ನಗರದೆಲ್ಲೆಡೆ ಕಸದ ರಾಶಿ, ದುರ್ವಾಸನೆ


Team Udayavani, Oct 5, 2018, 12:01 PM IST

m4-nagara.jpg

ಮೈಸೂರು: ಪೌರಕಾರ್ಮಿಕರು ಬೇಡಿಕೆಗಳ ಈಡೇರಿಗಾಗಿ ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸಿ ಪ್ರತಿಭಟಿಸುತ್ತಿದ್ದು, ನಗರದೆಲ್ಲೆಡೆ ಅಶುಚಿತ್ವ ತಾಂಡವವಾಡುತ್ತಿರುವ ಹಿನ್ನೆಲೆಯಲ್ಲಿ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿಯೇ ಸ್ವಚ್ಛತಾ ಕಾರ್ಯಕ್ಕಿಳಿದಿದ್ದಾರೆ.

ನಗರದ ಹೃದಯಭಾಗ ಕೆ.ಆರ್‌.ವೃತ್ತ, ಶಿವರಾಂಪೇಟೆ, ಅಗ್ರಹಾರ, ದೇವರಾಜ ಮಾರುಕಟ್ಟೆ, ಎಂ.ಜಿ.ರಸ್ತೆ, ವಾಣಿವಿಲಾಸ ಮಾರುಕಟ್ಟೆ, ಚಾಮರಾಜ ಮೊಹಲ್ಲಾ, ದೇವರಾಜ ಮೊಹಲ್ಲಾ, ಉದಯಗಿರಿ ಸೇರಿದಂತೆ ಹಲವೆಡೆ ಕಸದರಾಶಿ ತಾಂಡವವಾಡುತ್ತಿತ್ತು. 

ಹಾಗಾಗಿ ನಗರ ಪಾಲಿಕೆ ಸಿಬ್ಬಂದಿ ಬೆಳ್ಳಂಬೆಳಗ್ಗೆ ಬೀಗಿದಿಳಿದು ಸ್ವತಃ ಸ್ವಚ್ಛತಾ ಕಾರ್ಯ ಕೈಗೊಂಡರು. ನಗರದ ಸಯ್ನಾಜಿರಾವ್‌ ರಸ್ತೆಯಲ್ಲಿ ಪೊರಕೆ ಹಿಡಿದು ಸ್ವಚ್ಛತಾ ಕಾರ್ಯ ನಡೆಸಿದ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ನಗರದಲ್ಲಿ ಸ್ವಚ್ಛತಾ ಕಾರ್ಯ ನಡೆಸಿದರು. 

ಮುಷ್ಕರ ಮುಂದೂಡಿಕೆ: ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರಕಾರ್ಮಿಕರು ನಡೆಸುತ್ತಿರುವ ಅರ್ನಿದಿಷ್ಟಾವಧಿ ಮುಷ್ಕರ ಗುರುವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ಸಮಸ್ಯೆ ಇತ್ಯರ್ಥಗೊಳ್ಳುವವರೆಗೆ ಸ್ವಚ್ಛತಾ ಕೆಲಸ ಸ್ಥಗಿತಗೊಳಿಸಿ ಮುಷ್ಕರ ಮಂದುವರಿಸುವುದಾಗಿ ಪೌರಕಾರ್ಮಿಕರು ಪಟ್ಟು ಹಿಡಿದು ಮೈಸೂರು ಪೌರಕಾರ್ಮಿಕರು, ನಗರಪಾಲಿಕೆ, ನಗರಸಭೆ, ಪುರಸಭೆ ಪೌರಕಾರ್ಮಿಕರ ಮಹಾಸಂಘದ ನೇತೃತ್ವದಲ್ಲಿ ನಗರ ಪಾಲಿಕೆ ಕಚೇರಿ ಎದುರು ಮುಷ್ಕರ ಕುಳಿತಿದ್ದಾರೆ. 

ಪ್ರತಿಭಟನಾನಿರತರನ್ನು ಪಾಲಿಕೆ ಆಯುಕ್ತ ಕೆ.ಎಚ್‌. ಜಗದೀಶ್‌ ಭೇಟಿ ಮಾಡಿ, ಅ.5ರವರೆಗೆ ಕಾಲಾವಕಾಶ ನೀಡಿದರೆ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಅದಕ್ಕೆ ಒಪ್ಪದ ಪೌರಕಾರ್ಮಿಕರು, ತಮ್ಮ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಬೇಕು ಮತ್ತು ಸ್ಥಳಕ್ಕೆ ಮುಖ್ಯಮಂತ್ರಿ ಕುಮಾರಸ್ವಾಮಿ ಆಗಮಿಸಬೇಕೆಂದು ಪಟ್ಟು ಹಿಡಿದು ಪ್ರತಿಭಟನೆ ಮುಂದುವರಿಸಿದರು.

