ಮಧು ಬಂಗಾರಪ್ಪ ಇಂದು ನಾಮಪತ್ರ ಸಲ್ಲಿಕೆ
Team Udayavani, Oct 15, 2018, 7:10 AM IST
ಬೆಂಗಳೂರು: ಉಪ ಚುನಾವಣೆ ನಡೆಯಲಿರುವ ಶಿವಮೊಗ್ಗ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿದೆ. ಅದರಂತೆ ಮಂಡ್ಯ ಲೋಕಸಭಾ ಕ್ಷೇತ್ರಕ್ಕೆ ಮಾಜಿ ಶಾಸಕ ಎಲ್.ಆರ್.ಶಿವರಾಮೇಗೌಡ ಹಾಗೂ ಶಿವಮೊಗ್ಗ
ಲೋಕಸಭಾ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರ ಪುತ್ರ ಮಧು ಬಂಗಾರಪ್ಪ ಅವರ ಹೆಸರನ್ನು ಅಂತಿಮಗೊಳಿಸಲಾಗಿದ್ದು, ಇನ್ನೂ ಅಧಿಕೃತ ಪ್ರಕಟಣೆ ಹೊರಡಿಸಬೇಕಿದೆ.
ಈ ಮಧ್ಯೆ, ರಾಮನಗರ ವಿಧಾನಸಭಾ ಕ್ಷೇತ್ರದಿಂದ ಅನಿತಾ ಕುಮಾರಸ್ವಾಮಿ, ಮಂಡ್ಯ ಲೋಕಸಭಾ ಕ್ಷೇತ್ರದಿಂದ ಎಲ್. ಆರ್. ಶಿವರಾಮೇಗೌಡ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಮಧು ಬಂಗಾರಪ್ಪ ಅವರು ಜೆಡಿಎಸ್ ಅಭ್ಯರ್ಥಿಗಳಾಗಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪದ್ಮನಾಭನಗರದ ನಿವಾಸದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಂಡ್ಯ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಶಿವರಾಮೇಗೌಡರನ್ನು ಅಂತಿಮವಾಗಿ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್. ಪುಟ್ಟರಾಜು ಸೇರಿ ಮುಖಂಡರು ಪಾಲ್ಗೊಂಡಿದ್ದರು. ಲಕ್ಷ್ಮೀ ಅಶ್ವಿನ್‌ಗೌಡ ಮಂಡ್ಯ ಲೋಕಸಭಾ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ, ರಾಜಕೀಯ ಸನ್ನಿವೇಶ ಹಾಗೂ ಸೂಕ್ಷ್ಮತೆಗಳ ಹಿನ್ನೆಲೆಯಲ್ಲಿ ಶಿವರಾಮೇಗೌಡರನ್ನು ಆಯ್ಕೆ ಮಾಡಲಾಗಿದೆ. ಇದರಿಂದಾಗಿ ಲಕ್ಷ್ಮೀ ಅಶ್ವಿನ್ ಗೌಡರಿಗೆ ಅಸಮಾಧಾನವಾಗಿದ್ದು, ದೇವೇಗೌಡರು ಈ ಅಸಮಾಧಾನ ತಣಿಸುವ ಕೆಲಸ ಮಾಡಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಸಮರ್ಥ ಅಭ್ಯರ್ಥಿ ಸಿಗದ ಕಾರಣ ಕಾಂಗ್ರೆಸ್ ಪಕ್ಷ ಆ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟು ಕೊಟ್ಟಿದೆ. ಆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಪುತ್ರ ಹಾಗೂ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸಲು ಜೆಡಿಎಸ್ ನಿರ್ಧರಿಸಿತು. ಹಾಗಾಗಿ ವಿದೇಶದಲ್ಲಿರುವ ಮಧು ಬಂಗಾರಪ್ಪ ಅವರಿಗೆ ದೂರವಾಣಿ ಕರೆ ಮಾಡಿ
ದೇವೇಗೌಡರು ತುರ್ತು ಬುಲಾವ್ ನೀಡಿದ್ದಾರೆ. ಅದರಂತೆ ಭಾನುವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಲಿರುವ
ಮಧು ಬಂಗಾರಪ್ಪ ಸೋಮವಾರ ಬೆಳಿಗ್ಗೆ ದೇವೇಗೌಡರನ್ನು ಭೇಟಿ ಮಾಡಲಿದ್ದಾರೆ. ಬಳಿಕ ಬಿ-ಫಾರಂ ಪಡೆದು, ಹೆಲಿಕಾಪ್ಟರ್ ಮೂಲಕ ಶಿವಮೊಗ್ಗಕ್ಕೆ ತೆರಳಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ.
