ಚಿಣ್ಣರ ಬಿಂಬ ಮುಂಬಯಿ ಪೇಜಾವರ ಶಿಬಿರ:ಮಕ್ಕಳ ಸಾಂಸ್ಕೃತಿಕ ಸ್ಪರ್ಧೆ


Team Udayavani, Oct 12, 2018, 11:36 AM IST

4.jpg

ಮುಂಬಯಿ: ಚಿಣ್ಣರ ಬಿಂಬ ಪೇಜಾವರ ಶಿಬಿರದ ಮಕ್ಕಳ ಸಾಂಸ್ಕೃತಿಕ ಪ್ರತಿಭಾ ಸ್ಪರ್ಧೆಯು ಸೆ. 30 ರಂದು ಸಾಂತಾಕ್ರೂಜ್‌ ಪೂರ್ವದ ಪೇಜಾವರ ಮಠದ ಸಭಾಗೃಹದಲ್ಲಿ ನಡೆಯಿತು.

ಪ್ರತಿಭಾ ಸ್ಪರ್ಧೆಯನ್ನು ದೀಪಪ್ರಜ್ವಲಿಸಿ ಉದ್ಘಾಟಿಸಿ ಮಾತನಾಡಿದ ಪೇಜಾವರ ಮಠದ ಮುಖ್ಯ ಪ್ರಬಂಧಕ ರಾಮದಾಸ್‌ ಉಪಾಧ್ಯಾಯ ಅವರು, ಮಕ್ಕಳ ಭಜನೆ ಮತ್ತು ವಿಶೇಷವಾಗಿ ಶ್ಲೋಕ ಪಠಣೆಯನ್ನು ನಿರರ್ಗಳವಾಗಿ ಹೇಳುವುದನ್ನು ಕಂಡು ಆಶ್ಚರ್ಯಚಕಿತನಾದೆ. ಈ ಸಂಸ್ಥೆ ಮಕ್ಕಳಿಗೆ ಒಳ್ಳೆಯ ವೇದಿಕೆಯನ್ನು ಒದಗಿಸಿಕೊಟ್ಟಿದೆ. ಮಕ್ಕಳು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚಿನ ಸಮಯವನ್ನು ಕಳೆಯುತ್ತಿದ್ದು, ಅದರ ಬದಲಿಗೆ ತಮ್ಮ ಪ್ರತಿಭೆಯನ್ನು ಪ್ರಕಾಶಿಸುವಂತೆ ಮಾಡುತ್ತಿರುವ ಚಿಣ್ಣರ ಬಿಂಬದ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು. ಇದರ ಬಗ್ಗೆ ಹೆತ್ತವರು ಮಕ್ಕಳನ್ನು ಪ್ರೇರೇಪಿಸಬೇಕು. ಬಾಲ್ಯದಲ್ಲಿಯೇ ಮಕ್ಕಳಿಗೆ ಇಂತಹ ಸಂಸ್ಕಾರಯುತ ಜೀವನವನ್ನು ಕಲಿಸಿಕೊಟ್ಟಾಗ ಅವರ ಭವಿಷ್ಯ ಉಜ್ವಲವಾಗುತ್ತದೆ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ ಪ್ರಮೋದಾ ಶಿವಣ್ಣ ಶೆಟ್ಟಿ ಅವರು, ಇಂಗ್ಲಿಷ್‌ ಮಾಧ್ಯಮದಲ್ಲಿ ಕಲಿಯುತ್ತಿರುವ ಮಕ್ಕಳು ಕನ್ನಡದಲ್ಲಿ ಇಷ್ಟೊಂದು ನಿರರ್ಗಳವಾಗಿ ಮಾತನಾಡುವುದನ್ನು ಕಂಡು ಬೆರಗಾದೆ. ನಾನು ಎಷ್ಟೊಂದು ಕಾರ್ಯಕ್ರಮದಲ್ಲಿ ಭಾಗವಹಿಸಿದರೂ ಮೈಕ್‌ ಹಿಡಿದು ಮಾತನಾಡಿದವಳಲ್ಲ. ಇಂದು ಈ ಮಕ್ಕಳ ಉತ್ಸಾಹವನ್ನು ಕಂಡು ಎರಡು ಮಾತನಾಡದೆ ಹೋದರೆ ತಪ್ಪಾದೀತು. ನನ್ನ ಬಾಲ್ಯದಲ್ಲಿ ಇಂತಹ ಅವಕಾಶ ದೊರೆಯುತ್ತಿದ್ದರೆ ಚೆನ್ನಾಗಿರುತ್ತಿತ್ತು. ಕಾರ್ಯಕ್ರಮವನ್ನು ಕಂಡು ಬಹಳಷ್ಟು ಸಂತೋಷವಾಯಿತು ಎಂದು ಅವರು ಹೇಳಿದರು. 

