ಚುನಾವಣೆ ನಡೆದರೂ ಅಸ್ತಿತ್ವಕ್ಕೆ ಬಾರದ ಆಡಳಿತ ವ್ಯವಸ್ಥೆ 


Team Udayavani, Oct 9, 2018, 6:05 AM IST

tumkur.jpg

ಬೆಂಗಳೂರು: ಮೂರು ಮಹಾನಗರ ಪಾಲಿಕೆಗಳು ಸೇರಿ ರಾಜ್ಯದ 105 ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆದು ತಿಂಗಳು ಮುಗಿದಿದೆ. ಆದರೆ, ಈವರೆಗೆ ಚುನಾಯಿತ ಆಡಳಿತ ವ್ಯವಸ್ಥೆ ಅಸ್ತಿತ್ವಕ್ಕೆ ಬಂದಿಲ್ಲ.

ಇದರಿಂದಾಗಿ, ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಆಕಾಕ್ಷಿಂಗಳಿಗೆ “ಅಧಿಕಾರ ಭಾಗ್ಯ’ ಸಿಗುತ್ತಿಲ್ಲ. ಚುನಾಯಿತ ಆಡಳಿತ ವ್ಯವಸ್ಥೆ ಇಲ್ಲದೇ ಇರುವುದರಿಂದ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ ಅಭಿವೃದ್ದಿ ಕಾಮಗಾರಿಗಳಿಗೆ “ಗ್ರಹಣ’ ಹಿಡಿದಂತಾಗಿದೆ.

ಅಧ್ಯಕ್ಷ-ಉಪಾಧ್ಯಕ್ಷರ ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಕೆಲವರು ನ್ಯಾಯಾಲಯದ ಮೆಟ್ಟಿಲು ಹತ್ತಿರುವುದರಿಂದ ಸದ್ಯ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನೆನೆಗುದಿಗೆ ಬಿದ್ದಿದೆ. ಚುನಾವಣೆ ನಡೆದ 105 ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲು ಪಟ್ಟಿಯನ್ನು ಫ‌ಲಿತಾಂಶದ ದಿನವಾದ ಸೆ.3ರಂದು ರಾಜ್ಯ ಸರ್ಕಾರ ಪ್ರಕಟಿಸಿತ್ತು. ಫ‌ಲಿತಾಂಶದ ಚಿತ್ರಣ ನಿಚ್ಚಳವಾದ ಮೇಲೆ ಸೆ.6ರಂದು ಪರಿಷ್ಕೃತ ಮೀಸಲು ಪಟ್ಟಿ ಪ್ರಕಟಿಸಲಾಯಿತು. ಈ ಪರಿಷ್ಕೃತ ಮೀಸಲು ಪಟ್ಟಿಯನ್ನು ಪ್ರಶ್ನಿಸಿ ಉಡುಪಿ ಜಿಲ್ಲೆ ಕಾರ್ಕಳದ ಸುಮಾ ಹಾಗೂ ಇತರರು ಹೈಕೋರ್ಟ್‌ಗೆ ತಕರಾರು ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೇ ಹೈಕೋರ್ಟ್‌ನ ಧಾರವಾಡ ನ್ಯಾಯಪೀಠದಲ್ಲೂ ಇದೇ ರೀತಿಯ ತಕರಾರು ಅರ್ಜಿಯೊಂದು ಸಲ್ಲಿಕೆಯಾಗಿದೆ.

ರಾಜಕೀಯ ದುರುದ್ದೇಶ: ರಾಜ್ಯ ಸರ್ಕಾರ ಸೆ.6ರಂದು ಹೊರಡಿಸಿದ ಪರಿಷ್ಕೃತ ಮೀಸಲು ಪಟ್ಟಿ ಸಂಪೂರ್ಣವಾಗಿ ರಾಜಕೀಯ ದುರುದ್ದೇಶದಿಂದ ಕೂಡಿದೆ. ಎರಡನೇ ಅಧಿಸೂಚನೆ ಹೊರಡಿಸಲು ಕಾನೂನಿನಲ್ಲಿ ಅವಕಾಶವಿಲ್ಲ. ಅದಾಗ್ಯೂ ಪರಿಷ್ಕೃತ ಪಟ್ಟಿ ಪ್ರಕಟಿಸಲಾಗಿದೆ. ಬಿಜೆಪಿ ಅಭ್ಯರ್ಥಿಗಳು ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳನ್ನು ಗಿಟ್ಟಿಸಿಕೊಳ್ಳುವ ನಿಚ್ಚಳ ಅವಕಾಶಗಳಿರುವ ಸ್ಥಳೀಯ ಸಂಸ್ಥೆಗಳ ಮೀಸಲು ಪಟ್ಟಿಯನ್ನು ಬದಲಿಸಲಾಗಿದೆ. ಬಿಜೆಪಿ ಪಕ್ಷವನ್ನು ಅಧಿಕಾರದಿಂದ ದೂರ ಇಡಲು ಸರ್ಕಾರ ಈ ರೀತಿ ಮಾಡಿದೆ ಅನ್ನವುದು ಅರ್ಜಿದಾರರ ಆರೋಪವಾಗಿದೆ.

