ರಾಜಾಧಿರಾಜ…ಬಹುಪರಾಕ್‌


Team Udayavani, Oct 11, 2018, 6:02 PM IST

mys-1.jpg

ಮೈಸೂರು: ರಾಜಾಧಿರಾಜ, ರಾಜ ಮಾರ್ತಾಂಡ, ಸಾರ್ವಭೌಮ, ಯದುಕುಲ ತಿಲಕ, ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಬಹುಪರಾಕ್‌, ಬಹುಪರಾಕ್‌, ಬಹುಪರಾಕ್‌… ಎಂದು ರಾಜಭಟರು ಘೋಷಣೆಗಳನ್ನು ಕೂಗುತ್ತಿದ್ದಂತೆ ರಾಜವಂಶಸ್ಥ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌, ರತ್ನಖಚಿತ ಸಿಂಹಾಸನಾರೋಹಣ
ಮಾಡುವ ಮೂಲಕ ಖಾಸಗಿ ದರ್ಬಾರ್‌ಗೆ ಚಾಲನೆ ನೀಡಿದರು.

ನಾಡಹಬ್ಬ ದಸರೆಗೆ ಚಾಲನೆ ದೊರೆತ ಬೆನ್ನಲ್ಲೆ, ಅಂಬಾವಿಲಾಸ ಅರಮನೆಯಲ್ಲಿ ನವರಾತ್ರಿ ಉತ್ಸವದ ಸಂಭ್ರಮ ಆರಂಭ ಗೊಂಡಿದೆ. ರಾಜಪೋಷಾಕು, ಚಿನ್ನಾಭರಣ ಧರಿಸಿ, ರಾಜಪೇಟ ತೊಟ್ಟು ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ಅಂಬಾ ವಿಲಾಸ ಅರಮನೆಯ ದರ್ಬಾರ್‌ ಹಾಲ್‌ನಲ್ಲಿ ರತ್ನಖಚಿತ ಸಿಂಹಾಸನವನ್ನೇರಿ ಖಾಸಗಿ ದರ್ಬಾರ್‌ ಆರಂಭಿಸಿದರು. ಇದರೊಂದಿಗೆ ಅರಮನೆಯಲ್ಲಿ ನವರಾತ್ರಿ ಉತ್ಸವದ ಧಾರ್ಮಿಕ ವಿಧಿ ವಿಧಾನಗಳ ಆಚರಣೆಗೂ ವಿಧ್ಯುಕ್ತ ಚಾಲನೆ ದೊರೆಯಿತು.

ಖಾಸಗಿ ದರ್ಬಾರ್‌ ಹಿನ್ನೆಲೆಯಲ್ಲಿ ಅರಮನೆಯಲ್ಲಿನ ಸಿಂಹಾಸನಕ್ಕೆ ಸಿಂಹದ ಶಕ್ತಿಯನ್ನು ಆಹ್ವಾನಿಸುವ ವಿಧಿವಿಧಾನಗಳು ಬೆಳಗ್ಗೆ 5.30ರಿಂದ ಸಕಲ ಧಾರ್ಮಿಕ ಆಚರಣೆ ನೆರವೇರಿಸಲಾಯಿತು. ಬಳಿಕ ರಾಜವಂಶಸ್ಥ ಯದುವೀರ್‌ಗೆ ಅಭ್ಯಂಜನ ಸ್ನಾನ ನೆರವೇರಿಸಿ, ಮುತ್ತೈದೆಯರು ಮತ್ತು ಪುರೋಹಿತ ಮನೆತನದ ಹೆಂಗಸರು ಆರತಿ ಬೆಳಗಿದರು. 

ಯದುವೀರ್‌ ಚಾಮುಂಡಿ ತೊಟ್ಟಿಯಲ್ಲಿ ಗಣಪತಿಗೆ ಪೂಜೆ ಮಾಡಿದ ಬಳಿಕ ಕಳಶಪೂಜೆ, ಕಂಕಣಪೂಜೆ ಮಾಡಿದರು. ಮುಂಜಾನೆ 7.55ರಿಂದ 8.15ಕ್ಕೆ ಸಿಂಹಾಸನ ಸಿದ್ಧತಾ ಕಾರ್ಯ ಮುಕ್ತಾಯವಾಯಿತು. ಬಳಿಕ 8.20 ರಿಂದ 9.10ಕ್ಕೆ ಕುಲದೇವತೆ ಚಾಮುಂಡಿ ಸನ್ನಿಧಿ ಯಲ್ಲಿ ಪತ್ನಿ ತ್ರಿಷಿಕಾಕುಮಾರಿ ಕಂಕಣ ಕಟ್ಟಿದರು.

