ಕಲ್ಲಡ್ಕ ಪ್ರಭಾಕರ್ ಭಟ್ಗೆ ವಾರಂಟ್, ರಾಘವೇಶ್ವರ ಶ್ರೀಗೆ ಸಮನ್ಸ್
Team Udayavani, Oct 6, 2018, 11:25 AM IST
ಪುತ್ತೂರು: ಶ್ಯಾಮ ಶಾಸ್ತ್ರೀ ಶೂಟೌಟ್ ಪ್ರಕರಣದ ಅಂತಿಮ ದೋಷಾರೋಪಣ ಪಟ್ಟಿಯ ಆಧಾರ ದಲ್ಲಿ ಡಾ| ಪ್ರಭಾಕರ ಭಟ್ ಕಲ್ಲಡ್ಕ ಹಾಗೂ ಬೋನಂತಾಯ ಶಿವಶಂಕರ ಭಟ್ ಅವರಿಗೆ ಪುತ್ತೂರು ಪ್ರಧಾನ ಹಿರಿಯ ವ್ಯಾವಹಾರಿಕ ನ್ಯಾಯಾಲಯ ವಾರಂಟ್ ಜಾರಿ ಮಾಡಿದೆ.
ಪ್ರಕರಣದ ಇನ್ನೋರ್ವ ಆರೋಪಿ ಎಂದು ಗುರುತಿಸಿರುವ ಶ್ರೀ ರಾಮ ಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿಗೆ ಸಮನ್ಸ್ ಜಾರಿ ಮಾಡಿದೆ. ಈ ವಿಚಾರಣೆಯನ್ನು ಅಕ್ಟೋಬರ್ 31ರಂದು ನಡೆಸಲಿದ್ದು, ಆ ದಿನ ನ್ಯಾಯಾಲಯಕ್ಕೆ ಹಾಜ ರಾಗುವಂತೆ ತಿಳಿಸಿದೆ.
ರಾಘವೇಶ್ವರ ಸ್ವಾಮೀಜಿ ವಿರುದ್ಧ ಅತ್ಯಾಚಾರದ ಆರೋಪ ಮಾಡಿರುವ ಪ್ರೇಮಲತಾ ಅವರ ಪತಿ ದಿವಾಕರ ಶಾಸ್ತ್ರೀ ಅವರ ಸಹೋದರ ಶ್ಯಾಮ್ ಪ್ರಸಾದ್ ಶಾಸ್ತ್ರೀ ಅವರು 2014ರ ಆ.31ರಂದು ಮಧ್ಯಾಹ್ನ 1.30ರ ಸುಮಾರಿಗೆ ಕೋವಿಯಿಂದ ಗುಂಡು ಹಾರಿಸಿಕೊಂಡಿದ್ದರು. ಇದರ ಬಗ್ಗೆ ಶ್ಯಾಮ್ ಶಾಸ್ತ್ರೀ ಅವರ ಪತ್ನಿ ನಗರ ಠಾಣೆಗೆ ದೂರು ನೀಡಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದರು.
ಅನಂತರದ ಬೆಳವಣಿಗೆಯಲ್ಲಿ ಸಿಐಡಿ ಪೊಲೀಸರು ತನಿಖೆಯನ್ನು ಮುಂದುವರಿಸಿ, ಸೆ. 26ರಂದು ಅಂತಿಮ ದೋಷಾರೋಪಣ ಪಟ್ಟಿಯನ್ನು ಪುತ್ತೂರು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇದರಲ್ಲಿರುವಂತೆ ರಾಘವೇಶ್ವರ ಭಾರತೀ ಸ್ವಾಮೀಜಿ, ಕಲ್ಲಡ್ಕ ಡಾ| ಪ್ರಭಾಕರ ಭಟ್, ಬೋನಂತಾಯ ಶಿವಶಂಕರ ಭಟ್ ಅವರು ಆತ್ಮಹತ್ಯೆಗೆ ಪ್ರೇರಣೆ ನೀಡಿದ್ದಾರೆ ಎಂದು ಉಲ್ಲೇಖೀಸಲಾಗಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಲಯ ವಾರಂಟ್ ಹಾಗೂ ಸಮನ್ಸ್ ಜಾರಿ ಮಾಡಿ ಆದೇಶಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kannada Cinema: ‘ನಾ ನಿನ್ನ ಬಿಡಲಾರೆ’ ಟ್ರೇಲರ್ ಬಂತು: ನ.29ಕ್ಕೆ ಸಿನಿಮಾ ತೆರೆಗೆ
Sagara: ಕರವೇ ತಾಲೂಕು ಅಧ್ಯಕ್ಷರ ಮನೆ ಮೇಲೆ ಅರಣ್ಯಾಧಿಕಾರಿಗಳಿಂದ ದಾಳಿ; ಜಿಂಕೆ ಮಾಂಸ ವಶ
BGT Series: ವಿರಾಟ್ ಕೊಹ್ಲಿ ಜತೆ ವೈಯಕ್ತಿಕ ಪೈಪೋಟಿಗೆ ಇಳಿದಿದ್ದೆ: ಮಿಚೆಲ್ ಜಾನ್ಸನ್
Congress ಶಾಸಕರಿಗೆ ಬಿಜೆಪಿ ಆಫರ್; ರವಿ ಗಣಿಗ ಆರೋಪಕ್ಕೆ ಶಾಸಕ ತಮ್ಮಯ್ಯ ಸ್ಪಷ್ಟನೆ
BGT 2024: ಗಾಯಗೊಂಡ ಗಿಲ್: ಮೂರನೇ ಕ್ರಮಾಂಕದಲ್ಲಿ ಕನ್ನಡಿಗನಿಗೆ ಒಲಿದ ಅದೃಷ್ಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.