ಹಾಗಾಗಿ, ಸೆ.6ರ ಅಧಿಸೂಚನೆಯನ್ನು ರದ್ದುಪಡಿಸಿ, ಸೆ.3ರ ಅಧಿಸೂಚನೆಯಂತೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಸುವಂತೆ ಸರ್ಕಾರಕ್ಕೆ ನಿರ್ದೇಶನ ಕೊಡಬೇಕು ಎಂದು ಅರ್ಜಿದಾರರು ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ.

ರಾಜ್ಯದ ಮೈಸೂರು, ತುಮಕೂರು ಹಾಗೂ ಶಿವಮೊಗ್ಗ ಮಹಾನಗರ ಪಾಲಿಕೆಗಳು ಸೇರಿ 29 ನಗರಸಭೆ, 53 ಪುರಸಭೆ ಹಾಗೂ 20 ಪಟ್ಟಣ ಪಂಚಾಯಿತಿಗಳು ಸೇರಿ ಒಟ್ಟು 105 ನಗರ ಸ್ಥಳೀಯ ಸಂಸ್ಥೆಗಳಿಗೆ ಆಗಸ್ಟ್‌ 31ರಂದು ಮತದಾನ ನಡೆದು, ಸೆ.3ರಂದು ಫ‌ಲಿತಾಂಶ ಹೊರಬಿದ್ದಿತ್ತು. ಈಗ ತಿಂಗಳು ಕಳೆದಿದ್ದರೂ, ಸ್ಥಳೀಯ ಸಂಸ್ಥೆಗಳಿಗೆ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ನಡೆದಿಲ್ಲ.

ಪ್ರತಿಕ್ರಿಯೆಗೆ ನಕಾರ: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳ ಮೀಸಲು ಪಟ್ಟಿ ವಿಚಾರ ಹೈಕೋರ್ಟ್‌ನಲ್ಲಿ ವಿಚಾರಣಾ ಹಂತದಲ್ಲಿ ಬಾಕಿ ಇರುವುದರಿಂದ ಆ ಬಗ್ಗೆ ಪ್ರತಿಕ್ರಿಯೆ ನೀಡಲು ನಗರಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳು ನಿರಾಕರಿಸಿದ್ದಾರೆ.

ಇಂದು ಸಿಗುತ್ತಾ ಮುಕ್ತಿ?
ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಗಳಿಗೆ ಮೀಸಲು ನಿಗದಿಪಡಿಸಿ ಸೆ.6ರಂದು ಹೊರಡಿಸಿದ್ದ ಪರಿಷ್ಕೃತ ಅಧಿಸೂಚನೆ ವಾಪಸ್‌ ಪಡೆದು, ಈ ಹಿಂದೆ ಸೆ.3ರಂದು ಹೊರಡಿಸಿದ್ದ ಮೀಸಲು ಪಟ್ಟಿಯನ್ನೇ ಮುಂದುವರಿಸುವಂತೆ ಸರ್ಕಾರಕ್ಕೆ ಸಲಹೆ ನೀಡಿದ್ದು, ಅದರಂತೆ ಸರ್ಕಾರದ ನಿಲುವು ಏನೆಂದು ತಿಳಿಸುತ್ತೇನೆ ಎಂದು ಹೈಕೋರ್ಟ್‌ಗೆ ಅಡ್ವೋಕೇಟ್‌ ಜನರಲ್‌ ಹೇಳಿದ್ದರು. ಅದರಂತೆ, ಅ.9 (ಮಂಗಳವಾರ) ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ತನ್ನ ನಿಲುವು ಸ್ಪಷ್ಟಪಡಿಸುವ ಸಾಧ್ಯತೆಯಿದೆ. ಈ ಮೂಲಕ ನೆನೆಗುದಿಗೆ ಬಿದ್ದಿರುವ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆ ಪ್ರಕ್ರಿಯೆಗೆ ಮುಕ್ತಿ ಸಿಗುತ್ತಾ ಅನ್ನೋದು ಕಾದು ನೋಡಬೇಕಿದೆ.

