ದಸರಾ ಯೋಗ ಚಾರಣಕ್ಕೆ ಚಾಲನೆ
Team Udayavani, Oct 14, 2018, 11:50 AM IST
ಮೈಸೂರು: ಆರೋಗ್ಯ ಕೆಟ್ಟ ಮೇಲೆ ಧೃತಿಗೆಡುವ ಬದಲು ಆರೋಗ್ಯ ಕೆಡದಂತೆ ನೋಡಿಕೊಳ್ಳುವುದು ಒಳ್ಳೆಯದು. ಆರೋಗ್ಯ ಸುಸ್ಥಿರವಾಗಿರಲು ಎಲ್ಲರೂ ಯೋಗಾಭ್ಯಾಸ ಮಾಡಬೇಕಿದೆ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ. ಮಹೇಶ್ ಸಲಹೆ ನೀಡಿದರು.
ಯೋಗ ದಸರಾ ಉಪಸಮಿತಿ ವತಿಯಿಂದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ ಶನಿವಾರ ಆಯೋಜಿಸಿದ್ದ ಯೋಗ ಚಾರಣ ಮತ್ತು ದುರ್ಗಾ ನಮಸ್ಕಾರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮನುಷ್ಯನಿಗೆ ಆರೋಗ್ಯ ಬಹಳ ಮುಖ್ಯ. ಆರೋಗ್ಯ ಸರಿಯಿಲ್ಲದಿದ್ದರೆ ಆತ ಏನನ್ನೂ ಮಾಡಲು ಸಾಧ್ಯಲ್ಲ. ಅದಕ್ಕಾಗಿ ಎಲ್ಲರೂ ಪ್ರತಿದಿನ ಯೋಗ ಮಾಡುವ ಮೂಲಕ ಆರೋಗ್ಯ ಕಾಪಾಡಿಕೊಳ್ಳಬೇಕಿದೆ.
ಯೋಗದಿಂದ ಮನಸ್ಸು ಕೂಡ ಉಲ್ಲಾಸವಾಗಿರಲಿದೆ ಎಂದು ತಿಳಿಸಿದರು. ಇದಕ್ಕೂ ಮುನ್ನ ಚಾಮುಂಡಿಬೆಟ್ಟದ ಪಾದದ ಬಳಿ ಹಸಿರು ನಿಶಾನೆ ತೋರುವ ಮೂಲಕ ಚಾರಣಕ್ಕೆ ಚಾಲನೆ ನೀಡಲಾಯಿತು. ಬಳಿಕ ನೂರಾರು ಯೋಗಾಸಕ್ತರು ಸಹಸ್ರ ಮೆಟ್ಟಿಲೇರಿ ಚಾಮುಂಡಿಬೆಟ್ಟಕ್ಕೆ ತೆರಳಿ ದುರ್ಗಾ ನಮಸ್ಕಾರ ಹಾಗೂ ಯೋಗಪ್ರದರ್ಶನ ನೀಡಿದರು.
ಈ ಸಂದರ್ಭದಲ್ಲಿ ಸಾಮಿ ಸರಸ್ವತಿವಿದ್ಯಾ ಕೇಂದ್ರದ ನಾರಾಯಣ ಗುರೂಜಿ, ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್, ಜಿಲ್ಲಾ ಪಂಚಾಯತ್ ಸಿಇಒ ಕೆ.ಜ್ಯೋತಿ, ಸಂಸದ ಪ್ರತಾಪ್ ಸಿಂಹ ಪತ್ನಿ ಅರ್ಪಿತಾ ಸೇರಿದಂತೆ ಇನ್ನಿತರರು ಹಾಜರಿದ್ದರು. ಮೈಸೂರಿನ ಯೋಗ ಸಂಘ, ಸಂಸ್ಥೆಗಳ ಸಹಯೋಗದೊಂದಿಗೆ ಕಾರ್ಯಕ್ರಮ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.