ಹಣ-ಅಂತಸ್ತು ಇದ್ದವ ಶ್ರೀಮಂತನಲ್ಲ: ಜಿನರಾಲ್ಕರ್
Team Udayavani, Oct 11, 2018, 2:58 PM IST
ದಾವಣಗೆರೆ: ಶಾರೀರಿಕ ಹಾಗೂ ಮಾನಸಿಕ ಆರೋಗ್ಯ ಕಾಪಾಡಿಕೊಂಡ ವ್ಯಕ್ತಿಯೇ ನಿಜವಾದ ಶ್ರೀಮಂತನೇ ಹೊರತು ಹಣ, ಅಂತಸ್ತು ಹೊಂದಿದವನಲ್ಲ ಎಂದು ಕೌಟುಂಬಿಕ ನ್ಯಾಯಾಲಯದ ಜಿಲ್ಲಾ ನ್ಯಾಯಾಧೀಶ ಬಿ.ಎನ್. ಜಿನರಾಲ್ಕರ್ ಅಭಿಪ್ರಾಯ ವ್ಯಕ್ತಪಡಿಸಿದರು.
ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜೆಜೆಎಂ ಮೆಡಿಕಲ್ ಕಾಲೇಜಿನ ಮಾನಸಿಕ ಆರೋಗ್ಯ ವಿಭಾಗ, ಚಿಗಟೇರಿ ಜಿಲ್ಲಾಸ್ಪತ್ರೆ ಸಂಯುಕ್ತಾಶ್ರಯದಲ್ಲಿ ಬಾಪೂಜಿ
ಆಸ್ಪತ್ರೆಯಲ್ಲಿ ಬುಧವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತೀ¤ಚಿನ ಆಧುನಿಕತೆಯ ನಾಗಲೋಟದ ಜಗತ್ತಿನಲ್ಲಿ ಜನರು ಹಣ, ಸಂಪತ್ತಿನ ಗಳಿಕೆಯಿಂದ ಆರೋಗ್ಯಪೂರ್ಣ, ನೆಮ್ಮದಿಯ ಬದುಕು ನಡೆಸಬಹುದು ಎಂಬ ಭ್ರಮೆಯಲ್ಲಿದ್ದಾರೆ. ಹಣ ಗಳಿಸಿದವ ಕೇವಲ ಭೋಗ ಭಾಗ್ಯಗಳ ಪಡೆಯುವ ಶ್ರೀಮಂತನಾಗಬಲ್ಲ. ಆದರೆ ವಾಸ್ತವದಲ್ಲಿ ಯಾರು ದೈಹಿಕ ಹಾಗೂ ಮಾನಸಿಕವಾಗಿ ಸದೃಢ ಆರೋಗ್ಯ ಹೊಂದಿರುತ್ತಾರೋ ಅವರೇ ನಿಜವಾದ ಶ್ರೀಮಂತರಾಗಿರುತ್ತಾರೆ ಎಂದರು.
ಆರೋಗ್ಯದಲ್ಲಿನ ಏರುಪೇರಿನಿಂದಾಗಿ ನೆಮ್ಮದಿಯ ಜೀವನಕ್ಕೆ ಭಂಗ ಬರುತ್ತದೆ. ಹಾಗಾಗಿ ಪ್ರತಿಯೊಬ್ಬರೂ ನಿಗದಿತ ಸಮಯಕ್ಕೆ ಹಿತಮಿತ ಆಹಾರ ಸೇವಿಸುವ ಕ್ರಮ ರೂಢಿಸಿಕೊಳ್ಳಬೇಕು. ಜಂಕ್ ಫುಡ್ ತ್ಯಜಿಸಿ ಸೊಪ್ಪು, ತರಕಾರಿ, ಹಣ್ಣು ಸೇವಿಸಬೇಕು. ಕ್ರೀಡೆ, ವ್ಯಾಯಾಮದಂತಹ ಚಟುವಟಿಕೆಗಳಲ್ಲಿ ತೊಡಗಿಕೊಂಡು ದೈಹಿಕ ಆರೋಗ್ಯ ಕಾಪಾಡಿಕೊಂಡು ನಿತ್ಯ ಉತ್ಸಾಹದ ಜೀವನ ನಡೆಸಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕೆಂಗಬಾಲಯ್ಯ ಮಾತನಾಡಿ, ಜನರು ಈಚೆಗೆ ಆರೋಗ್ಯದ ಬಗ್ಗೆ ನಿರ್ಲಕ್ಷé ತೋರುತ್ತಿದ್ದಾರೆ. ಹಾಗಾಗಿ ಆರೋಗ್ಯವನ್ನು ಸುಸ್ಥಿತಿಯಲ್ಲಿ ಕಾಪಾಡಿಕೊಳ್ಳಲಾಗುತ್ತಿಲ್ಲ. ಮನುಷ್ಯನಿಗೆ ದೈಹಿಕದಷ್ಟೇ ಮಾನಸಿಕ ಆರೋಗ್ಯ ಕೂಡ ಅತಿಮುಖ್ಯ. ಕೇವಲ ದೇಹದ ಅಂಗಾಂಗ ಬಲಿಷ್ಠವಾಗಿಟ್ಟುಕೊಂಡವ ಆರೋಗ್ಯವಂತನೆಂದು ಭಾವಿಸುವಂತಿಲ್ಲ.
