ಚುನಾವಣೆಗೆ ಬಿಜೆಪಿಯಿಂದ ಭರ್ಜರಿ ತಯಾರಿ 

Team Udayavani, Oct 8, 2018, 6:00 AM IST

7smg81.jpg

ಶಿವಮೊಗ್ಗ: ನಿರೀಕ್ಷೆಯಂತೆ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ರಾಘವೇಂದ್ರ ಹೆಸರನ್ನು ಅಧಿಕೃತವಾಗಿ ಘೋಷಿಸಲಾಗಿದೆ. ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಇನ್ನೂ ಅಭ್ಯರ್ಥಿ ಆಯ್ಕೆ ಕಸರತ್ತು ನಡೆಸುತ್ತಿದ್ದರೆ, ಚುನಾವಣೆ ಘೋಷಣೆಯಾದ ಮರುದಿನವೇ ಅಭ್ಯರ್ಥಿ ಘೋಷಿಸುವ ಮೂಲಕ ಬಿಜೆಪಿ ಚುನಾವಣಾ ತಯಾರಿ ಆರಂಭಿಸಿದೆ.

ಉಪ ಚುನಾವಣೆ ಹಿನ್ನೆಲೆಯಲ್ಲಿ ಭಾನುವಾರ ಶಿವಮೊಗ್ಗದಲ್ಲಿ ನಡೆದ ಬಿಜೆಪಿ ಮುಖಂಡರ ಸಭೆಯಲ್ಲಿ ಬಿ.ವೈ.ರಾಘವೇಂದ್ರ ಅವರನ್ನು ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಶಾಸಕ ಕೆ.ಎಸ್‌. ಈಶ್ವರಪ್ಪ ಅವರು ಸಭೆಯಲ್ಲಿ ಅಭ್ಯರ್ಥಿ ಹೆಸರು ಘೋಷಣೆ ಮಾಡಿದ್ದು ವಿಶೇಷ.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಶಾಸಕರು, ಮುಖಂಡರ ಸಭೆ ನಡೆಸಲಾಯಿತು. ಅಭ್ಯರ್ಥಿ ವಿಚಾರವಾಗಿ ಚರ್ಚೆ ನಡೆದು ರಾಘವೇಂದ್ರ ಅವರನ್ನು ಒಮ್ಮತದಿಂದ ಆಯ್ಕೆ ಮಾಡಲಾಯಿತು. ಬಿ.ಎಸ್‌. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಶಾಸಕ ಕೆ.ಎಸ್‌. ಈಶ್ವರಪ್ಪ ಹೆಸರು ಘೋಷಿಸಿದರು.

ಈ ಹಿಂದೆ ಲೋಕಸಭೆ ಚುನಾವಣೆ ಅಭ್ಯರ್ಥಿಗಳ ವಿಚಾರವಾಗಿ ದತ್ತಾತ್ರಿ, ಚನ್ನಬಸಪ್ಪ ಇತರರ ಹೆಸರನ್ನು ಮುಂದೆ ಬಿಟ್ಟಿದ್ದ ಈಶ್ವರಪ್ಪ ಅವರು, ಭಾನುವಾರ ಯಾವುದೇ ತಕಾರರು ಇಲ್ಲದೆ ರಾಘವೇಂದ್ರ ಅವರ ಹೆಸರನ್ನು ಅಂತಿಮಗೊಳಿಸಿದರು. ಶನಿವಾರ ಬಿ.ವೈ.ರಾಘವೇಂದ್ರ ಅವರ ಹೆಸರನ್ನು ಯಡಿಯೂರಪ್ಪ ಅವರು ಶಿಕಾರಿಪುರದಲ್ಲಿ ಘೋಷಣೆ ಮಾಡಿದಾಗ ಈಶ್ವರಪ್ಪ ಇದಕ್ಕೆ ವಿರೋಧ ವ್ಯಕ್ತಪಡಿಸಬಹುದು ಎನ್ನಲಾಗಿತ್ತು. ಆದರೆ, ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಸಣ್ಣ ಅಪಸ್ವರವೂ ಕೇಳಿ ಬಂದಿಲ್ಲ.
ಸಭೆಯಲ್ಲಿ ಡಿ.ಎಚ್‌.ಶಂಕರಮೂರ್ತಿ, ಕೆ.ಎಸ್‌.ಈಶ್ವರಪ್ಪ, ಕುಮಾರ್‌ ಬಂಗಾರಪ್ಪ, ಹರತಾಳು ಹಾಲಪ್ಪ, ಕೋಟ ಶ್ರೀನಿವಾಸ ಪೂಜಾರಿ, ಬೆಳ್ಳಿ ಪ್ರಕಾಶ್‌, ಅಶೋಕ ನಾಯ್ಕ ಇತರರು ಇದ್ದರು.

