ರಾಜಧಾನಿಯಲ್ಲೂ ಎಚ್‌ಕೆಇ ಬಳ್ಳಿ ಹಬ್ಬಲಿ


Team Udayavani, Oct 6, 2018, 11:21 AM IST

gul-7.jpg

ಕಲಬುರಗಿ: ಹಿಂದುಳಿದ ಹೈದ್ರಾಬಾದ ಕರ್ನಾಟಕ ಭಾಗದಲ್ಲಿನ ಶೈಕ್ಷಣಿಕ ಅಭಿವೃದ್ಧಿಗೆ ತನ್ನದೇ ಕೊಡುಗೆ ನೀಡಿರುವ ಹೈದ್ರಾಬಾದ ಕರ್ನಾಟಕ ಶಿಕ್ಷಣ ಸಂಸ್ಥೆ (ಎಚ್‌ಕೆಇ) ಇದೀಗ ಬೆಂಗಳೂರಿನಲ್ಲಿ ಇಂಟರ್‌ನ್ಯಾಷನಲ್‌ ಶಾಲೆಯೊಂದು ತೆರೆಯುವ ಮುಖಾಂತರ ಮಹೋನ್ನತ ಹೆಜ್ಜೆ ಇಟ್ಟಿದೆ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.

ಬೆಂಗಳೂರಿನ ಸದಾಶಿವ ನಗರದಲ್ಲಿ ಶುಕ್ರವಾರ ಎಚ್‌ಕೆಇ ಸಂಸ್ಥೆಯ ಇಂಟರ್‌ನ್ಯಾಷನಲ್‌ ಪಬ್ಲಿಕ್‌ ಶಾಲೆಯ ಎರಡನೇ, ಮೂರನೇ ಹಾಗೂ ನಾಲ್ಕನೇ ಅಂತಸ್ತಿನ ಸಂಕಿರಣ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಇಂಟರ್‌ನ್ಯಾಷನಲ್‌ ಶಾಲೆಗೆ ಅನುಗುಣವಾಗಿ ಕಟ್ಟಡ ನಿರ್ಮಾಣವಾಗುತ್ತಿರುವ ಜತೆಗೆ ಇತರ ಕಾರ್ಯಗಳು ಸಹ ಜತೆ-ಜತೆಗೆ ಬರಬೇಕು ಎಂದರು. 

ಎಚ್‌ಕೆಇ ಸಂಸ್ಥೆ ಅಧ್ಯಕ್ಷ ಭೀಮಾಶಂಕರ ಬಿಲಗುಂದಿ ಅಧ್ಯಕ್ಷತೆ ವಹಿಸಿ, ಈಗಾಗಲೇ ಹೇಳಿರುವಂತೆ ಬೆಂಗಳೂರಲ್ಲಿ ಎಚ್‌ಕೆಇ ರಾಷ್ಟ್ರೀಯ ಪಬ್ಲಿಕ್‌ ಶಾಲಾ ಕಟ್ಟಡಕ್ಕೆ ಚಾಲನೆ ನೀಡಲಾಗಿದೆ. ಮುಂದಿನ ವರ್ಷ(2019)ದಿಂದ ಸಂಸ್ಥೆಯ ವತಿಯಿಂದ ರಾಷ್ಟ್ರೀಯ ಪಬ್ಲಿಕ್‌ ಶಾಲೆ ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

ಬೀದರ ಹಾಗೂ ರಾಯಚೂರಲ್ಲಿ ಸಹ 10 ಹಾಗೂ 5 ಕೋಟಿ ರೂ. ವೆಚ್ಚದಲ್ಲಿ ರಾಷ್ಟ್ರೀಯ ಪಬ್ಲಿಕ್‌ ಮಾದರಿಯ ಶಾಲೆಗಳನ್ನು ಪ್ರಾರಂಭಿಸಲು ಉದ್ದೇಶಿಸಲಾಗಿದೆ. ಬರುವ ಡಿಸೆಂಬರ್‌ ಮಾಸದಲ್ಲಿ ಕಟ್ಟಡ ಪ್ರಾರಂಭಕ್ಕೆ ಅಡಿಗಲ್ಲು ನೆರವೇರಿಸಲಾಗುವುದು. ಮುಖ್ಯವಾಗಿ ಸಂಸ್ಥೆಯ ಅನುದಾನಿತ ಪದವಿ ಕಾಲೇಜುಗಳಲ್ಲಿ 80ಕ್ಕೂ ಹೆಚ್ಚು ಉಪನ್ಯಾಸಕರು ಹಾಗೂ ಅನುದಾನಿತ ಪ್ರೌಢ ಶಾಲೆಗಳಲ್ಲಿ 8 ಹುದ್ದೆಗಳ ಭರ್ತಿಗೆ ಸರ್ಕಾರದ ಅನುಮತಿ ಕೇಳಲಾಗಿದೆ ಎಂದು ತಿಳಿಸಿದರು.

