ಮಕ್ಕಳ ವೈದ್ಯರ ಸಮಾವೇಶ 


Team Udayavani, Oct 14, 2018, 5:36 PM IST

14-october-21.gif

ಧಾರವಾಡ: ಕೇವಲ ಉತ್ತಮ ಚಿಕಿತ್ಸೆ ಮಾಡಿದರೆ ಸಾಲದು ರೋಗಿಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಬೇಕು. ಅಂದಾಗ ಮಾತ್ರ ಉತ್ತಮ ವೈದ್ಯರಾಗಲು ಸಾಧ್ಯ ಎಂದು ಎಸ್‌ಡಿಎಂ ಕಾಲೇಜಿನ ವೈದ್ಯಕೀಯ ನಿರ್ದೇಶಕ ಡಾ|ನಿರಂಜನಕುಮಾರ ಹೇಳಿದರು. ಭಾರತೀಯ ಮಕ್ಕಳ ವೈದ್ಯರ ಸಂಘದ ರಾಜ್ಯ ಶಾಖೆ ಹಾಗೂ ಜಿಲ್ಲಾ ಮಕ್ಕಳ ವೈದ್ಯರ ಸಂಘದ ವತಿಯಿಂದ ನಗರದ ಸತ್ತೂರಿನ ಡಾ| ಡಿ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡ ‘ಕಾರಪೆಡಿಕಾನ್‌’ 37ನೇ ರಾಜ್ಯಮಟ್ಟದ ಮಕ್ಕಳ ವೈದ್ಯರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು.

ಈ ಹಿಂದೆ ಹುಟ್ಟಿದ 1000 ಗ್ರಾಂ.ಇದ್ದ(ಕಡಿಮೆ ತೂಕ) ಮಗು ರಕ್ಷಣೆ ಮಾಡುವುದೇ ಕಷ್ಟ ಸಾಧ್ಯವಾಗಿತ್ತು. ಆದರೆ ಇಂದಿನ ದಿನಗಳಲ್ಲಿ 600, 700 ಗ್ರಾಂ.(ಅತೀ ಕಡಿಮೆ) ಮಕ್ಕಳನ್ನು ಸುಲಭವಾಗಿ ರಕ್ಷಿಸುವಷ್ಟು ವೈದ್ಯಕೀಯ ಕ್ಷೇತ್ರ ಬೆಳೆದಿದೆ. ಇದೇ ಕಾರಣದಿಂದ ಮಕ್ಕಳ ಸಾವಿನ ಪ್ರಮಾಣ ಶೇ.43ರಿಂದ 37ಕ್ಕೆ ಇಳಿದಿದೆ. ಇನ್ನೂ ಆರೋಗ್ಯಕರ ಹಾಗೂ ಶಕ್ತಿಯುತ ರಾಷ್ಟ್ರ ನಿರ್ಮಾಣಕ್ಕೆ ಆರೋಗ್ಯಕರ ಮಕ್ಕಳೇ ಬೇಕು ಎಂದರು. 

ಮಕ್ಕಳು ಆರೋಗ್ಯದಿಂದ ಬೆಳೆಯುವಂತೆ ಮಕ್ಕಳ ವೈದ್ಯರು ಅನೇಕ ರೀತಿಯಲ್ಲಿ ಕಾರ್ಯ ಮಾಡುತ್ತಿದ್ದಾರೆ. ಕೇವಲ ದೈಹಿಕ ಆರೋಗ್ಯಕ್ಕಿಂತ ಮಾನಸಿಕ ಆರೋಗ್ಯವೂ ಇಂದಿನ ದಿನಗಳಲ್ಲಿ ಅತಿ ಮುಖ್ಯವಾಗಿದೆ. ಹುಟ್ಟಿದ ಪ್ರತಿಯೊಂದು ಮಗುವಿನಲ್ಲಿ ಒಂದಿಲ್ಲೊಂದು ಪ್ರತಿಭೆ ಇದ್ದೇ ಇರುತ್ತದೆ. ಆದರೆ ನಮ್ಮ ಶಿಕ್ಷಣ ವ್ಯವಸ್ಥೆಯಿಂದ ಅವರಲ್ಲಿನ ಕ್ರಿಯಾತ್ಮಕ ಗುಣವೇ ನಶಿಸುವಂತಹ ಸ್ಥಿತಿ ನಿರ್ಮಾಣವಾಗಿದೆ. ಫಿನ್‌ಲ್ಯಾಂಡ್  ದೇಶದ ಮಾದರಿಯಲ್ಲೇ ನಮ್ಮ ದೇಶದಲ್ಲೂ ಶಿಕ್ಷಣ ವ್ಯವಸ್ಥೆ ಜಾರಿಯಾದರೆ ಮಕ್ಕಳಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದರು.