ಇಂದು ಉಳಿದ ಕ್ಷೇತ್ರಕ್ಕೆ ಅಭ್ಯರ್ಥಿಗಳ ಆಯ್ಕೆ:
ಸುದ್ದಿಗಾರರ ಜತೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ, ಲೋಕಸಭಾ ಉಪ ಚುನಾವಣೆಗೆ ಶಿವಮೊಗ್ಗ ಕ್ಷೇತ್ರದ ಅಭ್ಯರ್ಥಿ ಘೋಷಿಸಲಾಗಿದ್ದು, ಇನ್ನೆರಡು ಕ್ಷೇತ್ರಗಳಿಗೆ ನಾಳೆ(ಸೋಮವಾರ) ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಲಾಗುವುದು ಎಂದರು.

ಸಭೆಯಲ್ಲಿ ಶಿವಮೊಗ್ಗ ಕ್ಷೇತ್ರಕ್ಕೆ ಬಿ.ವೈ.ರಾಘವೇಂದ್ರ ಅವರ ಹೆಸರನ್ನು ಈಶ್ವರಪ್ಪ ಅವರು ಪ್ರಸ್ತಾವನೆ ಮಾಡಿ ಭಾನುಪ್ರಕಾಶ್‌ ಅನುಮೋದಿಸಿದ್ದಾರೆ. ಅ.15ರಂದು ರಾಘವೇಂದ್ರ ನಾಮಪತ್ರ ಸಲ್ಲಿಸಲಿದ್ದಾರೆ. ನಾಳೆ ಮಂಡ್ಯ, ಬಳ್ಳಾರಿ ಹಾಗೂ ಉಳಿದ ವಿಧಾನಸಭೆ ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಕೇಂದ್ರಕ್ಕೆ ಕಳುಹಿಸಲಾಗುವುದು ಎಂದರು.

ಬಳ್ಳಾರಿಯಲ್ಲಿ ಅಭ್ಯರ್ಥಿ ಇದ್ದಾರೆ. ಮಂಡ್ಯದಲ್ಲೂ ಸಹ ಒಳ್ಳೆಯ ಅಭ್ಯರ್ಥಿಗಾಗಿ ಹುಡುಕಾಟ ನಡೆಸಿ, ಕಣಕ್ಕಿಳಿಸಲಾಗುವುದು. ದೊಡ್ಡ ಅಂತರದಿಂದ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಬೇಕಿದೆ. ರಾಜ್ಯ ಸರಕಾರದ ವೈಫಲ್ಯಗಳನ್ನು ಜನರಿಗೆ ಮನವರಿಕೆ ಮಾಡಿಕೊಟ್ಟರೆ ಸಾಕು. ಜನ ಬಿಜೆಪಿಗೆ ಮತ ಹಾಕುತ್ತಾರೆ. ಚುನಾವಣೆ ವೇಳೆಗೆ ರಾಜ್ಯ ಸರಕಾರ ಏನಾಗಲಿದೆ ಎಂಬುದು ಗೊತ್ತಾಗಲಿದೆ ಎಂದರು.
ಮುಂದಿನ ಲೋಕಸಭೆ ಚುನಾವಣೆಯಲ್ಲಿ ಈಗಿನದಕ್ಕಿಂತ ಹೆಚ್ಚಿನ ಸ್ಥಾನ ಗಳಿಸಿ ಕೇಂದ್ರಕ್ಕೆ ಕಳುಹಿಸಲಾಗುವುದು. ಸಮೀಕ್ಷೆಯಲ್ಲಿ 19 ಸ್ಥಾನ ಗೆಲ್ಲಬಹುದು ಎಂದು ಇದೆ. ಆದರೆ 23 ಸ್ಥಾನಗಳನ್ನು ಗೆಲ್ಲಬೇಕಿದೆ. ಚುನಾವಣೆ ನಮಗೆ ಸವಾಲಾಗಿದೆ. ಮಹಿಳಾ ಮೋರ್ಚಾ ಸೇರಿದಂತೆ ಎಲ್ಲ ಮೋರ್ಚಾಗಳನ್ನು ಬಲಪಡಿಸಬೇಕಿದೆ ಎಂದರು.