ಕಾರ್ಯಕರ್ತರಿಗೆ ಎಚ್‌ಡಿಡಿ “ಫರ್ಮಾನು’
ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಜತೆಗೆ ಸಿಎಂ ಕುಮಾರಸ್ವಾಮಿ ಅವರು ನಡೆಸಿದ ಮಾತುಕತೆಯಂತೆ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಜಂಟಿಯಾಗಿ ಹೋರಾಟ ಮಾಡಿ, ಐದೂ ಕ್ಷೇತ್ರಗಳನ್ನು ಗೆದ್ದುಕೊಳ್ಳಬೇಕು. ಆ ಮೂಲಕ ಸಮ್ಮಿಶ್ರ ಸರ್ಕಾರದ ಶಕ್ತಿ ಪ್ರದರ್ಶನ ಮಾಡಬೇಕು. ಅದಕ್ಕಾಗಿ “ಕಾಯಾ-ವಾಚಾ-ಮನಸಾ’ ದುಡಿಯುವಂತೆ ಕಾರ್ಯಕರ್ತರಿಗೆ ದೇವೇಗೌಡರು ಫೋನ್‌ಮಾಡಿ “ಫರ್ಮಾನು’ ಹೊರಡಿಸಿದರು ಎನ್ನಲಾಗಿದೆ.
ಈಡಿಗ ಸಮುದಾಯಕ್ಕೆ ಅವಕಾಶ ಸಿಗುತ್ತಿದೆ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪ ನಂತರ ಶಿವಮೊಗ್ಗದಲ್ಲಿ ಈಡಿಗ ಸಮುದಾಯದ ಸಂಸದರು ಆಯ್ಕೆಯಾಗಿಲ್ಲ. ಈಗ ಅವರ ಪುತ್ರ ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸಲಾಗುತ್ತದೆ. ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಹೊಂದಾಣಿಕೆ ಮಾಡಿಕೊಂಡು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಹಗಲಿರುಳು ಶ್ರಮಿಸುವಂತೆ ಕಾರ್ಯಕರ್ತರಿಗೆ ದೂರವಾಣಿ ಕರೆ ಮಾಡಿದ ದೇವೇಗೌಡರು, ಮಧು ಬಂಗಾರಪ್ಪ ನಾಮಪತ್ರ ಸಲ್ಲಿಸಲು ಸೋಮವಾರ ಬರುತ್ತಿದ್ದಾರೆ, ಎಲ್ಲರೂ ಸಿದ್ಧರಾಗಿರಿ ಎಂದರು.
ಮುಖಂಡರೊಂದಿಗೆ ಚರ್ಚೆ: ಇದೇ ವೇಳೆ, ರಾಮನಗರ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಇಕ್ಬಾಲ್ ಹುಸೇನ್ ಕಣಕ್ಕಿಳಿಯುವ ಸಾಧ್ಯತೆಗಳ ಹಿನ್ನೆಲೆಯಲ್ಲಿ ರಾಮನಗರ ಜಿಲ್ಲೆಯ ಅಲ್ಪಸಂಖ್ಯಾತ ಮುಖಂಡರನ್ನು ಭಾನುವಾರ ತಮ್ಮ ನಿವಾಸಕ್ಕೆ ಕರೆಸಿಕೊಂಡು ದೇವೇಗೌಡರು ಮಾತುಕತೆ ನಡೆಸಿದರು.
