ಬಾದಾಮಿ ಕುರಿತ ಸಾಕ್ಷ್ಯಚಿತ್ರ
Team Udayavani, Oct 8, 2018, 6:00 AM IST
ನವದೆಹಲಿ: ಕರ್ನಾಟಕದ ಬಾದಾಮಿ ಸೇರಿದಂತೆ ದೇಶದ 12 ಪಾರಂಪರಿಕ ನಗರಗಳಲ್ಲಿ ಕಳೆದ ನಾಲ್ಕು ವರ್ಷಗಳಲ್ಲಿ ಸರ್ಕಾರ ನಡೆಸಿರುವ ಅಭಿವೃದ್ಧಿ ಕಾರ್ಯಗಳನ್ನು ಜನರಿಗೆ ತಿಳಿಸುವ ಉದ್ದೇಶದಿಂದ ಸಾಕ್ಷ್ಯಚಿತ್ರಗಳನ್ನು ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
2015ರ ಜನವರಿಯಲ್ಲಿ ರಾಷ್ಟ್ರೀಯ ಪಾರಂಪರಿಕ ನಗರ ಅಭಿವೃದ್ಧಿ ಯೋಜನೆ (ಹೃದಯ್) ಅಡಿಯಲ್ಲಿ ಕರ್ನಾಟಕದ ಬಾದಾಮಿ, ರಾಜಸ್ಥಾನದ ಅಜ್ಮಿರ್, ಅಮರಾವತಿ, ಅಮೃತಸರ, ದ್ವಾರಕಾ, ಗಯಾ, ಕಂಚೀಪುರಂ, ಮಥುರಾ, ಪುರಿ, ವಾರಾಣಸಿ, ವೆಲಂಕಣಿ ಮತ್ತು ವಾರಂಗಲ್ ಅನ್ನು ಆಯ್ಕೆ ಮಾಡಿಕೊಳ್ಳಲಾಗಿತ್ತು. ಈ ನಗರಗಳಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿದ್ದು, ಅದು ಪೂರ್ಣಗೊಂಡ ಕೂಡಲೇ ರಾಷ್ಟ್ರೀಯ ಚಲನಚಿತ್ರ ಅಭಿವೃದ್ಧಿ ನಿಗಮ(ಎನ್‌ಎಫ್ಡಿಸಿ)ದ ಸಹಯೋಗದಲ್ಲಿ ಸಾಕ್ಷ್ಯಚಿತ್ರ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಗೃಹ ಮತ್ತು ನಗರಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
500 ಕೋಟಿ ರೂ. ವೆಚ್ಚದ ಹೃದಯ್ ಯೋಜನೆಯಡಿ ಒಟ್ಟು 63 ಪ್ರಾಜೆಕ್ಟ್ಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಆ ಪೈಕಿ 20 ಅನ್ನು ಈಗಾಗಲೇ ಪೂರ್ಣಗೊಳಿಸಲಾಗಿದೆ. 10 ರಿಂದ 15 ಯೋಜನೆಗಳು ಪ್ರಸಕ್ತ ತಿಂಗಳು ಪೂರ್ಣಗೊಳ್ಳಲಿದೆ. ಸಾಕ್ಷ್ಯಚಿತ್ರಗಳನ್ನು ನಿರ್ಮಿಸುವ ಮೂಲಕ ನಗರಗಳಲ್ಲಿ ಹೇಗೆ ಬದಲಾವಣೆಗಳಾದವು ಎಂಬುದನ್ನು ಬಿಂಬಿಸ ಲಿದ್ದೇವೆ. ರಸ್ತೆ, ಕುಡಿಯುವ ನೀರಿನ ಸೌಲಭ್ಯ, ಬೀದಿ ಬದಿ ಕುಳಿತುಕೊಳ್ಳಲು ಬೆಂಚುಗಳ ನಿರ್ಮಾಣ, ಬೀದಿ ದೀಪ, ನೈರ್ಮಲ್ಯ, ಚರಂಡಿ, ಮಾಹಿತಿ ಕಿಯೋಸ್ಕ್ ಇತ್ಯಾದಿ ಸೌಲಭ್ಯಗಳನ್ನೂ ಪಾರಂಪರಿಕ ನಗರಗಳಲ್ಲಿ ಕಲ್ಪಿಸಲಾಗಿದೆ ಎಂದಿದ್ದಾರೆ ಅಧಿಕಾರಿಗಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.