ಅಧ್ಯಕ್ಷತೆ ವಹಿಸಿದ್ದ ಚಿಣ್ಣರ ಬಿಂಬದ ರೂವಾರಿ ಪ್ರಕಾಶ್‌ ಭಂಡಾರಿ ಅವರು ಮಾತನಾಡಿ, ನಮ್ಮ ಸಂಸ್ಥೆಯು ದಿನದಿಂದ ದಿನಕ್ಕೆ ಹೆಮ್ಮರವಾಗಿ ಬೆಳೆಯುತ್ತಿರುವುದನ್ನು ಕಂಡಾಗ ಸಂತೋಷವಾಗುತ್ತಿದೆ. ಈ 27 ಶಿಬಿರಗಳು ಕಾರ್ಯನಿರ್ವಹಿಸುತ್ತಿವೆ. ನಿಮ್ಮೆಲ್ಲರ ಪ್ರೋತ್ಸಾಹವೇ ಈ ಯಶಸ್ಸಿಗೆ ಕಾರಣವಾಗಿದೆ. ನಿಮ್ಮೆಲ್ಲರ ಸಹಕಾರ ಸದಾ ಹೀಗೆಯೇ ಇರಲಿ. ಮಕ್ಕಳನ್ನು ಒಳ್ಳೆಯ ರೀತಿಯಲ್ಲಿ ಬೆಳೆಸಲು ನಾವೆಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದರು.

ವನಿತಾ ನೋಂಡಾ ಅವರು ಮಾತನಾಡಿ, ಪ್ರಸ್ತುತ ಬಂಟರ ಸಂಘ ಅಂಧೇರಿ- ಬಾಂದ್ರಾ ಸಮಿತಿಯ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆಯಾಗಿ, ಸಾಂತಾ ಕ್ರೂಜ್‌ ಕನ್ನಡ ಸಂಘದ ಸಾಂಸ್ಕೃತಿಕ ಸಮಿತಿಯ ಮುಖ್ಯಸ್ಥೆಯಾಗಿ ನಾನು ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದರೆ ಅದಕ್ಕೆ ಚಿಣ್ಣರ ಬಿಂಬ ಕಾರಣವಾಗಿದೆ. ನನ್ನೆಲ್ಲಾ ಶ್ರೇಯಸನ್ನು ಚಿಣ್ಣರ ಬಿಂಬಕ್ಕೆ ಅರ್ಪಿಸಲು ಹೆಮ್ಮೆಯಾಗುತ್ತಿದೆ ಎಂದು ನುಡಿದು ಶುಭಹಾರೈಸಿದರು.

ವೇದಿಕೆಯಲ್ಲಿ ಜಗದೀಶ್‌ ರಾವ್‌, ರಮೇಶ್‌ ರೈ, ರೇಣುಕಾ ಪ್ರಕಾಶ್‌ ಭಂಡಾರಿ, ವಿಜಯ ಕೋಟ್ಯಾನ್‌, ಶಿಬಿರದ ಮುಖ್ಯಸ್ಥೆ ಅಶ್ವಿ‌ನಿ ಶಶಿಧರ ಶೆಟ್ಟಿ, ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥೆ ಸುನೀತಾ ಸಂತೋಷ್‌ ಶೆಟ್ಟಿ, ಭಜನೆ ಶಿಕ್ಷಕಿ ಸುಚಿತ್ರಾ ಶೆಟ್ಟಿ ಉಪಸ್ಥಿತರಿದ್ದರು. 

ಮಕ್ಕಳಿಗೆ ಭಜನೆ, ಶ್ಲೋಕ ಪಠಣೆ, ಭಾವಗೀತೆ, ಜಾನಪದ ಗೀತೆ, ಭಾಷಣ ಇನ್ನಿತರ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ತೀರ್ಪುಗಾರರಾಗಿ ಉಮೇಶ್‌ ಜೋಯ್ಸ ಮತ್ತು ಅರುಣ್‌ ಜಿ. ದಾಸಪ್ಪ ಅವರು ಸಹಕರಿಸಿದರು. ಸ್ನಿಗಾœ ಶೆಟ್ಟಿ, ಜ್ಯೋತಿ ಸುಂಕದ ಹಾಗೂ ಶ್ರೇಯಾ ಶೆಟ್ಟಿಗಾರ್‌ ಪ್ರಾರ್ಥನೆಗೈದರು. ಅತಿಥಿ-ಗಣ್ಯರು ವಿವಿಧ ಸ್ಪರ್ಧೆಗಳಲ್ಲಿ ವಿಜೇರಾದ ಮಕ್ಕಳಿಗೆ ಬಹುಮಾನ ವಿತರಿಸಿ ಶುಭಹಾರೈಸಿದರು.