ನಿತ್ಯ ದೈಹಿಕ ಆರೋಗ್ಯಕ್ಕಾಗಿ ವ್ಯಾಯಾಮ, ಶಾರೀರಿಕ ಆರೋಗ್ಯಕ್ಕಾಗಿ ಧ್ಯಾನ ಮಾಡಬೇಕು. ಆಗ ಉತ್ತಮ ಆರೋಗ್ಯದ ಜೊತೆ ಏಕಾಗ್ರತೆ ವೃದ್ಧಿಯಾಗುತ್ತದೆ ಎಂದು ಹೇಳಿದರು. ಇಂದು ಪ್ರತಿಯೊಂದು ಮಾಲಿನ್ಯ ಆಗುತ್ತಿದೆ. ಇದರಿಂದ ಹೊರ ಬರಲು ಮನಸ್ಸನ್ನು ಶಾಂತವಾಗಿ ಇಟ್ಟುಕೊಳ್ಳಬೇಕಿದೆ. ಬುದ್ಧಿಜೀವಿಯಾದ ಮಾನವ ಮೊದಲು ತಾನು ಇರುವ ಕಡೆ ಶಾಂತಿ, ನೆಮ್ಮದಿಯ ವಾತಾವರಣ ನಿರ್ಮಿಸಿಕೊಳ್ಳಬೇಕಿದೆ ಎಂದು ಅವರು, ಮಾನಸಿಕ ಅಸ್ವಸ್ಥರನ್ನು ತಾತ್ಸಾರ ಮಾಡಬಾರದು.
ಶುಶ್ರೂಷಕರು ಅವರನ್ನು ತಮ್ಮ ಮನೆಯ ಸದಸ್ಯರೊಬ್ಬರಂತೆ ಕಾಣುವ ಮನೋಭಾವ ಬೆಳೆಸಿಕೊಳ್ಳಬೇಕು ಸಲಹೆ ನೀಡಿದರು. ಬದಲಾಗುತ್ತಿರುವ ಪ್ರಪಂಚದಲ್ಲಿ ಯುವಜನತೆ ಮತ್ತು ಮಾನಸಿಕ ಆರೋಗ್ಯ ವಿಷಯದ ಕುರಿತು ಹಿರಿಯ ಪ್ರಾಧ್ಯಾಪಕ ಡಾ| ಕೆ. ನಾಗರಾಜರಾವ್ ಉಪನ್ಯಾಸ ನೀಡಿದರು. ಡಾ| ಸಿ.ವೈ. ಸುದರ್ಶನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜೆಜೆಎಂ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ| ಎಸ್.ಬಿ. ಮುರುಗೇಶ್ ಅಧ್ಯಕ್ಷತೆ
ವಹಿಸಿದ್ದರು. ಚಿಗಟೇರಿ ಜಿಲ್ಲಾ ಆಸ್ಪತ್ರೆ ಅಧೀಕ್ಷಕಿ ಡಾ| ಎಚ್.ಡಿ. ನೀಲಾಂಬಿಕೆ, ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಎಲ್.ಎಚ್. ಅರುಣ್‌ಕುಮಾರ್, ವಕೀಲರ ಸಂಘದ ಜಿಲ್ಲಾ ಅಧ್ಯಕ್ಷ ಮಂಜುನಾಥ್ ಉಪಸ್ಥಿತರಿದ್ದರು.
ಡಾ| ಅನುಪಮಾ ಸ್ವಾಗತಿಸಿದರು. ವಿನ್ಯಾಸ್ ನಿಸರ್ಗ ನಿರೂಪಿಸಿದರು. ಡಾ| ಹರೀಶ್ ಕುಲಕರ್ಣಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಬಿಜೆಪಿ-ಕಾಂಗ್ರೆಸ್ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ
Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು
ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.