ಶಾಸಕರಾದ ಎಂ.ವೈ. ಪಾಟೀಲ, ಬಿ.ಜಿ. ಪಾಟೀಲ, ಸಂಸ್ಥೆ ಉಪಾಧ್ಯಕ್ಷ ಡಾ| ಶಿವಾನಂದ ದೇವರಮನಿ, ಆಡಳಿತ ಮಂಡಳಿ ಕಾರ್ಯದರ್ಶಿ ಡಾ| ನಾಗೇಂದ್ರ ಮಂಠಾಳೆ, ಜಂಟಿ ಕಾರ್ಯದರ್ಶಿ ಗಂಗಾಧರ ಏಲಿ, ಸದಸ್ಯರಾದ ವಿಜಯಕುಮಾರ ದೇಶಮುಖ ಮುಂತಾದವರಿದ್ದರು.

ಟಾಪ್ ನ್ಯೂಸ್

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್‌ ನೀಡಿದ ಬೋಯಿಂಗ್‌

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು

1-erqrer

Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ

ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

Madhya Pradesh: ಸರ್ಕಾರಿ ಕಾರ್ಯಕ್ರಮದಲ್ಲಿ ನಕ್ಕ ಅಧಿಕಾರಿ ವಿರುದ್ಧ ಶೋಕಾಸ್‌ ನೋಟಿಸ್‌

1-reee

Congress ಜೂಟ್ ಮತ್ತು ಲೂಟ್ ರಾಜಕೀಯದಲ್ಲಿ ತೊಡಗಿದೆ: ರಾಜಸ್ಥಾನ ಸಿಎಂ ಭಜನ್ ಲಾಲ್

baby 2

Hospital ನಿಂದ ಶಿಶುವಿನ ಅಪಹರಣ: ರೈಲು ನಿಲ್ದಾಣದಲ್ಲಿ ರಕ್ಷಣೆ: ಇಬ್ಬರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಸ್ತೆ ಅಪಘಾತ: ಮುದ್ದೇಬಿಹಾಳದ ಯುವಕ ಕಲಬುರ್ಗಿಯಲ್ಲಿ ಮೃತ್ಯು

Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು

ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು

Maharashtra Election; BJP has nothing but 370: Mallikarjuna Kharge

Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ

Kalaburagi: Govt order to investigate KKRDB grant illegality: Complaint to election commission

Kalaburagi: ಕೆಕೆಆರ್‌ಡಿಬಿ ಅನುದಾನ ಅಕ್ರಮ ತನಿಖೆಗೆ ಸರ್ಕಾರದ ಆದೇಶ: ಚು.ಆಯೋಗಕ್ಕೆ ದೂರು

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೂರೂ ವರ್ಷಗಳಿಂದ ಈ ಶಾಲೆಯಲ್ಲಿ ಗಣಿತ ಶಿಕ್ಷಕರೇ ಇಲ್ಲ… ವಿದ್ಯಾರ್ಥಿಗಳಿಂದ ಪ್ರತಿಭಟನೆ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Devadurga

Karkala: ಅಕ್ರಮ ಮದ್ಯ ದಾಸ್ತಾನು; ಆರೋಪಿ ಸೆರೆ

Brahmavar

Malpe: ಅಸ್ವಾಭಾವಿಕ ಸಾವು; ಪ್ರಕರಣ ದಾಖಲು

WhatsApp Image 2024-11-17 at 21.09.50

Chennai: ನಟಿ ಕಸ್ತೂರಿ ಶಂಕರ್‌ಗೆ ನ.29ರ ವರೆಗೆ ನ್ಯಾಯಾಂಗ ಬಂಧನ

ssa

Malpe: ನಿಲ್ಲಿಸಲಾಗಿದ್ದ ಬುಲೆಟ್‌ ಕಳವು

navaneth-Rana

Maharashtra: ಬಿಜೆಪಿ ನಾಯಕಿ ನವನೀತ್‌ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್‌ಐಆರ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.