ಪವಿತ್ರಾ ದೇವಾಡಿಗ, ಸುಸಮ್ಯಾ ರಾವ್‌, ಗಗನ್‌ ಮೂಲ್ಯ ಕಾರ್ಯಕ್ರಮ ನಿರ್ವಹಿಸಿದರು. ಜೀವನ್‌ ಗೌಡ, ಪ್ರಣವ್‌ ಕುಲಾಲ್‌, ವಿಘ್ನೇಶ್‌ ಪೂಜಾರಿ ಅತಿಥಿಗಳನ್ನು ಹಾಗೂ ತೀರ್ಪುಗಾರರನ್ನು ಪರಿಚಯಿಸಿದರು. ಕಾಂತಿ ಶೆಟ್ಟಿ, ಸರಳಾ ರಾವ್‌, ಪದ್ಮಿನಿ ಕುಂಟೂರು, ನಮಿತಾ ಆಚಾರ್ಯ, ಅಕ್ಷತಾ ಶೆಟ್ಟಿಗಾರ್‌ ಅವರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು. ಸುಮಿತ್ರಾ ದೇವಾಡಿಗ ವಂದಿಸಿದರು. ಮಕ್ಕಳು, ಪಾಲಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

CM-Shiggavi

By Election: ಬೊಮ್ಮಾಯಿ 4 ಬಾರಿ ಗೆದ್ರೂ ಕ್ಷೇತ್ರದ ಬಡವರಿಗೆ ಒಂದೂ ಮನೆ ಕಟ್ಟಿಸಿಲ್ಲ: ಸಿಎಂ

Hasanmbe

Hassan: ಹಾಸನಾಂಬೆ ದೇವಿಗೆ ಈ ಬಾರಿ ದಾಖಲೆ ಪ್ರಮಾಣದಲ್ಲಿ ಹರಿದು ಬಂದ ಆದಾಯ!

1-gopal

Maharashtra polls: ಗೋಪಾಲ್ ಶೆಟ್ಟಿ ನಾಮಪತ್ರ ಹಿಂಪಡೆಯುವಲ್ಲಿ ಯಶಸ್ವಿಯಾದ ಬಿಜೆಪಿ

5

Chocolate ಕೇವಲ ಸಸ್ಯಾಹಾರವೇ? ಸಸ್ಯಾಹಾರಿಗಳೇ ಗಮನಿಸಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

9-desi

Kannada Alphanbets: “ಕ’ ಕಾರದಲ್ಲಿನ ವಿಶೇಷ:‌ ಕನ್ನಡ ಅಕ್ಷರಮಾಲೆಯಲ್ಲಿನ “ಕ’ ಕಾರ ವೈಭವ

8-

ನ.9: ವಿಶ್ವ ಕನ್ನಡ ಹಬ್ಬ: ಈ ಬಾರಿ ಸಿಂಗಾಪುರದಲ್ಲಿ ರಂಗೇರಲಿರುವ ಸಂಭ್ರಮ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

1-qwewqeqw

Pro Kabaddi;ಬೆಂಗಳೂರು ಬುಲ್ಸ್‌  ಜಯಭೇರಿ: ತಮಿಳ್‌ ತಲೈವಾಸ್‌ಗೆ 32-36 ಅಂಕಗಳ ಸೋಲು

1-ewewqe

Udupi;ಅಪಾರ್ಟ್ ಮೆಂಟ್ ನಲ್ಲಿ ಪಾರ್ಟಿ ವೇಳೆ ಸಿಲಿಂಡ‌ರ್ ಸ್ಫೋ*ಟ: ಅಪಾರ ಹಾನಿ

9

Kasaragod: ಪಟಾಕಿ ದುರಂತ ಪ್ರಕರಣ; ಸಾವಿನ ಸಂಖ್ಯೆ 4ಕ್ಕೆ ಏರಿಕೆ

Bommai

By Poll: ಕ್ಷೇತ್ರದಲ್ಲಿ 5ಲಕ್ಷಕ್ಕೂ ಹೆಚ್ಚು ಮನೆಗಳ ಕಟ್ಟಿಸಿರುವೆ, ದಾಖಲೆ ನೋಡಲಿ: ಬೊಮ್ಮಾಯಿ

death

Manipal: ಸಾಲದಿಂದ ಬೇಸತ್ತು ಮಹಿಳೆ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.