ಅಧಿಕಾರ ಚುಕ್ಕಾಣಿಯ ಲೆಕ್ಕಚಾರ
ಒಟ್ಟು 105 ನಗರ ಸ್ಥಳೀಯ ಸಂಸ್ಥೆಗಳಲ್ಲಿ ಬಿಜೆಪಿ 27, ಕಾಂಗ್ರೆಸ್‌ 31, ಜೆಡಿಎಸ್‌ 12 ಕಡೆ ನೇರ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದು, 30 ಸ್ಥಳೀಯ ಸಂಸ್ಥೆಗಳಲ್ಲಿ ಅತಂತ್ರ ಪರಿಸ್ಥಿತಿಯಿದೆ. ಬೆಳಗಾವಿ ಜಿಲ್ಲೆಯ 5 ನಗರ ಸ್ಥಳೀಯ ಸಂಸ್ಥೆಗಳು ಪಕ್ಷೇತರರ ಪಾಲಾಗಿವೆ. ಈ ಆಧಾರದಲ್ಲಿ 42 ಕಡೆ ಮೈತ್ರಿ ಸರ್ಕಾರ ಅಧಿಕಾರ ದಕ್ಕಲಿದೆ. ಅತಂತ್ರ ಸ್ಥಿತಿ ನಿರ್ಮಾಣವಾಗಿರುವ 30 ಸ್ಥಳೀಯ ಸಂಸ್ಥೆಗಳ ಪೈಕಿ ಯಾರಿಗೆ ಎಷ್ಟು ದಕ್ಕಲಿದೆ ಎಂದು ಕಾದು ನೋಡಬೇಕಿದೆ. ಮೂರು ಮಹಾನಗರ ಪಾಲಿಕೆಗಳ ಪೈಕಿ ಶಿವಮೊಗ್ಗ ಮಹಾನಗರ ಪಾಲಿಕೆ ಬಿಜೆಪಿ ತೆಕ್ಕೆಗೆ ಹೋಗಿದ್ದು, ಮೈಸೂರು ಹಾಗೂ ತುಮಕೂರು ಮಹಾನಗರ ಪಾಲಿಕೆಗಳಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದೆ. ಇಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮಾಡಿಕೊಳ್ಳುವುದು ಬಹುತೇಕ ಖಚಿತವಾಗಿದೆ.

ಅದೇ ರೀತಿ 29 ನಗರಸಭೆಗಳ ಪೈಕಿ 9 ಕಡೆ ಬಿಜೆಪಿ, 5 ಕಡೆ ಕಾಂಗ್ರೆಸ್‌, 2 ಕಡೆ ಜೆಡಿಎಸ್‌ ನಿಚ್ಚಳ ಸಂಖ್ಯಾಬಲ ಹೊಂದಿದ್ದು, 12 ಕಡೆ ಅತಂತ್ರ ಸ್ಥಿತಿ ಇದೆ. 2 ಕಡೆ ಪಕ್ಷೇತರರು ಅಧಿಕಾರ ಹಿಡಿಯಲಿದ್ದಾರೆ. 53 ಪುರಸಭೆಗಳ ಪೈಕಿ 10ರಲ್ಲಿ ಬಿಜೆಪಿ, 19ರಲ್ಲಿ ಕಾಂಗ್ರೆಸ್‌, 8ರಲ್ಲಿ ಜೆಡಿಎಸ್‌ ನೇರವಾಗಿ ಅಧಿಕಾರದ ಚುಕ್ಕಾಣಿ ಹಿಡಿಯಲಿವೆ. 14 ಕಡೆ ಅತಂತ್ರ ಸ್ಥಿತಿ ಇದ್ದು,  2 ಕಡೆ ಪಕ್ಷೇತರರು ಆಡಳಿತ ನಡೆಸಲಿದ್ದಾರೆ. 20 ಪಟ್ಟಣ ಪಂಚಾಯಿತಿಗಳಲ್ಲಿ ತಲಾ 7ರಲ್ಲಿ ಕಾಂಗ್ರೆಸ್‌ ಹಾಗೂ ಬಿಜೆಪಿ ಪಾಲಾಗಿದ್ದರೆ, 2 ಜೆಡಿಎಸ್‌ ಪಾಲಾಗಿವೆ. 3 ಕಡೆ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು, 1 ಕಡೆ ಪಕ್ಷೇತರದ್ದೆ ಆಡಳಿತ. ಮೀಸಲು ಪಟ್ಟಿ ಅಂತಿಮಗೊಂಡ ಬಳಿಕ ಈ ಲೆಕ್ಕಚಾರದಲ್ಲಿ ಒಂದಿಷ್ಟು ವ್ಯತ್ಯಾಸಗಳು ಆಗುವುದನ್ನು ಅಲ್ಲಗಳೆಯಲಾಗದು.

