ಬಿಜೆಪಿ ಉಸ್ತುವಾರಿಗಳ ನೇಮಕ
Team Udayavani, Oct 10, 2018, 10:26 AM IST
ಬೆಂಗಳೂರು: ಉಪಚುನಾವಣೆ ನಡೆಯುವ ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳನ್ನು ನೇಮಿಸಲಾಗಿದ್ದು, ವಿವರ ಹೀಗಿದೆ.
ಶಿವಮೊಗ್ಗ ಕ್ಷೇತ್ರ ಉಸ್ತುವಾರಿ: ಶಾಸಕರಾದ ಕೆ.ಎಸ್.ಈಶ್ವರಪ್ಪ, ಸುನೀಲ್ ಕುಮಾರ್, ಪಿ.ರಾಜೀವ್, ಸಂಸದರಾದ ಜಿ. ಎಂ.ಸಿದ್ದೇಶ್ವರ್, ಶಿವಕುಮಾರ್ ಉದಾಸಿ, ಮಾಜಿ ಸಚಿವ ಡಿ.ಎನ್.ಜೀವರಾಜ್.
ಬಳ್ಳಾರಿ ಕ್ಷೇತ್ರದ ಉಸ್ತುವಾರಿ: ಕೇಂದ್ರ ಸಚಿವ ರಮೇಶ್ ಜಿಗಜಿಣಗಿ, ಶಾಸಕರಾದ ಬಿ. ಶ್ರೀರಾಮುಲು, ವಿ.ಸೋಮಣ್ಣ, ಬಸವರಾಜ ಬೊಮ್ಮಾಯಿ, ಸಿ.ಟಿ.ರವಿ, ಎನ್.ರವಿಕುಮಾರ್, ಪ್ರಭು ಚವ್ಹಾಣ್, ಮಾಜಿ ಶಾಸಕ ರಾಮಣ್ಣ ಲಮಾಣಿ.
ಮಂಡ್ಯ ಕ್ಷೇತ್ರದ ಉಸ್ತುವಾರಿ: ಆರ್.ಅಶೋಕ್, ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ, ವಿಧಾನ ಪರಿಷತ್ ಮಾಜಿ ಸದಸ್ಯ ಡಿ.ಎಸ್. ವೀರಯ್ಯ.
ಜಮಖಂಡಿ ಕ್ಷೇತ್ರದ ಉಸ್ತುವಾರಿ: ಪಿ.ಸಿ.ಗದ್ದಿಗೌಡರ್, ಪ್ರಭಾಕರ ಕೋರೆ, ಜಗದೀಶ ಶೆಟ್ಟರ್, ಮುರುಗೇಶ್ ನಿರಾಣಿ, ಗೋವಿಂದ ಕಾರಜೋಳ, ಅರವಿಂದ ಲಿಂಬಾವಳಿ.
ರಾಮನಗರ ಕ್ಷೇತ್ರದ ಉಸ್ತುವಾರಿ: ಡಿ.ವಿ.ಸದಾನಂದಗೌಡ, ಸಿ.ಪಿ.ಯೋಗೇಶ್ವರ್, ಎ.ನಾರಾಯಣಸ್ವಾಮಿ, ಮುಖಂಡ ತುಳಸಿ ಮುನಿರಾಜುಗೌಡ.
ಇದೇ ವೇಳೆ ಶಾಸಕ ಬಿ.ಶ್ರೀರಾಮುಲು ಅವರು ಯಡಿಯೂರಪ್ಪ ಅವರನ್ನು ಭೇಟಿಯಾಗಿ ಬಳ್ಳಾರಿ ಲೋಕಸಭಾ ಉಪಚುನಾವಣೆ ಸಿದ್ಧತೆ ಬಗ್ಗೆ
ಚರ್ಚಿಸಿದರು.
ಜಮಖಂಡಿ ಕ್ಷೇತ್ರದ ಗೊಂದಲಕ್ಕೆ ತೆರೆ
ಜಮಖಂಡಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ತಮ್ಮ ಕುಟುಂಬದ ಯಾರೊಬ್ಬರೂ ಸ್ಪರ್ಧಿಸುವುದಿಲ್ಲ ಎಂದು ಶಾಸಕ ಮುರುಗೇಶ್ ನಿರಾಣಿ ಸ್ಪಷ್ಟಪಡಿಸುವ ಮೂಲಕ ಬಿಜೆಪಿ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯಲ್ಲಿನ ಗೊಂದಲಕ್ಕೆ ಮಂಗಳವಾರ ಬೆಳಗ್ಗೆಯೇ ತೆರೆ ಎಳೆದರು. ಬಿ.ಎಸ್ .ಯಡಿಯೂರಪ್ಪ ನಿವಾಸದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿದ ಬಳಿಕ ಪ್ರತಿಕ್ರಿಯಿಸಿದ ಅವರು, ಯಾರೇ ಅಭ್ಯರ್ಥಿಯಾದರೂ ಬೆಂಬಲಿಸಿ ಗೆಲುವಿಗೆ ಶ್ರಮಿಸುತ್ತೇವೆ ಎಂದಿದ್ದರು. ಯಡಿಯೂರಪ್ಪ ಅವರನ್ನು ಜಮಖಂಡಿಯ ಸ್ಥಳೀಯ ಮುಖಂಡರು ಭೇಟಿಯಾಗಿ ಚರ್ಚಿಸಿದರು. ಶ್ರೀಕಾಂತ್ ಕುಲಕರ್ಣಿ ಹೊರತುಪಡಿಸಿ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇವೆ. ಜಿಲ್ಲೆಯಲ್ಲಿ ಕಾರ್ಯಕರ್ತರನ್ನು ಕಡೆಗಣಿಸಿರುವ ಅವರಿಗೆ ಟಿಕೆಟ್ ನೀಡಬಾರದು ಎಂದು ಕೋರಲಾಗಿದೆ ಎಂದು ಸ್ಥಳೀಯ ಮುಖಂಡ ಚನ್ನಪ್ಪ ಗೌರೋಜಿ ಹೇಳಿದ್ದರು. ಆದರೆ ಸಂಜೆ ಕೋರ್ ಕಮಿಟಿ ಸಭೆಯಲ್ಲಿ ಶ್ರೀಕಾಂತ್ ಕುಲಕರ್ಣಿ ಅವರ ಹೆಸರನ್ನು ಅಂತಿಮಗೊಳಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್‌ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.