ಭಾರತೀಯ ಮಕ್ಕಳ ವೈದ್ಯರ ಸಂಘದ ರಾಷ್ಟ್ರಾಧ್ಯಕ್ಷ ಡಾ|ಸಂತೋಷ ಸೋನ್ಸ್‌ ಮಾತನಾಡಿ, ವೈದ್ಯಕೀಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸಲು ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮುಂದಾಗಬೇಕು. ಇದರಿಂದ ಸದೃಢ ದೇಶ ನಿರ್ಮಿಸಲು ಸಾಧ್ಯ ಎಂದರು. ಭಾರತೀಯ ಮಕ್ಕಳ ವೈದ್ಯರ ಸಂಘದ ರಾಜ್ಯಾಧ್ಯಕ್ಷ ಡಾ|ರವೀಂದ್ರ ಜೋಶಿ ಅವರು ನೂತನ ಅಧ್ಯಕ್ಷ ಡಾ| ಎನ್‌.ಕೆ. ಕಾಳಪ್ಪನವರ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಇದೇ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಕ್ಕಳ ವೈದ್ಯರಾದ ಡಾ|ಸಂತೋಷ ಸೋನ್ಸ್‌, ಡಾ|ಶ್ರೀನಾಥ ಮುಗಳಿ, ಡಾ|ರಾಜನ್‌ ದೇಶಪಾಂಡೆ, ಡಾ|ಬಾಣಾಪುರಮಠ, ಡಾ|ಯತೇಶ ಪೂಜಾರ ಅವರನ್ನು ಸನ್ಮಾನಿಸಲಾಯಿತು. ನಂತರ ಉತ್ತಮ ಶಾಖೆ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಎಸ್‌ಡಿಎಂ ಆಸ್ಪತ್ರೆ ಮಕ್ಕಳ ವಿಭಾಗದ ಡಾ| ಸ್‌.ಕೆ. ಜೋಶಿ, ಡಾ|ಬಕುಲ ಪರೇಕ, ಡಾ| ರಮೇಶಕುಮಾರ, ಡಾ| ಸಚಿನ್‌ ಕಿನ್ನಾಳಕರ, ಡಾ|ಶಿವಾನಂದ ಐ., ಡಾ|ಎಸ್‌. ಅಂಬಿ ಇದ್ದರು. ಡಾ|ಶ್ರೀನಾಥ ಮುಗಳಿ ಸ್ವಾಗತಿಸಿದರು. ಡಾ|ವಿಜಯ ಕುಲಕರ್ಣಿ ಪ್ರಾಸ್ತಾವಿಕ ಮಾತನಾಡಿದರು. ಡಾ| ಶ್ರೀಕಾಂತ ಪೈ ನಿರೂಪಿಸಿದರು.

ಟಾಪ್ ನ್ಯೂಸ್

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

nelamangala

Leopard Attack: ನೆಲಮಂಗಲ ಸಮೀಪ ಚಿರತೆ ದಾಳಿಗೆ ರೈತ ಮಹಿಳೆ ಬಲಿ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

World Cup; ಖೋ ಖೋ ಪಂದ್ಯಾವಳಿಗೆ ಐಒಎ ಬೆಂಬಲ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

ATP Finals : ಜಾನಿಕ್‌ ಸಿನ್ನರ್‌ಗೆ ಮೊದಲ ಪ್ರಶಸ್ತಿ

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

Women’s Asian Hockey Semi-Finals: ಜಪಾನ್‌ ವಿರುದ್ಧ ಭಾರತ ಫೇವರಿಟ್‌

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ

China Master Badminton: ಸಾತ್ವಿಕ್‌-ಚಿರಾಗ್‌ ಜೋಡಿ ಮರಳಿ ಕಣಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

udupi

udupi: ಮಗನ ಅರಸುತ್ತಾ ಬಂದ ತಾಯಿ: ಇಬ್ಬರು ಮಕ್ಕಳ ಸಹಿತ ವೃದ್ಧೆಯ ರಕ್ಷಣೆ

Dinesh-Gundurao

Health Department: ಸರಕಾರಿ ಆಸ್ಪತ್ರೆ, ಕೇಂದ್ರಗಳಲ್ಲಿ ಔಷಧ ಕೊರತೆ ಇಲ್ಲ: ಸಚಿವ ದಿನೇಶ್‌

CN-Manjunath

Mysuru: ಕೋವಿಡ್‌ ವೇಳೆ ಔಷಧ ಖರೀದಿಯಲ್ಲಿ ನನ್ನ ಪಾತ್ರವಿಲ್ಲ: ಡಾ.ಸಿ.ಎನ್‌.ಮಂಜುನಾಥ್‌

Priyank-Kharghe

Inquiry Report: ಬಿಜೆಪಿಗೆ ’40 ಪರ್ಸೆಂಟ್‌’ ಕ್ಲೀನ್‌ಚಿಟ್‌ ಸಿಕ್ಕಿಲ್ಲ: ಸಚಿವ ಪ್ರಿಯಾಂಕ್‌

4

Udupi: ಚಿನ್ನ, ವಜ್ರಾಭರಣ ಕದ್ದು ಹೋಂ ನರ್ಸ್‌ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.