ಶಿವಮೊಗ್ಗದಲ್ಲಿ ಮಧು, ಮಂಡ್ಯದಲ್ಲಿ ಸ್ಥಳೀಯ ಅಭ್ಯರ್ಥಿ: ದೇವೇಗೌಡ
Team Udayavani, Oct 11, 2018, 6:30 AM IST
ವಿಜಯಪುರ: ಲೋಕಸಭೆ ಉಪ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ಮಂಡ್ಯ ಕ್ಷೇತ್ರದಿಂದ ನಮ್ಮ ಕುಟುಂಬದಿಂದ ಯಾರೂ ಕಣಕ್ಕಿಳಿಯುವುದಿಲ್ಲ. ಬದಲಾಗಿ ಸ್ಥಳೀಯ ನಾಯಕರಿಗೆ ಆದ್ಯತೆ ನೀಡಲಾಗುತ್ತದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಸ್ಪಷ್ಟಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಧು ಬಂಗಾರಪ್ಪ ಸದ್ಯ ವಿದೇಶ ಪ್ರವಾಸದಲ್ಲಿದ್ದಾರೆ. ಅವರು ಮರಳಿದ ಬಳಿಕ ಈ ಬಗ್ಗೆ ಚರ್ಚಿಸಲಾಗುತ್ತದೆ. ಶಿವಮೊಗ್ಗ ಕ್ಷೇತ್ರದಿಂದ ಸ್ಪ ರ್ಧಿಸಲು ಮಧು ನಿರಾಕರಿಸಿದರೆ ಕಾಂಗ್ರೆಸ್ ವರಿಷ್ಠರೊಂದಿಗೆ ಚರ್ಚಿಸಿ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಬಳ್ಳಾರಿ ಲೋಕಸಭೆ ಕ್ಷೇತ್ರವನ್ನು ಕಾಂಗ್ರೆಸ್‌ಗೆ ಬಿಡಲಾಗಿದೆ. ಅವರು ಯಾರನ್ನೇ ಕಣಕ್ಕಿಳಿಸಿದರೂ ಮೈತ್ರಿ ಪಕ್ಷಗಳು ಒಗ್ಗೂಡಿ ಗೆಲುವಿಗೆ ಶ್ರಮಿಸಲಿವೆ ಎಂದರು.
ಮೈತ್ರಿ ಸರ್ಕಾರ ಪತನ ಅಸಾಧ್ಯ: ದುಷ್ಟಶಕ್ತಿಗಳ ನಿಗ್ರಹಕ್ಕಾಗಿ ರಾಜ್ಯದಲ್ಲಿ ಕಾಂಗ್ರೆಸ್ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡು ಕುಮಾರಸ್ವಾಮಿ ನೇತೃತ್ವದಲ್ಲಿ ಸರ್ಕಾರ ರಚಿಸಿದೆ. ಈ ಮೈತ್ರಿ ಸರ್ಕಾರ ಯಾವಾಗ ಬೀಳುತ್ತದೋ ಎಂದು ಕೆಲವರು ಸಂಶಯ ವ್ಯಕ್ತಪಡಿಸುತ್ತಿದ್ದಾರೆ. ಇಂಥ ಕನಸು ಈಡೇರದೆ ಪೂರ್ಣಾವ ಧಿ ಮುಗಿಸಲಿದೆ. ಸಮ್ಮಿಶ್ರ ಸರ್ಕಾರಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ, ಡಾ| ಜಿ.ಪರಮೇಶ್ವರ ಸೇರಿದಂತೆ ಉಭಯ ಪಕ್ಷಗಳ ಎಲ್ಲ ನಾಯಕರು ಐಕ್ಯತೆಯಿಂದ ನಿಂತಿದ್ದಾರೆ ಎಂದರು.
ರಾಜ್ಯದ ಮೈತ್ರಿ ಸರ್ಕಾರ ರೈತರ ಸಾಲಮನ್ನಾ ಮಾಡಿದ್ದರೂ ರೈತರ ಆತ್ಮಹತ್ಯೆ ನಡೆಯುತ್ತಲೇ ಇದೆ. ರಾಜ್ಯದ ರೈತರು ಕೃಷಿಗಾಗಿ ಖಾಸಗಿ ವ್ಯಕ್ತಿಗಳು, ಲೇವಾದೇವಿಗಾರರಿಂದ ಸಾಲ ಪಡೆದು ದೌರ್ಜನ್ಯಕ್ಕೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಈ ಕೃತ್ಯ ತಡೆಯಲು ರಾಜ್ಯ ಸರ್ಕಾರ ಋಣಭಾರ ಮುಕ್ತ ಕಾನೂನು ಜಾರಿಗೆ ಮುಂದಾಗಿದ್ದು, ರಾಷ್ಟ್ರಪತಿಗಳ ಅಂಕಿತಕ್ಕೆ ಕಾಯಲಾಗುತ್ತಿದೆ. ಈ ಕಾಯ್ದೆ ಜಾರಿಗೆ ಬಂದರೆ ರೈತರಿಗೆ ಅನಗತ್ಯ ಕಿರುಕುಳ ತಪ್ಪಲಿದೆ.
– ಎಚ್.ಡಿ.ದೇವೇಗೌಡ, ಮಾಜಿ ಪ್ರಧಾನಿ
ಬಿ ಫಾರಂಗಳಿಗೆ ರೇವಣ್ಣ ಪೂಜೆ
ಬೆಂಗಳೂರು: ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧೆ ಮಾಡುವ ರಾಮನಗರ ಹಾಗೂ ಮಂಡ್ಯ ಲೋಕಸಭೆ ಕ್ಷೇತ್ರದ ಬಿ ಫಾರಂಗಳಿಗೆ ಬುಧವಾರ ಪೂಜೆ ಮಾಡಿಸಲಾಯಿತು. ನವರಾತ್ರಿಯ ಮೊದಲ ದಿನ ಶುಭ ಎಂಬ ನಂಬಿಕೆಯಿಂದ ಚಾಮರಾಜಪೇಟೆಯ ಶಂಕರಮಠದ ಶಾರದಾಂಬೆ ದೇವಾಲಯದಲ್ಲಿ ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಎರಡು ಬಿ ಫಾರಂಗಳಿಗೆ ಪೂಜೆ ಮಾಡಿಸಿದರು. ನಂತರ, ಜೆಪಿ ನಗರದ ಲಕ್ಷ್ಮಿ ದೇವಾಲಯದಲ್ಲೂ ಪೂಜೆ ಮಾಡಿಸಲಾಯಿತು ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.