂರು ದಿನ ಮಳೆ ಸಾಧ್ಯತೆ 
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಅ. 5ರ ಬಳಿಕ ತೀವ್ರ ವಾಯುಭಾರ ಕುಸಿತ ಉಂಟಾಗಿ ಚಂಡಮಾರುತವಾಗಿ ಪರಿವರ್ತನೆಯಾಗುವ ಸಾಧ್ಯತೆ ಇದ್ದು, ನಗರದಲ್ಲಿ ಮೂರು ದಿನಗಳ ಕಾಲ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಗ್ರಾಮಾಂತರ ಭಾಗದಲ್ಲೂ ಗುಡುಗು ಮಳೆ
ಉಳ್ಳಾಲ, ಕಿನ್ನಿಗೋಳಿ, ಹಳೆಯಂಗಡಿ, ಮೂಲ್ಕಿ, ಮೂಡಬಿದಿರೆ, ಬಜಪೆ ಸಹಿತ ಮಂಗಳೂರು ಗ್ರಾಮಾಂತರ ಭಾಗದಲ್ಲೂ ಗುರುವಾರ ಸಂಜೆ ವೇಳೆ ಗುಡುಗು ಸಹಿತ ಭಾರೀ ಗಾಳಿ, ಮಳೆಯಾಗಿದೆ. ಭಾರೀ ಮಿಂಚು, ಗುಡುಗು ಕಾಣಿಸಿಕೊಂಡಿದ್ದರಿಂದ ಹಲವೆಡೆ ಕೆಲಕಾಲ ವಿದ್ಯುತ್‌ ಸಂಪರ್ಕವೂ ಕಡಿತಗೊಂಡಿತ್ತು.

ಟಾಪ್ ನ್ಯೂಸ್

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

PM-Nigirya

G20 Leaders Summit: ಪ್ರಧಾನಿ ಮೋದಿ ನೈಜೀರಿಯಾ, ಬ್ರೆಜಿಲ್‌, ಗಯಾನಾ ಪ್ರವಾಸ ಶುರು

Chattisgadh-Petrol

Chhattisgarh: ನೀರಿನ ಬಾವೀಲಿ ಪೆಟ್ರೋಲ್‌: ಸಂಗ್ರಹಕ್ಕೆ ಮುಗಿಬಿದ್ದ ಜನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

shami

BGT 2024: ಟೀಂ ಇಂಡಿಯಾಗೆ ಗುಡ್ ನ್ಯೂಸ್:‌ ಆಸೀಸ್‌ ಸರಣಿಗೆ ತಂಡ ಸೇರಲಿದ್ದಾರೆ ಶಮಿ

ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Charmadi: ಮೃತ್ಯುಂಜಯ ನದಿಯಲ್ಲಿ ಕಾಣಿಸಿಕೊಂಡ ಒಂಟಿ ಸಲಗ

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Patna: ಆಸ್ಪತ್ರೆಯಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣು ನಾಪತ್ತೆ!; ಇಲಿ ಕಚ್ಚಿದೆ ಎಂದ ವೈದ್ಯರು

Sabarimala Virtual Queue Booking Limit Increase

Kerala govt: ಶಬರಿಮಲೆ ವರ್ಚುವಲ್‌ ಕ್ಯೂ ಬುಕ್ಕಿಂಗ್‌ ಮಿತಿ ಹೆಚ್ಚಳ

UP-Jhansi

Uttar Pradesh: ಝಾನ್ಸಿ ಅಗ್ನಿ ಅವಘಡ: ಗುರುತೇ ಸಿಗದಂತೆ ಕರಕಲಾದ ಹಸುಳೆಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.