ಬೇಡಿಕೆಗಳು
-ಸರ್ಕಾರ ಗುತ್ತಿಗೆ ಪೌರಕಾರ್ಮಿಕ ಪದ್ಧತಿ ರದ್ದುಗೊಳಿಸಬೇಕು.
-ಪ್ರತಿ 500 ಜನಕ್ಕೆ ಒಬ್ಬರಂತೆ ಪೌರಕಾರ್ಮಿಕರನ್ನು ನೇಮಿಸಬೇಕು. 
-ಬೆಳಗಿನ ಉಪಹಾರ ಯೋಜನೆ ಜಾರಿಗೊಳಿಸಿ, ತಿಂಗಳಿಗೆ 600 ರೂ. ಹಣ ನೀಡಬೇಕು. 
 -ಪೌರಕಾರ್ಮಿಕರ ಮಕ್ಕಳ ಶಿಕ್ಷಣ ಮತ್ತು ಅಭಿವೃದ್ಧಿಗೆ ಶೇ.20ರಷ್ಟು ಹಣ ಮೀಸಲಿಡಬೇಕು. 
-ಬಿಬಿಎಂಪಿ ಮಾದರಿಯಲ್ಲಿ ಅಂಬೇಡ್ಕರ್‌ ಜಯಂತಿ ವೇಳೆ 20 ಸಾವಿರ ರೂ. ಬೋನಸ್‌ ನೀಡಬೇಕು.
-ಹಬ್ಬದ ಸಂದರ್ಭದಲ್ಲಿ ಕೆಲಸ ಮಾಡುವ ಪೌರ ಕಾರ್ಮಿಕರಿಗೆ ವರ್ಷಕ್ಕೆ 30 ದಿನಗಳ ವೇತನ ನೀಡಬೇಕು. 

ಪೌರಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದ್ದರಿಂದ ನಗರದಲ್ಲಿ ನೈರ್ಮಲ್ಯ ಉಂಟಾಗಿದೆ. ಸರ್ಕಾರ ಶೀಘ್ರ ಪೌರಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುತ್ತದೆ ಎಂಬ ನಂಬಿಕೆ ನಮಗಿದೆ. ಪೌರಕಾರ್ಮಿಕರು ಶೀಘ್ರ ಅವರ ಕರ್ತವ್ಯಕ್ಕೆ ಮರಳಲಿದ್ದಾರೆಂಬ ನಿರೀಕ್ಷೆಯಲ್ಲಿದ್ದೇವೆ. ಅವರು ಕರ್ತವ್ಯಕ್ಕೆ ಹಾಜರಾಗದ ಕಾರಣ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದೇವೆ.

ಟಾಪ್ ನ್ಯೂಸ್

CM DCM

Cabinet ಸರ್ಜರಿ ಸದ್ಯ ಇಲ್ಲ:ಹೈಕಮಾಂಡ್‌ ಭೇಟಿ ಬಳಿಕ ಸಿಎಂ, ಡಿಸಿಎಂ ಸ್ಪಷ್ಟನೆ

1-ani

Tamil Nadu;ಇಂದು ಅಪ್ಪಳಿಸಲಿದೆ ‘ಫೆಂಗಲ್‌’ ಚಂಡಮಾರುತ!: ಶ್ರೀಲಂಕಾದಲ್ಲಿ 12 ಸಾ*ವು

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

CM DCM

Cabinet ಸರ್ಜರಿ ಸದ್ಯ ಇಲ್ಲ:ಹೈಕಮಾಂಡ್‌ ಭೇಟಿ ಬಳಿಕ ಸಿಎಂ, ಡಿಸಿಎಂ ಸ್ಪಷ್ಟನೆ

1-ani

Tamil Nadu;ಇಂದು ಅಪ್ಪಳಿಸಲಿದೆ ‘ಫೆಂಗಲ್‌’ ಚಂಡಮಾರುತ!: ಶ್ರೀಲಂಕಾದಲ್ಲಿ 12 ಸಾ*ವು

krishna bhaire

1.26 ಲಕ್ಷ ಅರ್ಹರಿಗೆ ವಾರದಲ್ಲಿ ಬಗರ್‌ ಹುಕುಂ ಚೀಟಿ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.