ಹಂಪ್ ಗಳ ದುರಸ್ತಿಯಾಗಲಿ
Team Udayavani, Oct 14, 2018, 2:30 PM IST
ರಸ್ತೆಗಳಲ್ಲಿ ವಾಹನ ಸಂಚಾರ ಸುರಕ್ಷಿತವಾಗಿರಲಿ ಎಂದು ಅಲ್ಲಲ್ಲಿ ಹಂಪ್ ಗಳನ್ನು ಅಳವಡಿಸಲಾಗುತ್ತದೆ. ಆದರೆ ಈ ಹಂಪ್ ಗಳಿಂದ ಸಾರ್ವಜನಿಕರು ಮಾತ್ರ ತೊಂದರೆ ಅನುಭವಿಸುವಂತಾಗಿದೆ. ಮಂಗಳೂರು ನಗರದ ಹಲವೆಡೆ ಫೈಬರ್ ಮಾದರಿಯ ಹಂಪ್ ಗಳನ್ನು ಅಳವಡಿಸಿದ್ದು, ಇದರಿಂದ ಒಂದಲ್ಲ ಒಂದು ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಕೆಲವೆಡೆ ಹಂಪ್ ಗಳೇ ಎದ್ದು ಹೋಗಿ ಸಮಸ್ಯೆ ಸೃಷ್ಟಿಸಿದ್ದರೆ ಇಲ್ಲೊಂದು ಕಡೆ ಹಂಪ್‌ನ ಮೊಳೆಗಳು ಮೇಲೆದ್ದು ವಾಹನ ಸವಾರರಿಗೆ ಸಂಕಷ್ಟ ತಂದೊಡ್ಡಿದೆ.
ಸಂತ ಆ್ಯಗ್ನೆಸ್ ಕಾಲೇಜು ಬಳಿಯ ಮಾರ್ಕರ ಹಿಲ್ ರಸ್ತೆಯಲ್ಲಿ ಅಳವಡಿಸಲಾದ ಹಂಪ್‌ನ ಮೇಲ್ಭಾಗದಲ್ಲಿ ಅಳವಡಿಸಲಾದ ಮೊಳೆಗಳು ಮೇಲೆದ್ದಿದ್ದು, ವಾಹನ ಸವಾರರಿಗೆ ಸಮಸ್ಯೆಯಾಗುತ್ತಿದೆ. ಅದರ‌್ಲಲೂ ದ್ವಿಚಕ್ರ ವಾಹನ ಸವಾರರು ಆ ರಸ್ತೆಯಲ್ಲಿ ಸಂಚರಿಸಲು ಭಯಪಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಈ ಹಿಂದೆ ಹಲವು ದ್ವಿಚಕ್ರ ವಾಹನ ಸವಾರರ ಟಯರ್ ಪಂಚರ್ ಆಗಿದ್ದು, ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾರೂ ಕೂಡ ಇತ್ತ ಗಮನಹರಿಸಿಲ್ಲ. ಇನ್ನಾದರೂ ಈ ಬಗ್ಗೆ ಗಮನಹರಿಸಿ ಹಂಪ್ ಗಳ ದುರಸ್ತಿಗೆ ಕ್ರಮಕೈಗೊಳ್ಳುವಂತಾಗಲಿ.
ಪ್ರಜ್ಞಾ ಶೆಟ್ಟಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?
Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ
Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ
Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್
BJP Internal Dispute: ಶಾಸಕ ಬಸನಗೌಡ ಯತ್ನಾಳ್ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.