ಹಕ್ಕು ಪಡೆಯಲು ಜಾಗೃತಿ ಅವಶ್ಯ
Team Udayavani, Oct 13, 2018, 11:05 AM IST
ಬಸವಕಲ್ಯಾಣ: ಸಮಾಜದಲ್ಲಿ ಹಲವಾರು ಪ್ರಶ್ನೆಗಳು ನಮ್ಮನ್ನು ಕಾಡುತ್ತಿದ್ದರೂ ಮಾನವರು ಮಾತ್ರ ತಮ್ಮಷ್ಟಕ್ಕೆ ತಾವೇ ಅಭಿವೃದ್ಧಿ ಹೊಂದುತ್ತಿದ್ದೇವೆ ಎಂಬ ಭ್ರಮೆಯಲ್ಲಿದ್ದಾರೆ ಎಂದು ಎಸ್‌ಐಒ ರಾಜ್ಯಧ್ಯಕ್ಷ ರ ಫೀಕ್ ಅಹ್ಮದ್ ಹೇಳಿದರು.
ನಗರದ ಹಳೆ ತಹಶೀಲ್ದಾರ್ ಕಚೇರಿ ಬಳಿ ನಡೆದ “ಅರಿವಿನ ನಾಳೆಗಾಗಿ’ ರ್ಯಾಲಿಯಲ್ಲಿ ಮಾತನಾಡಿದ ಅವರು, ಸುಖ ಶಾಂತಿ ಬದುಕು ನಮ್ಮದಾಗಬೇಕಾದರೆ, ನಾವು ಮೊದಲು ಜಾಗೃತರಾಗಬೇಕು. ಮತ್ತು ಭ್ರಷ್ಟ ವ್ಯವಸ್ಥೆಯ ವಿರುದ್ಧ ಹೋರಾಟ ಮಾಡಬೇಕು ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಮೌಲಾನಾ ಯುಸುಫ್ ಕುನ್ನಿ ಮಾತನಾಡಿ, ದೇಶದಲ್ಲಿ ಅರಾಜಕತೆ ಮತ್ತು ಭ್ರಷ್ಟಾಚಾರ ತಾಂಡವಾಡುತ್ತಿದೆ. ನಮ್ಮನ್ನಾಳುವ ಮುಖಂಡರು ನಮ್ಮನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಆರೋಪಿಸಿದರು.
ಪಕ್ಷಗಳ ಪರಸ್ಪರ ಅರ್ಥಹೀನ-ಅನೈತಿಕ ರಾಜಕೀಯ ಗುಲಾಮಗಿರಿ, ತನಗೆ ತೋಚಿದ ಸಿದ್ಧಾಂತಗಳನ್ನು ನಮ್ಮ ಮೇಲೆ ಹೇರುತ್ತಾ ನಮ್ಮನ್ನು ಸೌಲಭ್ಯಗಳಿಂದ ದೂರ ಇಟ್ಟಿದ್ದಾರೆ. ನಮ್ಮ ಹಕ್ಕು ಪಡೆಯಲು ಯುವಕರು ಒಂದಾಗಿ ಹೋರಾಡಬೇಕು ಎಂದು ಸಲಹೆ ನೀಡಿದರು.
ಎಸ್‌ಐಒ ಮುಖಂಡ ಜೀಶಾನ ಸಿದ್ದೀಕಿ ಮಾತನಾಡಿ, ಅರಿವಿನ ನಾಳೆಗಾಗಿ ಕನಸಿನೊಂದಿಗೆ ನಾಡಿನ ವಿದ್ಯಾರ್ಥಿ ಯುವಕರಿಗಾಗಿ ಇದೇ ಅಕ್ಟೋಬರ್ 19ರಿಂದ 21ರ ವರೆಗೆ ರಾಯಚೂರಿನ ಲಿಟಲ್ ಏಂಜಲ್ಸ್ ಶಾಲೆಯ ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಯುವಕರು ಹೆಚ್ಚು ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ಜಮಾತೆ ಇಸ್ಮಾ ಹಿಂದ್ ಅಧ್ಯಕ್ಷ ಹಾಪೀಜ್ ಅಸ್ಲಂ ಜನಾಬ, ವೆಲ್ಫೆರ್ ಆಫ್ ಇಂಡಿಯಾದ ಜಿಲ್ಲಾ ಕಾರ್ಯದರ್ಶಿ ಮುಜಾಹಿದ್ ಪಾಶಾ ಖುರೇಶಿ, ಶ್ರೀ ಬಸವೇಶ್ವರ ಚಿಕತ್ರಕಲಾ ಕಾಲೇಜಿನ ಪ್ರಾಚಾರ್ಯ ಪ್ರಭುಲಿಂಗಯ್ನಾ ಬಿ.ಟಂಕಸಾಲಿಮಠ, ಅಕ್ರಮಅಲಿ ಮತ್ತಿತರರು ಇದ್ದರು. ಶೇರ ಅಲಿ ನಿರೂಪಿಸಿದರು. ರೀಯಾಜ್ ಪಟೇಲ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Bidar:ವಿ*ಷ ಸೇವಿಸಿ ಆತ್ಮಹ*ತ್ಯೆಗೆ ಯತ್ನಿಸಿದ ಕಾರಂಜಾ ಸಂತ್ರಸ್ತರು
Bidar: ಮಾಜಿ ಉಪ ಸಭಾಪತಿ ಶತಾಯುಷಿ ಕೇಶವರಾವ ನಿಟ್ಟೂರಕರ ಅಸ್ತಂಗತ
Bidar: ಕಾರಂಜಾ ಸಂತ್ರಸ್ತರಿಂದ ಆತ್ಮಹ*ತ್ಯೆ ಅಣಕು ಪ್ರದರ್ಶನ: ಹಲವರು ವಶಕ್ಕೆ
Bidar: ಹಿಂದೂ ಸಮಾವೇಶಕ್ಕೆ ನಿರ್ಬಂಧ ಹೇರಿದ ಜಿಲ್ಲಾಡಳಿತದ ವಿರುದ್ದ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Rahul Gandhi: ದಲಿತನೆಂಬ ಕಾರಣಕ್ಕೆ ಪೊಲೀಸ್ ವಶದಲ್ಲಿ ವ್ಯಕ್ತಿ ಕೊ*ಲೆ
Congress MP: ವಾರಕ್ಕೆ 70 ಗಂಟೆ ಬೇಡ, 4 ದಿನ ಕೆಲಸ ಸಾಕು: ತ.ನಾಡು ಸಂಸದ ಕಾರ್ತಿ
ಕರಾವಳಿಯಲ್ಲಿ “ಕರ್ನಾಟಕ ಕೂಟ’: ಜ. 17-23ರ ವರೆಗೆ ಮಂಗಳೂರು, ಉಡುಪಿಯಲ್ಲಿ
Uppinangady; ಕಾಡಾನೆ ಸಂಚಾರದಿಂದ ಹಿರೇಬಂಡಾಡಿ ಗ್ರಾಮಸ್ಥರು ಭಯಭೀತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.