ಪಾರುಲ್‌ ಬಟರ್‌ಫ್ಲೈ ಕನಸು

Team Udayavani, Oct 7, 2018, 6:00 AM IST

1.jpg

ಪಾರುಲ್‌ ಯಾದವ್‌ ಅವರ ಸಿನೆಮಾ ಬಿಡುಗಡೆಯಾಗಿ ಎರಡು ವರ್ಷ ಕಳೆದಿದೆ. ಜೆಸ್ಸಿ  ನಂತರ ಪಾರುಲ್‌ ನಟನೆಯ ಯಾವ ಕನ್ನಡ ಚಿತ್ರವೂ ಬಿಡುಗಡೆಯಾಗಿರಲಲ್ಲ. ಈಗ ಪಾರುಲ್‌ ದೊಡ್ಡ ಮಟ್ಟದಲ್ಲಿ ಕನ್ನಡಕ್ಕೆ ಬರಲು ಸಿದ್ಧರಾಗಿದ್ದಾರೆ. ಅದು ಬಟರ್‌ಫ್ಲೈ ಮೂಲಕ. ಪಾರುಲ್‌ ಯಾದವ್‌ ಬಟರ್‌ಫ್ಲೈ ಎಂಬ ಸಿನೆಮಾ ಒಪ್ಪಿಕೊಂಡಿರೋದು ನಿಮಗೆ ಗೊತ್ತಿರಬಹುದು. ಈಗ ಆ ಚಿತ್ರದ ಬಹುತೇಕ ಚಿತ್ರೀಕರಣ ಮುಗಿದಿದ್ದು, ಚಿತ್ರ ಬಿಡುಗಡೆ ಹಂತಕ್ಕೆ ಬಂದಿದೆ. ಹಿಂದಿಯಲ್ಲಿ ಯಶಸ್ಸು ಕಂಡ ಕ್ವೀನ್‌ ಚಿತ್ರದ ರೀಮೇಕ್‌ ಇದಾಗಿದ್ದು, ಕಂಗನಾ ಮಾಡಿದ ಪಾತ್ರವನ್ನು ಪಾರುಲ್‌ ಮಾಡುತ್ತಿದ್ದಾರೆ. ಬಟರ್‌ಫ್ಲೈ ಚಿತ್ರದ ಮೇಲೆ ಪಾರುಲ್‌ಗೆ ಸಿಕ್ಕಾಪಟ್ಟೆ ಪ್ರೀತಿ. ಅದಕ್ಕೆ ಎರಡು ಕಾರಣ. ಮೊದಲನೆಯದಾಗಿ ತುಂಬಾ ಭಿನ್ನವಾದ ಪಾತ್ರ ಪಾರುಲ್‌ಗೆ ಸಿಕ್ಕಿರುವುದು ಒಂದಾದರೆ, ಪಾರುಲ್‌ ಈ ಚಿತ್ರದ ಸಹ ನಿರ್ಮಾಪಕಿ ಕೂಡ. ಈ ಎಲ್ಲಾ ಕಾರಣಗಳಿಂದ ಪಾರುಲ್‌ ತಮ್ಮೆಲ್ಲ ಕೆಲಸಗಳನ್ನು ಬದಿಗೊತ್ತಿ ಬಟರ್‌ಫ್ಲೈಗೆ ಸಮಯ ನೀಡಿದ್ದಾರೆ. 

ಎಲ್ಲಾ ಓಕೆ, ಪಾರುಲ್‌ ಬಟರ್‌ಫ್ಲೈ ಬಿಟ್ಟು ಬೇರೆ ಯಾವ ಸಿನೆಮಾವೂ ಯಾಕೆ ಒಪ್ಪಿಕೊಳ್ಳಲಿಲ್ಲ ಎಂದು ನೀವು ಕೇಳಬಹುದು. ಪಾರುಲ್‌ ಈ ಸಿನೆಮಾ ಒಪ್ಪಿಕೊಳ್ಳುವಾಗಲೇ ಒಂದು ವಿಚಾರದಲ್ಲಿ ಪಕ್ಕಾ ಆಗಿದ್ದರಂತೆ. ಅದು ಬೇರೆ ಸಿನೆಮಾಗಳಿಗೆ ತೊಂದರೆ ಆಗಬಾರದೆಂದು. “ನಾನು ಯಾವುದಾದರೂ ಬೇರೆ ಸಿನೆಮಾವನ್ನು ಒಪ್ಪಿಕೊಂಡರೆ ಅವರು ಕೇಳಿದಾಗ ಡೇಟ್ಸ್‌ ಕೊಡಬೇಕು, ಶೂಟಿಂಗ್‌ಗೆ ಹೋಗಬೇಕು. ಇಲ್ಲದಿದ್ದರೆ ಅವರಿಗೆ ತೊಂದರೆಯಾಗುತ್ತದೆ. ನನ್ನಿಂದ ಯಾರೂ ತೊಂದರೆ ಅನುಭವಿಸೋದು ನನಗೆ ಇಷ್ಟವಿಲ್ಲ. ಆ ಕಾರಣದಿಂದಲೇ ಬಟರ್‌ಫ್ಲೈ ಮುಗಿಯುವವರೆಗೆ ಯಾವ ಚಿತ್ರವನ್ನು ಒಪ್ಪಿಕೊಳ್ಳಲಿಲ್ಲ’ ಎನ್ನುವುದು ಪಾರುಲ್‌ ಕೊಡುವ ಸ್ಪಷ್ಟನೆ.

