ಮಂದಗತಿಯಲ್ಲಿ ರೈಲು ಮಾರ್ಗ ಯೋಜನೆ: ಖಾಜಿ ಆರೋಪ 

Team Udayavani, Oct 11, 2018, 5:21 PM IST

11-october-21.gif

ಬನಹಟ್ಟಿ: ಬಾಗಲಕೋಟೆ-ಕುಡಚಿ ರೈಲು ಮಾರ್ಗ ನಿರ್ಮಾಣ ಯೋಜನೆ ರಾಜಕೀಯ ಮುಖಂಡರ ಹಿತಾಶಕ್ತಿ ಕೊರತೆಯಿಂದ ಮಂದಗತಿಯಲ್ಲಿ ಸಾಗುತ್ತಿದೆ ಎಂದು ಕುಡಚಿ ಬಾಗಲಕೋಟೆ ರೈಲು ಹೋರಾಟ ಸಮಿತಿ ಅಧ್ಯಕ್ಷ ಕುತುಬುದ್ದಿನ್‌ ಖಾಜಿ ಹೇಳಿದರು. ನಗರದ ಭದ್ರನ್ನವನರ ಕಲ್ಯಾಣ ಮಂಟಪದಲ್ಲಿ ಬಾಗಲಕೋಟೆ-ಕುಡಚಿ ರೈಲು ಮಾರ್ಗ ಯೋಜನೆ ಕಾಮಗಾರಿ ಸಂಬಂಧ ಹೋರಾಟ ಪ್ರಕ್ರಿಯೆ ಕುರಿತು ಚರ್ಚಿಸಲು ಹಮ್ಮಿಕೊಂಡ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

816 ಕೋಟಿ ರೂ. ಯೋಜನೆ ಪೂರ್ಣಗೊಳ್ಳಲು ಹಣದ ಕೊರತೆಯಿಲ್ಲ. ರಾಜಕೀಯ ಮತ್ತು ಅಧಿಕಾರಿಗಳ ವಿಳಂಬ ಧೋರಣೆಯಿಂದ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದೆ. ಪ್ರಜಾಪ್ರಭುತ್ವ ದೇಶದಲ್ಲಿರುವ ನಾವು ಹೋರಾಟ ಮಾಡದೇ ಯಾವುದನ್ನು ಪಡೆದುಕೊಳ್ಳಲು ಸಾಧ್ಯವಿಲ್ಲ, ಆದ್ದರಿಂದ ಮತ್ತೊಂದು ಹೋರಾಟಕ್ಕೆ ಎಲ್ಲರೂ ಸಿದ್ಧರಾಗಿ ಎಂದು ಕರೆ ನೀಡಿದರು.

ಹಲವು ವರ್ಷಗಳ ಹಿಂದೆ ಕುಡಚಿ ರೈಲು ನಿಲ್ದಾಣದಲ್ಲಿ ರೈಲು ತಡೆದು ಪ್ರತಿಭಟನೆ ನಡೆಸಿದವರ ಮೇಲೆ ಕೇಸು ದಾಖಲಿಸಿ ಇಂದಿಗೂ ಜಮಖಂಡಿ, ಮುಧೋಳ, ರಬಕವಿ ಬನಹಟ್ಟಿ ಸೇರಿದಂತೆ ಅನೇಕ ಹಿರಿಯರು ಬೆಂಗಳೂರಿಗೆ ಅಲೆದಾಡುತ್ತಿದ್ದಾರೆ. ಆದರೆ, ಯಾವುದಕ್ಕೂ ಹೆದರದೆ ಹೋರಾಟ ಮಾಡುವುದಾಗಿ ಹೇಳಿದರು.

ಜನರ ಹೋರಾಟದ ಫಲವಾಗಿ ರೈಲು ಯೋಜನೆ ಆರಂಭವಾಗಿದ್ದು, ಮತ್ತೇ ಹೋರಾಟದ ಮೂಲಕವೇ ತೀವ್ರಗೊಳಿಸುವ ಕೆಲಸವಾಗಬೇಕಿದೆ. ಆ ನಿಟ್ಟಿನಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಪ್ರತ್ಯೇಕವಾಗಿ ವಿಶೇಷ ಜಿಲ್ಲಾಧಿಕಾರಿ ನೇಮಕವಾಗಬೇಕು. ಕೂಡಲೇ ಸರಕಾರ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ದೀಪಾವಳಿ ನಂತರ ಪ್ರತಿಭಟನೆ, ಉಪವಾಸ ಸತ್ಯಾಗ್ರಹ ಆರಂಭಗೊಳ್ಳಲಿವೆ ಎಂದರು.

