ಗಾಂಧಿ ಸ್ತಬ್ಧ ಚಿತ್ರ ಯಾತ್ರೆಗೆ ಅದ್ದೂರಿ ಸ್ವಾಗತ 

Team Udayavani, Oct 12, 2018, 4:01 PM IST

12-october-20.gif

ಹಾವೇರಿ: ಮಹಾತ್ಮಾ ಗಾಂಧೀಜಿ ಅವರ 150ನೇ ಜನ್ಮ ದಿನದ ಅಂಗವಾಗಿ ರಾಜ್ಯದಲ್ಲಿ ಸಂಚರಿಸುತ್ತಿರುವ ಗಾಂಧಿ ಸ್ತಬ್ಧಚಿತ್ರ ಯಾತ್ರೆ ಗುರುವಾರ ಜಿಲ್ಲೆಗೆ ಆಗಮಿಸಿದ್ದು, ರಾಣಿಬೆನ್ನೂರು ಹಾಗೂ ಹಾವೇರಿಯಲ್ಲಿ ಭವ್ಯ ಸ್ವಾಗತ ಕೋರಲಾಯಿತು.

ಪೂರ್ಣಕುಂಭ ಹೊತ್ತ ಮಹಿಳೆಯರು ಹಾಗೂ ಕಲಾ ತಂಡಗಳ ಮೆರವಣಿಗೆಯೊಂದಿ ಗಾಂಧಿ ಸ್ತಬ್ಧಚಿತ್ರ ಯಾತ್ರೆಗೆ ಅದ್ದೂರಿ ಸ್ವಾಗತ ಕೋರಲಾಯಿತು. ದಾವಣಗೆರೆ ಪ್ರವಾಸ ಮುಗಿಸಿ ಹರಿಹರ ಮಾರ್ಗವಾಗಿ ರಾಣಿಬೆನ್ನೂರ ಪ್ರವೇಶ ಮಾಡಿದ ಸ್ತಬ್ಧಚಿತ್ರ ಯಾತ್ರೆಗೆ ಗುರುವಾರ ಬೆಳಗ್ಗೆ ಗಡಿಭಾಗದಲ್ಲಿ ಮಾಗೋಡ ಕ್ರಾಸ್‌ನಲ್ಲಿ ಸ್ವಾಗತಿಸಿ ನಗರದ ವಿವಿಧ ಮಾರ್ಗಗಳಲ್ಲಿ ಮೆರವಣಿಗೆ ನಡೆಸಲಾಯಿತು. ಈ ಸಂದರ್ಭದಲ್ಲಿ ಪೂರ್ಣಕುಂಭಹೊತ್ತ ನೂರಾರು ಮಹಿಳೆಯರು ಹಾಗೂ ನೂರಾರು ಶಾಲಾ ಮಕ್ಕಳು ಭಾಗವಹಿಸಿದ್ದರು. ವಿವಿಧ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳು, ಮಹಿಳಾ ಸಂಘಟಕರು ಭಾಗವಹಿಸಿ ಮೆರವಣಿಗೆಗೆ ಮೆರಗು ತಂದರು.

ಹಾವೇರಿ ಕೆಇಬಿ ವೃತ್ತದಿಂದ ಸ್ವಾಗತ ಕೋರಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು. ಗಾಂಧಿ ವೃತ್ತದಲ್ಲಿ ಸಾರ್ವಜನಿಕ ವೀಕ್ಷಣೆಗೆ ವ್ಯವಸ್ಥೆ ಮಾಡಲಾಯಿತು. ಕಲಾತಂಡದೊಂದಿಗೆ ಮೆರವಣಿಗೆಯಲ್ಲಿ ಶಾಸಕರಾದ ನೆಹರು ಓಲೇಕಾರ ಹಾಗೂ ಸಾಹಿತಿಗಳು, ಮುಖಂಡರು, ವಿವಿಧ ಇಲಾಖೆ ಅಧಿಕಾರಿಗಳು ಭಾಗವಹಿಸಿದ್ದರು.

ಹಾವೇರಿಯಲ್ಲಿ ಶಾಸಕ ನೆಹರು ಓಲೇಕಾರ, ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಸ್‌.ಕೆ. ಕರಿಯಣ್ಣನವರ, ಜಿಲ್ಲಾಧಿಕಾರಿ ಡಾ| ಎಂ.ವಿ. ವೆಂಕಟೇಶ್‌, ತಹಶೀಲ್ದಾರ್‌ ಶಿವಕುಮಾರ, ಜಿಲ್ಲಾ ವಾರ್ತಾಧಿಕಾರಿ ಬಿ.ಆರ್‌. ರಂಗನಾಥ್‌, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಚಿನ್ನಿಕಟ್ಟಿ ಹಾಗೂ ರಾಣಿಬೆನ್ನೂರಿನಲ್ಲಿ ಉಪವಿಭಾಗಾಧಿಕಾರಿ ತಿಪ್ಪೇಸ್ವಾಮಿ, ತಹಶೀಲ್ದಾರ್‌ ಕುಲಕರ್ಣಿ ಮಾಲಾರ್ಪಣೆ ಮೂಲಕ ಸ್ವಾಗತಕೋರಿದರು. ಈ ಸಂದರ್ಭದಲ್ಲಿ ವಿವಿಧ ಗಣ್ಯರು ಹಾಗೂ ವಿವಿಧ ಇಲಾಖಾ ಅಧಿಕಾರಿಗಳು, ಶಾಲಾ ಮಕ್ಕಳು ಇದ್ದರು.