ಆಡಳಿತಾಧಿಕಾರಿಗಳ “ದರ್ಬಾರು’
ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗಳ ಮೀಸಲು ಪಟ್ಟಿ ಹೈಕೋರ್ಟ್‌ನಲ್ಲಿ ಇತ್ಯರ್ಥಗೊಳ್ಳಬೇಕಾಗಿರುವುದರಿಂದ ಎಲ್ಲ 105 ನಗರ ಸ್ಥಳೀಯ ಸಂಸ್ಥೆಗಳಿಗೆ ರಾಜ್ಯ ಸರ್ಕಾರ ಆಡಳಿತಾಧಿಕಾರಿಗಳನ್ನು ನೇಮಕ ಮಾಡಿದೆ. ಚುನಾಯಿತ ಆಡಳಿತ ವ್ಯವಸ್ಥೆ ಇಲ್ಲದ ಕಾರಣ ಸದ್ಯ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಆಡಳಿತಾಧಿಕಾರಿಗಳದ್ದೇ “ದರ್ಬಾರು’ ನಡೆಯುತ್ತಿದೆ. ಇದು ಆಡಳಿತ ವ್ಯವಸ್ಥೆ ಹಾಗೂ ಅಭಿವೃದ್ಧಿ ಕಾಮಗಾರಿಗಳ ಮೇಲೆ ಪರಿಣಾಮ ಬೀರುತ್ತಿದೆ ಎಂದು ಹೇಳಲಾಗುತ್ತಿದೆ.

“ಎರಡನೇ ಅಧಿಸೂಚನೆಗೆ ಕಾನೂನಿನಲ್ಲಿ ಅವಕಾಶವಿಲ್ಲ. ಹಾಗಿದ್ದರೂ, ರಾಜ್ಯ ಸರ್ಕಾರ ಸೆ.6ರಂದು ಪರಿಷ್ಕೃತ ಪಟ್ಟಿ ಪ್ರಕಟಿಸಿದೆ. ಇದು ರಾಜಕೀಯ ಪ್ರೇರಿತ ಮತ್ತು ದುರುದ್ದೇಶಪೂರ್ವಕವಾಗಿದೆ ಅನ್ನುವುದು ನಮ್ಮ ಆರೋಪ. ಆದ್ದರಿಂದ ಎರಡನೇ ಅಧಿಸೂಚನೆ ರದ್ದುಪಡಿಸಿ, ಮೊದಲ ಅಧಿಸೂಚನೆಯಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂಬುದು ನಮ್ಮ ಮನವಿ. ಅದಕ್ಕಾಗಿ ಹೈಕೋರ್ಟ್‌ ಮೆಟ್ಟಿಲೇರಿದ್ದೇವೆ. ನ್ಯಾಯ ಸಿಗುವ ಭರವಸೆ ನಮಗಿದೆ’.
– ಎಂ.ಕೆ. ವಿಜಯಕುಮಾರ್‌, ಅರ್ಜಿದಾರರ ಪರ ವಕೀಲರು.

– ರಫೀಕ್‌ ಅಹ್ಮದ್‌

ಟಾಪ್ ನ್ಯೂಸ್

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: C.T. Ravi arrest case shifted to Bengaluru

Belagavi: ಸಿ.ಟಿ.ರವಿ ಬಂಧನ ಪ್ರಕರಣ ಬೆಂಗಳೂರಿಗೆ ಸ್ಥಳಾಂತರ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

Chikkmagalur: ಸಿ.ಟಿ ರವಿ ಬಂಧನ ಖಂಡಿಸಿ ಪ್ರತಿಭಟನೆ; ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

Shimoga; ಇದು ಸಿ.ಟಿ.ರವಿ ಅವರನ್ನು ಸದೆಬಡಿಯುವ ಪ್ರಯತ್ನ;ಶಾಸಕ ಚನ್ನಬಸಪ್ಪ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

CT Ravi case:ಬೆಳಗಾವಿ ಕೋರ್ಟ್‌ ನಲ್ಲಿ Bailಗಾಗಿ ವಾದ ಮಂಡನೆ-ವಿಚಾರಣೆ 3ಗಂಟೆಗೆ ಮುಂದೂಡಿಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.