ರೈತ ಮುಖಂಡ ಹಾಗೂ ವಕೀಲ ಹೊಸೂರು ಗ್ರಾಮದ ವೆಂಕಟೇಶ ನಿಂಗಸಾಣಿ, ಸಾಹಿತಿ ಸಿದ್ದರಾಜ ಪೂಜಾರಿ, ನೀಲಕಂಠ ದಾತಾರ, ಪ್ರೊ|ಎಂ. ಎಸ್‌. ಬದಾಮಿ, ಸುಭಾಷ ಮದರಖಂಡಿ, ಶಿವಾನಂದ ಬಾಗಲಕೋಟಮಠ, ಧರೆಪ್ಪ ಉಳ್ಳಾಗಡ್ಡಿ, ಬಸವರಾಜ ಪಟ್ಟಣ ಸೇರಿದಂತೆ ಅನೇಕರು ಮಾತನಾಡಿದರು.

ಡಾ| ರವಿ ಜಮಖಂಡಿ ಪ್ರಾಸ್ತಾವಿಕವಾಗಿ ಮಾತನಾಡಿ, ರಬಕವಿ ಬನಹಟ್ಟಿ, ಲೋಕಾಪುರ, ಮಹಾಲಿಂಗಪುರ, ಮುಧೋಳ, ಜಮಖಂಡಿ, ತೇರದಾಳ ಸೇರಿದಂತೆ ಅನೇಕ ಗ್ರಾಮ ಹಾಗೂ ಪಟ್ಟಣಗಳ ನಾಗರಿಕರನ್ನು ಸಂಪರ್ಕಿಸಿ ನ. 18ರಂದು ಎಲ್ಲ ನಗರಗಳಲ್ಲಿ ಪ್ರತಿಭಟನೆ ಮತ್ತು ಸಂಪೂರ್ಣ ಬಂದ್‌ ಆಚರಿಸಲು ನಿರ್ಧರಿಸಲಾಗಿದೆ ಎಂದರು. ನಾರಾಯಣ ಬೋರಗಿನಾಯಕ, ಆರ್‌. ಡಿ. ಭದ್ರನ್ನವರ, ಸುರೇಶ ಚಿಂಡಕ, ಡಾ| ಪ್ರಭು ಪಾಟೀಲ, ಸತೀಶ ಹಜಾರೆ, ಬಸವರಾಜ ತೆಗ್ಗಿ, ರಾಮಣ್ಣ ಹುಲಕುಂದ, ಮಹಾದೇವ ಕೋಟ್ಯಾಳ, ಚಿದಾನಂದ ಸೊಲ್ಲಾಪುರ, ಸಂಗಣ್ಣ ಅರಬಳ್ಳಿ, ನೀಲಕಂಠ ಮುತ್ತೂರ, ಆನಂದ ಜುಗಳಿ ಇದ್ದರು.

ಟಾಪ್ ನ್ಯೂಸ್

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

ip

‌IPL Auction: ಕೇನ್‌, ಮಯಾಂಕ್‌, ಶಾಗಿಲ್ಲ ಬೇಡಿಕೆ; ಉತ್ತಮ ಹಣ ಪಡೆದ ದ. ಆಫ್ರಿಕಾ ವೇಗಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

BBK11: ಧರ್ಮ ಬಿಗ್‌ ಬಾಸ್‌ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್‌ ಹೀರೋʼ ಎಡವಿದ್ದೆಲ್ಲಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

70 ವಿದ್ಯಾರ್ಥಿಗಳಿಗೆ ಒಂದೇ ಶೌಚಾಲಯ; ಮೂತ್ರ ವಿಸರ್ಜನೆಗೆ ಬಯಲೇ ಗತಿ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ

4-mudhol

Mudhol: ಟ್ರ್ಯಾಕ್ಟರ್ ಹಾಗೂ ಬೊಲೆರೋ ಮುಖಾಮುಖಿ ಡಿಕ್ಕಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

kiran raj’s Megha movie

‌Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್‌ ರಾಜ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.