ಮೀಟರ್ ಬಡ್ಡಿ ತಡೆಗೆ “ಬಡವರ ಬಂಧು’ ಯೋಜನೆ
Team Udayavani, Oct 11, 2018, 9:48 AM IST
*ಮಂಗಳೂರಿನ 3 ಸಾವಿರ ಫಲಾನುಭವಿಗಳಿಗೆ ಪ್ರಯೋಜನ
*ಪಿಗ್ಮಿ ಮೂಲಕ ಸಾಲ ಮರುಪಾವತಿ
*ಸಾಲ ಮನ್ನಾಕ್ಕೆ ಆಧಾರ್, *ರೇಶನ್ ಕಾರ್ಡ್ ಮಾತ್ರ
ಮಂಗಳೂರು: ಮೀಟರ್ ಬಡ್ಡಿ ಮುಕ್ತ ಕರ್ನಾಟಕಕ್ಕಾಗಿ ಬೀದಿ ಬದಿ ವ್ಯಾಪಾರಿಗಳಿಗೆ ಸಾಲ ಸೌಲಭ್ಯ ನೀಡುವ “ಬಡವರ ಬಂಧು’ ಯೋಜನೆಗೆ ದೀಪಾವಳಿ ಹಬ್ಬದ ಮೊದಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಚಾಲನೆ ನೀಡಲಿದ್ದಾರೆ ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ಬುಧವಾರ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು. ಈ ಯೋಜನೆಯಡಿ 2 ಸಾವಿರ ರೂ.ಗಳಿಂದ 10 ಸಾವಿರ ರೂ. ವರೆಗೆ ಬಡ್ಡಿ ರಹಿತ ಸಾಲ ಸೌಲಭ್ಯ ಸಿಗಲಿದೆ. ಮಹಾನಗರ ಪಾಲಿಕೆಗಳಲ್ಲಿ 3 ಸಾವಿರ ಮಂದಿಗೆ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ 1 ಸಾವಿರ ಸೇರಿದಂತೆ ಒಟ್ಟು 53 ಸಾವಿರ ಮಂದಿಗೆ ಸೌಲಭ್ಯ ಸಿಗಲಿದೆ. ಪಿಗ್ಮಿ ಯೋಜನೆ ಮೂಲಕ ಸಾಲ ಮರು ಪಾವತಿಗೆ ಇರಲಿದೆ ಎಂದರು.
ಉದ್ಯಮ ಆರಂಭಿಸುವ ಸ್ವಸಹಾಯ ಗುಂಪು ಗಳಿಗೆ ಸಹಕಾರ ಇಲಾಖೆಯು “ಕಾಯಕ ಯೋಜನೆ’ಯಡಿ 10 ಲಕ್ಷ ರೂ. ಸಾಲ ಒದಗಿಸಲಿದೆ. ಇದರಲ್ಲಿ 5 ಲಕ್ಷ ರೂ.ಗಳಿಗೆ ಮಾತ್ರ ಶೇ. 4ರ ಬಡ್ಡಿ ದರ ಇರಲಿದೆ ಎಂದು ತಿಳಿಸಿದರು. ಸಮ್ಮಿಶ್ರ ಸರಕಾರ ಜಾರಿ ಮಾಡಿರುವ ರೈತರ 1 ಲಕ್ಷ ರೂ. ಸಾಲ ಮನ್ನಾ ಯೋಜನೆಯಡಿ ದ. ಕನ್ನಡ ಜಿಲ್ಲೆಯಲ್ಲಿ ರೈತರ 713 ಕೋಟಿ ರೂ. ಸಾಲ ಮನ್ನಾ ಆಗಲಿದೆ ಎಂದರು.
ಪ್ಯಾಕ್ಸ್‌ಗಳಲ್ಲಿ ಏಕರೂಪದ ಸಾಫ್ಟ್ವೇರ್
ದ.ಕ. ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ (ಪ್ಯಾಕ್ಸ್)ಗಳಲ್ಲಿ ಈಗಾಗಲೇ ಕಾಮನ್ ಸಾಫ್ಟ್ ವೇರ್ ಅಳವಡಿಸಲಾಗಿದೆ. ರಾಜ್ಯದ ಎಲ್ಲೆಡೆ ಇದರ ಅಳವಡಿಕೆಗೆ ಚಿಂತನೆ ನಡೆದಿದೆ. ಈ ಬಗ್ಗೆ ಇಲಾಖೆ 15 ದಿನದಲ್ಲಿ ವರದಿ ನೀಡಲಿದ್ದು ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.
ಆಧಾರ್, ರೇಶನ್ ಕಾರ್ಡ್ ಮಾತ್ರ
ಸಾಲ ಮನ್ನಾಕ್ಕಾಗಿ ರೈತರಿಂದ ದಾಖಲೆಯಾಗಿ ಆಧಾರ್ ಕಾರ್ಡ್ ಮತ್ತು ರೇಶನ್ ಕಾರ್ಡ್ ಮಾತ್ರವೇ ಕೇಳಲಾಗುತ್ತಿದೆ. ಒಟ್ಟು 22 ಲಕ್ಷ ರೈತರಿಗೆ ಋಣ ಮುಕ್ತ ಪ್ರಮಾಣ ಪತ್ರ ನೀಡಲು ಸಿದ್ಧತೆ ನಡೆಯುತ್ತಿದೆ. ಹಿಂದಿನ ಸಾಲ ಮನ್ನಾ ಯೋಜನೆಯಡಿ ದ.ಕ. ಜಿಲ್ಲೆಯ 380 ಕೋಟಿ ರೂ.ಗಳಲ್ಲಿ 2 ಕೋಟಿ ರೂ. ಸಹಕಾರಿ ಸಂಘಗಳಿಗೆ ಪಾವತಿಯಾಗಲು ಬಾಕಿ ಇದೆ. ಈ ಬಾರಿ ಸಾಲ ಮನ್ನಾ ಯೋಜನೆಯಡಿ ಬಿಲ್ ಬಂದ ಹಾಗೆ ಪ್ಯಾಕ್ಸ್‌ಗಳಿಗೆ ಹಣ ಬಿಡುಗಡೆ ಮಾಡಲಾಗುವುದು ಎಂದರು.
ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್. ರಾಜೇಂದ್ರ ಕುಮಾರ್, ರಾಜ್ಯ ಸಹಕಾರಿ ಸಂಘಗಳ ರಿಜಿಸ್ಟ್ರಾರ್ ಎಂ.ಕೆ. ಅಯ್ಯಪ್ಪ, ಜಿಲ್ಲಾ ಸಹಕಾರಿ ಸಂಘಗಳ ಉಪ ನಿಬಂಧಕ ಬಿ.ಕೆ. ಸಲೀಂ, ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
IPL Mega Auction: ಸ್ಪಿನ್ನರ್ ಚಾಹಲ್ ಗೆ ಭಾರೀ ಬೇಡಿಕೆ; ಮಿಲ್ಲರ್ ಲಕ್ನೋಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.