ಕಣ್ಣೀರಿಟ್ಟಿ ಲಕ್ಷ್ಮೀ ಅಶ್ವಿನ್‌ಗೌಡ
ಕೊನೇ ಕ್ಷಣದಲ್ಲಿ ಟಿಕೆಟ್ ಕೈತಪ್ಪಿದ್ದರಿಂದ ಲಕ್ಷ್ಮೀ ಅಶ್ವಿನ್‌ಗೌಡ ಕಣ್ಣೀರು ಹಾಕಿದ ಪ್ರಸಂಗ ನಡೆಯಿತು. ಈ ವೇಳೆ
ಅವರನ್ನು ಸಮಾಧಾನಪಡಿಸಿದ ದೇವೇ ಗೌಡರು, ರಾಜಕೀಯವಾಗಿ ಸೂಕ್ಷ್ಮ ವಿಚಾರ ಆಗಿರುವುದರಿಂದ ಶಿವರಾಮೇ ಗೌಡರನ್ನು ಆಯ್ಕೆ ಮಾಡಲಾಗಿದೆ. ನಿಮಗಿನ್ನೂ ಚಿಕ್ಕ ವಯಸ್ಸು, ಶಿವರಾಮೇಗೌಡರಿಗೆ ವಯಸ್ಸಾಗಿದೆ. ಹಾಗಾಗಿ, ಉಪಚುನಾವಣೆಯಲ್ಲಿ
ಅವರಿಗೆ ಅವಕಾಶ ಕೊಡೋಣ. ಮುಂದಿನ ಚುನಾವಣೆಯಲ್ಲಿ ನಿಮಗೆ ಟಿಕೆಟ್ ನೀಡಲಾಗುವುದು ಎಂದು ಅಭಯ ನೀಡಿದರು. ಆದರೂ, ಅಶ್ವಿನ್ ಗೌಡ ಕಣ್ಣೀರಿಡುತ್ತಲೇ ಗೌಡರ ನಿವಾಸದಿಂದ ಹೊರ ಬಂದರು. ಈ ಮಧ್ಯೆ, ಎಲ್.ಆರ್.ಶಿವರಾಮೇಗೌಡ ಅವರು, ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಕಾಲಿಗೆ ನಮಸ್ಕರಿಸಿ, ಆಶೀರ್ವಾದ ಪಡೆದುಕೊಂಡರು.
ಯಾವುದೇ ಗೊಂದಲವಿಲ್ಲದೆ ಸರ್ವಾನುಮತದಿಂದ ನನ್ನನ್ನು ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ. ಪಕ್ಷದ ಎಲ್ಲ ಮುಖಂಡರ ಸಮ್ಮುಖದಲ್ಲಿ ಸೋಮವಾರ ನಾಮಪತ್ರ ಸಲ್ಲಿಸುತ್ತೇನೆ.
● ಎಲ್.ಆರ್. ಶಿವರಾಮೇಗೌಡ, ನಿಯೋಜಿತ ಅಭ್ಯರ್ಥಿ.
ಸೋಮವಾರ ನಾಮಪತ್ರ ಸಲ್ಲಿಕೆ ಮಾಡುತ್ತೇನೆ. ದೆಹಲಿಗೆ ತೆರಳುತ್ತಿರುವುದರಿಂದ ದೇವೇಗೌಡರು ಇರಲ್ಲ. ಉಳಿದಂತೆ ಮುಖ್ಯಮಂತ್ರಿ ಸೇರಿ ಪಕ್ಷದ ಎಲ್ಲ ಮುಖಂಡರು ಭಾಗಿಯಾಗುತ್ತಾರೆ. ಬಿಜೆಪಿ ಅಭ್ಯರ್ಥಿ ಯಾರೇ ಆಗಲಿ, ಜನ ನಮ್ಮ ಪರವಾಗಿ ಇದ್ದಾರೆ. ನಮಗೆ ಆಶಿರ್ವಾದ ಮಾಡುತ್ತಾರೆ.
● ಅನಿತಾ ಕುಮಾರಸ್ವಾಮಿ, ನಿಯೋಜಿತ ಅಭ್ಯರ್ಥಿ.
ದೇವೇಗೌಡ ಹಾಗೂ ಕುಮಾರಸ್ವಾಮಿ ನೇತೃತ್ವದಲ್ಲಿ ಆಕಾಂಕ್ಷಿಗಳ ಸಭೆ ನಡೆಸಲಾಯಿತು. ಅಂತಿಮವಾಗಿ ಶಿವರಾಮೇಗೌಡರನ್ನು ಸರ್ವಾನು ಮತದಿಂದ ಆಯ್ಕೆ ಮಾಡಲಾಗಿದೆ. ಯಾವುದೇ ಗೊಂದಲಗಳಿಲ್ಲ. ಲಕ್ಷ್ಮೀ ಅಶ್ವಿನಿಗೌಡರಿಗೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ನೀಡುವ ಬಗ್ಗೆಯೂ ಸಭೆಯಲ್ಲಿ ಚರ್ಚೆ ಆಗಿದೆ.
● ಸಿ.ಎಸ್. ಪುಟ್ಟರಾಜು, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
You Tuber: ನೀಲಿ ಚಿತ್ರತಾರೆ ಆಗಲು ಪಿಎಚ್ ಡಿ ಕಲಿಕೆಯನ್ನೇ ತೊರೆದ ಖ್ಯಾತ ಯೂಟ್ಯೂಬರ್
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.