ಬಿಹಾರ: ಹೆಮ್ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ: ಸುಪ್ರೀಂ ಕೆಂಡಾಮಂಡಲ
Team Udayavani, Oct 8, 2018, 3:44 PM IST
ಹೊಸದಿಲ್ಲಿ : ಬಿಹಾರದ ಮುಜಫರನಗದ ಆಸರೆ ಗೃಹಗಳಲ್ಲಿ ಮತ್ತು ಸುಪೋಲ್ ಶಾಲಾ ಹೆಣ್ಣು ಮಕ್ಕಳ ಮೇಲೆ ಈ ರೀತಿಯ ಲೈಂಗಿಕ ದೌರ್ಜನ್ಯ ನಡೆಯಲು ಹೇಗೆ ಸಾಧ್ಯ ಎಂದು ಇಂದು ಸೋಮವಾರ ಕೆಂಡಾಮಂಡಲವಾಗಿ ಪ್ರಶ್ನಿಸಿರುವ ಸುಪ್ರೀಂ ಕೋರ್ಟ್, ಬಿಹಾರದಲ್ಲಿ ಹೆಮ್ಮಕ್ಕಳ ಮೇಲೆ ನಡೆಯುತ್ತಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ತೀವ್ರ ಆಘಾತ, ಕಳವಳ ವ್ಯಕ್ತಪಡಿಸಿದೆ.
“ಪ್ರತಿಕೆಗಳಲ್ಲಿ ಪ್ರಕಟಗೊಂಡಿರುವ ಈ ಕುರಿತ ವರದಿಗಳು ನಿಜಕ್ಕೂ ಒಳ್ಳೆಯದಲ್ಲ. ಶಾಲಾ ಹುಡುಗಿಯರ ಅಸ್ಥಿಪಂಜರ ಪತ್ತೆಯಾಗಿರುವುದು, ಲೈಂಗಿಕ ದೌರ್ಜನ್ಯಕ್ಕೆ ಗುರಿಯಾಗುವುದನ್ನು ತಪ್ಪಿಸಿಕೊಳ್ಳಲು ಯತ್ನಿಸಿದ 34 ಹೆಮ್ಮಕ್ಕಳನ್ನು ಹೊಡೆದು ಹಲ್ಲೆ ಮಾಡಿರುವುದು, ಇಂಥವೆಲ್ಲ ದಿನ ನಿತ್ಯ ಎಂಬಂತೆ ಏಕೆ ಸಂಭವಿಸುತ್ತಿವೆ; ಹೆಮ್ಮಕ್ಕಳನ್ನು ನೋಡಿ ಕೊಳ್ಳುವ ರೀತಿಯ ಇದೇ ಏನು ? ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.
ಸುಪೋಲ್ ಘಟನೆ ಸಂಬಂಧ ಪೊಲೀಸರು ಈ ವರೆಗೆ ಓರ್ವ ಅಪ್ರಾಪ್ತ ವಯಸ್ಸಿನ ಬಾಲಕ ಮತ್ತು ಓರ್ವ ಮಹಿಳೆ ಸೇರಿದಂತೆ ಒಟ್ಟು 9 ಮಂದಿಯನ್ನು ಬಂಧಿಸಿದ್ದಾರೆ.
ಮುಜಫರನಗರದ ಆಸರೆ ಗೃಹಗಳಲ್ಲಿ ಸುಮಾರು 40 ಬಾಲಕಿಯರ ಮೇಲೆ ಅತ್ಯಾಚಾರ,ಲೈಂಗಿಕ ದೌರ್ಜನ್ಯ ನಡೆದಿತ್ತು. ಆ ಪೈಕಿ ಒಬ್ಟಾಕೆಯನ್ನು ಕೊಲ್ಲಲಾಗಿದ್ದು ಅನಂತರ ಆಕೆಯ ಕೊಲೆಯನ್ನು ಮುಚ್ಚಿ ಹಾಕಲು ಆಕೆಯ ಮೃತ ದೇಹವನ್ನು ಹುಗಿದು ಹಾಕಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
ಶೋರೂಮ್ ನಿಂದ ಕದ್ದು ಬಾಂಗ್ಲಾದೇಶಕ್ಕೆ ಕಳ್ಳಸಾಗಣೆ ಮಾಡುತ್ತಿದ್ದ 2 ಕೋಟಿ ಮೌಲ್ಯದ ಐಫೋನ್ ವಶ
Panaji: ಮಣಿರತ್ನಂರ ಕ್ಯಾಮೆರಾ ಕಣ್ಣು ಹಂಪಿ ಕಡೆಗೆ ?
Jharkhand Polls: ಬುಡಕಟ್ಟು ರಾಜ್ಯದಲ್ಲಿ ಅಧಿಕಾರದತ್ತ ಇಂಡಿಯಾ ಒಕ್ಕೂಟ; ಬಿಜೆಪಿಗೆ ಹಿನ್ನಡೆ
MUST WATCH
ಹೊಸ ಸೇರ್ಪಡೆ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Sandur Result: ಭದ್ರಕೋಟೆಯಲ್ಲಿ ಮತ್ತೆ ಗೆದ್ದ ಕಾಂಗ್ರೆಸ್: ಇಲ್ಲಿದೆ ಮತಎಣಿಕೆಯ ಪೂರ್ಣವಿವರ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.