ಶಕ್ತಿ ದೇವತೆ ಪೂಜೆ: ಈ ವೇಳೆ ದುರ್ಗೆಯ ದಿವ್ಯಸ್ವರೂಪಗಳಾದ ಬ್ರಹ್ಮಿಣಿ, ಕೌಮಾರಿ, ವೈಷ್ಣ, ವಾರಾ, ಇಂದ್ರಾಣಿ, ಮಹೇಶ್ವರಿ, ದುರ್ಗಾ,ಕಾಳಿ, ಚಂಡಿಕೆಗೆ ಎಲ್ಲಾ ಶಕ್ತಿದೇವತೆಗಳನ್ನೂ ಆರಾಧಿಸಿ ಶಿವಸನ್ನಿಧಿ, ಕೃಷ್ಣಸನ್ನಿಧಿ, ಚಾಮುಂಡಿ ಸನ್ನಿಧಿ ಮುಂತಾದ ದೇವ-ದೇವಿಯರ ಸನ್ನಿಧಿ ಗಳಲ್ಲಿ ಪೂಜೆ ಸಲ್ಲಿಸಿದರು. ಬಳಿಕ ದೇವಿ ಭಾಗ ವತ, ರಾಮಾಯಣ ಪಾರಾಯಣ ಮಾಡಿದರು. ಬಳಿಕ ಗಣಪತಿ ಪೂಜೆ, ಅಷ್ಟದಿಕಾ³ಲಕರ ಪೂಜೆ, ನವಗ್ರಹ ಪೂಜೆ, ಬ್ರಹ್ಮ, ವಿಷ್ಣು, ಮಹೇಶ್ವರ, ಮಹಾಕಾಳಿ, ಮಹಾಸರಸ್ವತಿ, ಮಹಾಲಕ್ಷ್ಮೀ ಪೂಜೆ ನೆರವೇರಿಸಿದರು. ಬಳಿಕ ಸ್ವರ್ಣ ವರ್ಣದ ನಿಲುವಂಗಿ, ಕಡು ನೀಲಿ ವರ್ಣದ ಪೈಜಾಮಾ, ಮುತ್ತಿನ ಮಣಿ ಜೋಡಿಸಿರುವ ನೀಲಿ ಬಣ್ಣದ ರಾಜಪೇಟ, ರಾಜಲಾಂಛನ ಗಂಢ ಭೇರುಂಡ ಚಿನ್ನಾಭರಣಧರಿಸಿ ರಾಜಪೋಷಾಕು ಧರಿಸಿದ ಯದುವೀರ್‌ ಆತ್ಮವಿಲಾಸ ಗಣಪತಿ ದೇವಸ್ಥಾನಕ್ಕೆ ತೆರಳಿ ಪೂಜೆ ಸಲ್ಲಿಸಿ ಅಲ್ಲಿಂದ  ನೇರವಾಗಿ ಖಾಸಗಿ ದರ್ಬಾರ್‌ ಸಭಾಂಗಣಕ್ಕೆ ಪ್ರವೇಶಿಸಿದರು.

ಕಳಶ ಪೂಜೆ: ಬಳಿಕ 32 ಕಳಶ ಪೂಜೆ ನೆರವೇರಿಸಲಾಯಿತು. 11.40ರಿಂದ 12.10ರ ವರೆಗೆ ಸಲ್ಲುವ ಶುಭ ವೃಶ್ಚಿಕ ಲಗ್ನದಲ್ಲಿ ಸಿಂಹಾಸನ ಪೂಜೆ ಮಾಡಿ, ಸಿಂಹಾಸನಕ್ಕೆ ಮೂರು ಪ್ರದಕ್ಷಿಣೆ ಹಾಕಿ, ರಾಜಗಾಂಭೀರ್ಯ ದಿಂದ ರತ್ನಸಿಂಹಾಸನ ಏರಿದ ಯದುವೀರ್‌, ಆಸ್ಥಾನಕ್ಕೆ ಬಲಗೈ ಎತ್ತಿ ಸಲ್ಯೂಟ್‌ ಮಾಡಿ ರಾಜಗಾಂಭೀರ್ಯದಿಂದ ಖಾಸಗಿ ದರ್ಬಾರ್‌ ಆರಂಭಿಸಿದರು. ಈ ವೇಳೆ ಕರ್ನಾಟಕ ಪೊಲೀಸ್‌ ಬ್ಯಾಂಡ್‌ ಸಿಬ್ಬಂದಿ ಕಾಯೋ ಶ್ರೀ ಗೌರಿ ಗೀತೆ ನುಡಿಸಿ ಗೌರವ ಸಲ್ಲಿಸಿದರು. ಅಲ್ಲದೆ ಶ್ರೀ ಮಹಾಗಣಪತಿಂ, ಸರಸ್ವತಿ ಭಗವತಿಂ, ಸರಸ್ವತಿ, ಬ್ರಹ್ಮಮುರಾರಿ, ಐಗಿರಿ ನಂದಿನಿ, ಜಯಾಂಬಿಕೆ, ಶ್ರೀ ಚಾಮುಂಡೇಶ್ವರಿ, ಭಾಗ್ಯದ ಲಕ್ಷಿ$¾ ಬಾರಮ್ಮ ಹಾಡು ನುಡಿಸಿದರು.