‘ಶಾಂತಿ ಮಾರ್ಗ’ ಮತ್ತು ‘ಸತ್ಯ ಮಾರ್ಗ’ ಹೆಸರಿನಲ್ಲಿ ರಾಜ್ಯಾದ್ಯಂತ ಎರಡು ತಂಡಗಳಾಗಿ ತಲಾ 15 ಜಿಲ್ಲೆಗಳಲ್ಲಿ ಸ್ತಬ್ಧಚಿತ್ರ ಯಾತ್ರೆ ಸಂಚರಿಸಿ ಗಾಂಧೀಜಿ ಅವರ ಜೀವನದ ವಿವಿಧ ಘಟನಾವಳಿಗಳು, ಸ್ವಾತಂತ್ರ್ಯ ಹೋರಾಟದ ಪ್ರತಿಕೃತಿಗಳಿಂದ ಗಮನಸೆಳೆಯುತ್ತಿರುವ ಸ್ತಬ್ಧಚಿತ್ರ, ಹಿನ್ನೆಲೆ ಸಂಗೀತವಾಗಿ ಗಾಂಧಿಪ್ರಿಯ ಗೀತೆಗಳ ಗಾಯನದೊಂದಿಗೆ ಸತ್ಯ, ಅಹಿಂಸೆ, ಭ್ರಾತೃತ್ವದ ಸಂದೇಶ ಹಾಗೂ ಗಾಂಧೀಜಿ ಅವರ ಧ್ವನಿಯ ಭಾಷಣದ ಧ್ವನಿಸುರುಳಿ ಪ್ರಸಾರ ಎಲ್ಲರ ಗಮನ ಸೆಳೆದವು.

ಹಾವೇರಿಗೆ ಆಗಮಿಸಿದ ‘ಶಾಂತಿಮಾರ್ಗ’ ಸ್ತಬ್ಧಚಿತ್ರ ಅ. 2ರಂದು ಮುಖ್ಯಮಂತ್ರಿಯವರಿಂದ ಉದ್ಘಾಟನೆಗೊಂಡು ಬೆಂಗಳೂರು ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಬಳ್ಳಾರಿ, ಕೊಪ್ಪಳ, ಗದಗ, ಬಾಗಲಕೋಟೆ, ರಾಯಚೂರು, ಯಾದರಗಿರಿ, ಕಲ್ಬುರ್ಗಿ, ಬೀದರ ಜಿಲ್ಲೆ ಒಳಗೊಂಡಂತೆ 15 ಜಿಲ್ಲೆಯ 34 ತಾಲೂಕುಗಳಲ್ಲಿ ಸಂಚಾರಿಸಿ ಜಾಗೃತಿ ಮೂಡಿಸಲಿದೆ.

ರಾಣಿಬೆನ್ನೂರ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿಯವರ 150ನೇ ಜಯಂತಿ ನಿಮಿತ್ತ ವಾರ್ತಾ ಇಲಾಖೆ ಹಮ್ಮಿಕೊಂಡಿದ್ದ ಸ್ತಬ್ಧಚಿತ್ರ ಮೆರವಣಿಗೆ ಗುರುವಾರ ಹರಿಹರ ಮೂಲಕ ನಗರಕ್ಕೆ ಆಗಮಿಸಿತು. ನಗರದ ಹೊರ ವಲಯದ ಕಮದೊಡ ಬಳಿ ತಾಲೂಕು ಆಡಳಿತ ಮತ್ತು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ವಿವಿಧ ಶಾಲೆಯ ವಿದ್ಯಾರ್ಥಿಗಳು ಹಾಗೂ ನೂರಾರು ಮಹಿಳೆಯರು ಕುಂಭ ಹೊತ್ತು ಸ್ತಬ್ಧಚಿತ್ರವನ್ನು ಬರಮಾಡಿಕೊಂಡರು. ಅನಂತರ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಹಾವೇರಿಯತ್ತ ಬೀಳ್ಕೊಡಲಾಯಿತು. ಉಪವಿಭಾಗಾಧಿಕಾರಿ ತಿಪ್ಪೇಸ್ವಾಮಿ, ತಹಸೀಲ್ದಾರ್‌ ಸಿ.ಕೆ. ಕುಲಕರ್ಣಿ, ತಾಪಂ ಅಧ್ಯಕ್ಷ ನೀಲಕಂಠಪ್ಪ ಕುಸಗೂರ, ಬಿಇಒ ಎನ್‌ ಶ್ರೀಧರ, ನಗರಸಭಾ ಸದಸ್ಯ ಮಲ್ಲಿಕಾರ್ಜುನ ಅಂಗಡಿ, ನಾಗರಾಜ ಇದ್ದರು.

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-bbb

Shiggaon; ಉಪಚುನಾವಣೆ ಮತದಾನಕ್ಕೆ ಗೈರಾದ ಗಾಯಕ ಹನುಮಂತ ಲಮಾಣಿ

ajjamper-Qadri

Adi Jambava Samavesha: ಅಂಬೇಡ್ಕರ್‌ ಇಸ್ಲಾಂ ಧರ್ಮ ಸೇರಲು ಸಜ್ಜಾಗಿದ್ದರು: ಖಾದ್ರಿ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

Lokayukta Raid: ಹಾವೇರಿಯಲ್ಲಿ ಎಇ ಕಾಶೀನಾಥ್ ಭಜಂತ್ರಿ ನಿವಾಸದ ಮೇಲೆ ಲೋಕಾಯುಕ್ತ ದಾಳಿ

CM-Siddu–Hubballi

By Polls: ಮದ್ಯ ಉದ್ಯಮಿಗಳಿಂದ 700 ಕೋ.ರೂ. ಲೂಟಿ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸಿಎಂ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.