ಚುನಾವಣೆ ಅಗತ್ಯವಿರಲಿಲ್ಲ:
ಬಳಿಕ, ಶಿಕಾರಿಪುರದಲ್ಲಿ ಮಾತನಾಡಿ, ಕೇವಲ 5 ತಿಂಗಳಿಗೋಸ್ಕರ ಉಪ ಚುನಾವಣೆ ನಡೆಯುತ್ತಿದೆ. ಈ ಚುನಾವಣೆ ಕಾಂಗ್ರೆಸ್‌, ಜೆಡಿಎಸ್‌, ಬಿಜೆಪಿಗೂ ಅನಗತ್ಯವಾಗಿದೆ. ಆದರೆ, ಚುನಾವಣಾ ಆಯೋಗ ಯಾಕೆ ಈ ನಿರ್ಧಾರ ಕೈಗೊಂಡಿದೆ ಎಂಬುದು ಗೊತ್ತಿಲ್ಲ. ಮೋದಿ ಸರಕಾರದ ಸಾಧನೆಗಳನ್ನು ಇಟ್ಟುಕೊಂಡು ಉಪ ಚುನಾವಣೆ ಎದುರಿಸುತ್ತಿದ್ದೇವೆ. ಜೆಡಿಎಸ್‌ ಹಾಗೂ ಕಾಂಗ್ರೆಸ್‌ ಹೊಂದಾಣಿಕೆ ಮಾಡಿಕೊಂಡರೂ ಬಿಜೆಪಿ ಮೇಲೆ ಯಾವ ಪರಿಣಾಮವೂ ಆಗಲ್ಲ ಎಂದರು.

ಟಾಪ್ ನ್ಯೂಸ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Upendra: ʼಯುಐʼಗೆ ಸ್ಯಾಂಡಲ್‌ವುಡ್‌ ಸಾಥ್‌; ಉಪೇಂದ್ರ ಚಿತ್ರ ನೋಡಲು ಕಾತುರ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

BYV-Modi

Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ

Vidhana-Parishat

Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

BBK11: ಕೊನೆಗೂ ಬಿಗ್‌ ಬಾಸ್‌ ಬಿಟ್ಟು ಬಂದಿದ್ದಕ್ಕೆ ಕಾರಣ ಬಹಿರಂಗಪಡಿಸಿದ ಗೋಲ್ಡ್‌ ಸುರೇಶ್

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

ಕತ್ತರಿಸಿದ ಮೂಗನ್ನು ಚೀಲದಲ್ಲಿ ಇಟ್ಟು ಆಸ್ಪತ್ರೆಗೆ ಓಡಿ ಬಂದ ಮಹಿಳೆ, ಬೆಚ್ಚಿ ಬಿದ್ದ ವೈದ್ಯರು

1

Belthangady: ಕುತ್ಲೂರು ನಿವಾಸಿಗಳ ಕೂಗು ಅರಣ್ಯರೋದನ!

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್

28 cricketers who said goodbye in 2024; Here is the list

Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.