ವಿವಿಧ ದೇಗುಲ ಪ್ರಸಾದ ಸ್ವೀಕಾರ: ಸಿಂಹಾಸನವೇರಿದ ಬಳಿಕ ಚಾಮುಂಡಿಬೆಟ್ಟ, ಪರಕಾಲಮಠ, ನಂಜನಗೂಡು, ಮೇಲು ಕೋಟೆ, ಶ್ರೀರಂಗಪಟ್ಟಣ, ಶೃಂಗೇರಿ ಸೇರಿದಂತೆ ವಿವಿಧ ದೇವಾಲಯಗಳಿಂದ ತಂದಿದ್ದ ಪೂರ್ಣಫ‌ಲ ಪ್ರಸಾದ್ನ ಸ್ವೀಕರಿಸಿದರು. ಅಲ್ಲದೇ ಗಂಗೆಯ ಸಂಪ್ರೋಕ್ಷಣೆ ಆದ ಬಳಿಕ ದರ್ಬಾರ್‌ಗೆ ಸಹಕಾರ ನೀಡಿದವರಿಗೆ ಯದವೀರ್‌, ಕಿರುಕಾಣಿಕೆ ನೀಡಿಗೌರವ ಸಲ್ಲಿಸಿ ಸಿಂಹಾನಸದಿಂದ ಇಳಿದರು. ಬಳಿಕ ದರ್ಬಾರ್‌ ಮುಗಿಸಲು ಎದ್ದು ನಿಂತು ಸಲ್ಯೂಟ್‌ ಮಾಡಿದರು. ಈ ವೇಳೆ ಮತ್ತೆ ಕಾಯೋ ಶ್ರೀ ಗೌರಿ ಗೀತೆ ಮೊಳಗಿತು. ನವರಾತ್ರಿಯ ಮೊದಲನೆ ದಿನವಾದ ಪಾಡ್ಯದ ದಿನದಂದು ಬೆಳಗ್ಗೆ ಖಾಸಗಿ ದರ್ಬಾರ್‌ ನಡೆಯುತ್ತದೆ.

ಉಳಿದ ದಿನಗಳಲ್ಲಿ ಸಂಜೆ ವೇಳೆಯಲ್ಲಿ ನಡೆಯುತ್ತದೆ. ದ್ವಾರಪಾಲಕರು, ಪರಾಕು ಹೇಳುವವರು, ಒಡೆಯರ್‌ ಆಪ್ತ ಸಿಬ್ಬಂದಿ, ರಾಜದಂಡ ಹಿಡಿದ ಆಸ್ಥಾನ ಅಧಿಕಾರಿಗಳು, ರಾಜಪುರೋತರು, ವಿದ್ವಾಂಸರು, ಒಡೆಯರ್‌ ವಂಶಸ್ಥರು, ಬಂಧು ಮಿತ್ರರೆಲ್ಲರೂ ಖಾಸಗಿ ದರ್ಬಾರಿನಲ್ಲಿ ಭಾಗವಹಿಸಿದ್ದರು. 

ವಿಜಯದಶಮಿಯ ಹತ್ತು ದಿನಗಳ ಅವಧಿಯಲ್ಲಿ 108 ಸಲ ದೇವಿ ಭಾಗವತ ಪಠಣ, 10 ಮಂದಿ ವೇದಮೂರ್ತಿ
ಗಳಿಂದ ಸಪ್ತಶತಿ ಪಠಣ, ನವಮಿ ರಾತ್ರಿ ಆಲಮೇಲಮ್ಮನ ದೇವಸ್ಥಾನದಲ್ಲಿ ಪೂಜೆ, ಆಯುಧಶಾಲೆಯಲ್ಲಿ ಆಯುಧಪೂಜೆ,
ವಿಜಯದಶಮಿಯಂದು ಜಟ್ಟಿಗಳ ವಜ್ರಮುಷ್ಠಿ ಕಾಳಗ, ಶಮೀಪೂಜೆ ಅತ್ಯಂತ ಶ್ರದ್ಧಾಭಕ್ತಿಯಿಂದ ಶಾಸ್ತ್ರೋಕ್ತವಾಗಿ ನೆರವೇರಿಸಲಾಗುತ್ತದೆ. 

ಟಾಪ್ ನ್ಯೂಸ್

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Prabhutva movie review

Prabhutva movie review: ಪ್ರಗತಿ ಪಥದಲ್ಲಿ ಕ್ರಾಂತಿಯ ಕಿಡಿ

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

BBK11: ಇವತ್ತು ಬಿಗ್‌ಬಾಸ್‌ ಮನೆಯಿಂದ ಆಚೆ ಬರುವುದು ಇವರೇ ನೋಡಿ

Vijayapura: One-year-old child kidnapped from district hospital: Crime detected on CCTV

Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ

11-kundagol’

Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ

Smart water meters revolutionize water conservation

Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.