ನನ್ನ ವಿರುದ್ಧ ಲೈಂಗಿಕ ಆರೋಪ ಸುಳ್ಳು: ಅಕ್ಬರ್
Team Udayavani, Oct 15, 2018, 6:42 AM IST
ಹೊಸದಿಲ್ಲಿ: ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಗುರಿಯಾಗಿರುವ ವಿದೇಶಾಂಗ ಖಾತೆ ಸಹಾಯಕ ಸಚಿವ ಎಂ.ಜೆ.ಅಕ್ಬರ್ ತನ್ನ ವಿರುದ್ಧದ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಇವೆಲ್ಲ ಸುಳ್ಳು ಎಂದು ಹೇಳಿರುವ ಅವರು, ಆರೋಪಿಸಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.
ರವಿವಾರ ಆಫ್ರಿಕಾ ಪ್ರವಾಸದಿಂದ ದಿಲ್ಲಿಗೆ ಹಿಂದಿರುಗಿದ ಸಚಿವ ಅಕ್ಬರ್, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್, ಬಿಜೆಪಿಯ ಹಿರಿಯ ನಾಯಕರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಿದರು. ಮಧ್ಯಾಹ್ನದ ಬಳಿಕ ತಮ್ಮ ನಿರ್ಧಾರದ ಬಗ್ಗೆ ಪತ್ರಿಕಾ ಪ್ರಕಟನೆ ನೀಡಿದರು. “ನನ್ನ ವಿರುದ್ಧದ ಆರೋಪಗಳೆಲ್ಲವೂ ಆಧಾರ ರಹಿತ. ನನ್ನ ವಿರುದ್ಧ ನಡೆಸಲಾದ ಪಿತೂರಿ ಇದಾಗಿದೆ. ಲೋಕಸಭೆ ಚುನಾವಣೆ ಸನ್ನಿಹಿತವಾಗುತ್ತಿರುವಾಗ ಈ ಆರೋಪ ಬರುತ್ತಿರುವುದೇ ಇದಕ್ಕೆ ಸಾಕ್ಷಿ. ಆಧಾರ ರಹಿತ ಆರೋಪಗಳು ಕಾಳ್ಗಿಚ್ಚಿನಂತೆ ಹಬ್ಬುತ್ತವೆ. ಆರೋಪಗಳ ಬಗ್ಗೆ ನನ್ನ ವಕೀಲರು ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ’ ಎಂದು ಹೇಳಿದ್ದಾರೆ.
ಅಕ್ಬರ್ ಹಿಂದೆ ಸಂಪಾದಕರಾಗಿದ್ದಾಗ ಲೈಂಗಿಕ ಕಿರುಕುಳ ನೀಡಿದ್ದರು ಎಂದು 12 ಮಂದಿ ಪತ್ರಕರ್ತರು “ಮಿ ಟೂ’ ಅಭಿಯಾನದ ಮೂಲಕ ಆರೋಪಿಸಿದ ಬೆನ್ನಲ್ಲೇ ಅಕºರ್ ರಾಜೀನಾಮೆಗೆ ಆಗ್ರಹ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Pune: ಮೈದಾನದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ ಬ್ಯಾಟರ್!; ವಿಡಿಯೋ ವೈರಲ್
Alur: ವಿದ್ಯುತ್ ಶಾರ್ಟ್ ಸರ್ಕ್ಯೂಟ್- ಆಕಸ್ಮಿಕ ಬೆಂಕಿ; ಗೃಹೋಪಯೋಗಿ ವಸ್ತುಗಳು ಬೆಂಕಿಗಾಹುತಿ
Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು
Kalaburagi: ವಿದ್ಯುತ್ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ
Sandalwood: ತೆರೆಮೇಲೆ ʼಅನಾಥʼನ ಕನಸು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.