ಬಟರ್‌ಫ್ಲೈ ಚಿತ್ರದಲ್ಲಿ ಪಾರುಲ್‌, ಪಾರ್ವತಿ ಎಂಬ ಪಾತ್ರ ಮಾಡಿದ್ದಾರೆ. ಗೋಕರ್ಣದ ಹುಡುಗಿಯಾಗಿ ಕಾಣಿಸಿಕೊಂಡಿರುವ ಪಾರುಲ್‌ಗೆ, ಈ ಚಿತ್ರ ಅದ್ಭುತ ಅನುಭವ ನೀಡಿತಂತೆ. ಇವತ್ತಿನ ಕಾಲದ ಎಲ್ಲಾ ಹೆಣ್ಣುಮಕ್ಕಳ ಪ್ರತೀಕವಾಗಿ ಪಾರ್ವತಿ ಪಾತ್ರ ಕಾಣಿಸಿಕೊಳ್ಳಲಿದೆ ಎಂಬುದು ಪಾರುಲ್‌ ಮಾತು. ಆರಂಭದಲ್ಲಿ ಈ ಚಿತ್ರವನ್ನು ಕನ್ನಡಕ್ಕೆ ತರುವಾಗ ತಾನು ನಾಯಕಿಯಾಗುತ್ತೇನೆಂಬುದು ಪಾರುಲ್‌ಗೆ ಗೊತ್ತಿರಲಿಲ್ಲವಂತೆ. ಆದರೆ, ನಿರ್ದೇಶಕ ರಮೇಶ್‌ ಅರವಿಂದ್‌ ಹಾಗೂ ತಂಡ ಹೇಳಿದ ಮೇಲೆ ನಟಿಸಲು ಒಪ್ಪಿದರಂತೆ ಪಾರುಲ್‌. ಸದ್ಯ ಪಾರುಲ್‌ ಬಟರ್‌ಫ್ಲೈ ಧ್ಯಾನದಲ್ಲಿದ್ದಾರೆ. ಇದೇ ತಿಂಗಳು ಚಿತ್ರದ ಪೋಸ್ಟರ್‌ ಬಿಡುಗಡೆಯಾಗಲಿದೆ. ಆ ನಂತರ ಚಿತ್ರದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಘೋಷಿಸಲಿದೆ.

ಟಾಪ್ ನ್ಯೂಸ್

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

Jnanpith Award: ಭೃಂಗದ ಬೆನ್ನೇರಿ ಬಂತು ಜ್ಞಾನಪೀಠ!

6

ಐರನ್‌ ಮ್ಯಾನ್: ರೀಲ್‌ ಅಲ್ಲ, ರಿಯಲ್‌ ಹೀರೋಗಳ ಕಥೆ!

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

ಹೆಸರಾಯಿತು ಕರ್ನಾಟಕ: ಮರು ನಾಮಕರಣ ಹೋರಾಟದ ಆ ದಿನಗಳು…

11

Kannada Rajyotsava: ನಿಂತ ನೆಲವೇ ಕರ್ನಾಟಕ!

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

ಎಲ್ಲಿಂದಲೋ ಬಂದು ಇಲ್ಲಿನವರೇ ಆದರು!: ಪುಸ್ತಕ ಸೇವೆಯ ಕನಸು, ಸಪ್ನದ ಮೂಲಕ ನನಸು

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

1

Sullia: ಬಿಎಸ್ಸೆನ್ನೆಲ್‌ ಟವರ್‌ಗೆ ಸೋಲಾರ್‌ ಪವರ್‌!

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

Sanju Weds Geetha 2: ಅವನು ಸಂಜು ಅವಳು ಗೀತಾ!; ಹಾಡಿನಲ್ಲಿ ಪ್ರೇಮ ಕಥನ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Ranji Trophy: ಇನ್ನಿಂಗ್ಸ್‌ ನ ಎಲ್ಲಾ 10 ವಿಕೆಟ್‌ ಕಿತ್ತು ಅನ್ಶುಲ್‌ ಕಾಂಬೋಜ್‌ ದಾಖಲೆ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.