ನೀರಿನ ದರ ಏರಿಕೆ ಆದೇಶಕ್ಕೆ ಕಾನೂನು ಬಲ
Team Udayavani, Oct 15, 2018, 8:03 AM IST
ಬೆಂಗಳೂರು: ಕೈಗಾರಿಕಾ ಉದ್ದೇಶಕ್ಕೆ ಬಳಸುವ ನೀರಿನ ದರವನ್ನು ಕಳೆದ ಜೂ.1ರಿಂದ ಅನ್ವಯವಾಗುವಂತೆ ಭಾರೀ ಪ್ರಮಾಣದಲ್ಲಿ ಏರಿಸಿ ಆದೇಶ ಹೊರಡಿಸಿದ್ದ ಜಲ ಸಂಪನ್ಮೂಲ ಇಲಾಖೆ, ಇದೀಗ ತನ್ನ ಆದೇಶಕ್ಕೆ ಕಾನೂನು ಬಲ ನೀಡಲು ಮುಂದಾಗಿದೆ. ಈ ನಿಟ್ಟಿನಲ್ಲಿ ಕರ್ನಾಟಕ ಜಲ ಸಂಪನ್ಮೂಲ (ನೀರಿನ ದರ ನಿಗದಿ) ನಿಯಮಗಳು-2002ಕ್ಕೆ ತಿದ್ದುಪಡಿ ತರುವ ಸಂಬಂಧ ಕರಡು ಅಧಿಸೂಚನೆ ಹೊರಡಿಸಿದೆ. ಇದಕ್ಕೆ ಬರುವ ಆಕ್ಷೇಪಣೆಗಳನ್ನು ಪರಿಶೀಲಿಸಿದ ಬಳಿಕ ನಿಯಮಾವಳಿ ತಿದ್ದುಪಡಿ ಮಾಡಿ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು ಎಂದು ಜಲ ಸಂಪನ್ಮೂಲ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಮೇ 25ರಂದು ಈ ದರವನ್ನು ಭಾರೀ ಪ್ರಮಾಣದಲ್ಲಿ ಏರಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಕೈಗಾರಿಕೆಗಳು ಕಾಲುವೆ, ಕೆರೆ, ಜಲಾಶಯಗಳಿಂದ ಪಡೆಯುವ ಪ್ರತಿ ಎಂಸಿಎಫ್ಟಿ ನೀರಿಗೆ 3,200 ರೂ.ನಿಂದ 3 ಲಕ್ಷ ರೂ.ಮತ್ತು ನೈಸರ್ಗಿಕ ಜಲ ಮಾರ್ಗಗಳು, ನದಿ, ಹಳ್ಳಗಳಿಂದ ಪಡೆಯುವ ನೀರಿಗೆ 1,800 ರೂ.ನಿಂದ 1.5 ಲಕ್ಷ ರೂ.ಗೆ ಹೆಚ್ಚಿಸಿತ್ತು. ಆದರೆ, ಗೃಹ ಬಳಕೆ ಉದ್ದೇಶದ ನೀರಿಗೆ ಪ್ರತಿ ಸಿಎಂಎಫ್ಟಿಗೆ 375 ರೂ.ಇದ್ದು, ಇದರಲ್ಲಿ ಯಾವುದೇ ಬದಲಾವಣೆ ಮಾಡಿರಲಿಲ್ಲ. ಕೈಗಾರಿಕಾ ಉದ್ದೇಶಕ್ಕೆ ಬಳಸುವ ನೀರಿನ ದರವನ್ನು ಏಕಾಏಕಿ ಸುಮಾರು 100 ಪಟ್ಟು ಏರಿಸಿದ ಸರ್ಕಾರದ ಕ್ರಮಕ್ಕೆ ಕೈಗಾರಿಕಾ ಸಂಘಟನೆಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ರಾಜ್ಯದಲ್ಲಿ ಕಬ್ಬಿಣ ಮತ್ತು ಉಕ್ಕು, ವಿದ್ಯುತ್ ಉತ್ಪಾದನೆ ಸೇರಿ ಸುಮಾರು 52,545 ಭಾರೀ ಉದ್ದಿಮೆಗಳಿದ್ದು, ದರ ಏರಿಕೆಯಿಂದ ಈ ಕೈಗಾರಿಕೆಗಳ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಆತಂಕವೂ ವ್ಯಕ್ತವಾಗಿತ್ತು.
ದರ ಇಳಿಸಬೇಕೆಂಬ ಒತ್ತಾಯ ಕೈಗಾರಿಕಾ ಸಂಘಟನೆಗಳಿಂದ ಬಂದಿತ್ತು. ಇನ್ನೊಂದೆಡೆ, ದರ ಏರಿಕೆಯನ್ನು ಸಮರ್ಥಿಸಿಕೊಂಡಿದ್ದ ಜಲ ಸಂಪನ್ಮೂಲ ಇಲಾಖೆ, ದರ ಏರಿಕೆ ಮಾಡಿದ್ದರೂ ಇತರ ರಾಜ್ಯಗಳಿಗಿಂತ ಕಡಿಮೆ ಇದೆ. ಅಲ್ಲದೆ, ಗ್ರಾಮೀಣಾಭಿವೃದ್ಧಿ ಮತ್ತು
ಪಂಚಾಯತ್ ರಾಜ್ ಇಲಾಖೆ ಗ್ರಾಮೀಣ ಭಾಗದಲ್ಲಿ ಒದಗಿಸುವ ಕುಡಿಯುವ ನೀರಿಗೆ ಪ್ರತಿ ಸಾವಿರ ಲೀಟರ್‌ಗೆ 6 ರೂ.ದರ ನಿಗದಿಪಡಿಸಿದೆ. ಕೈಗಾರಿಕಾ ಉದ್ದೇಶಕ್ಕೆ ಬಳಸುವ ನೀರಿನ ದರ ಏರಿಕೆಯಾಗಿದ್ದರೂ ಪ್ರತಿ ಸಾವಿರ ಲೀಟರ್‌ಗೆ 5.30 ರೂ.ನಿಂದ 10.60 ರೂ.ಒಳಗಿದೆ. ಹೀಗಾಗಿ, ದರ ಏರಿಕೆ ಅನಿವಾರ್ಯವಾಗಿತ್ತು ಎಂದು ಹೇಳಿತ್ತು.
ಕಾನೂನು ಬಲ ಏಕೆ?: ಕರ್ನಾಟಕ ಜಲ ಸಂಪನ್ಮೂಲ (ನೀರಿನ ದರ ನಿಗದಿ) ನಿಯಮಗಳು-2002ರ ಅನ್ವಯ ಜಲ ಸಂಪನ್ಮೂಲ ಇಲಾಖೆ ನೀರಿನ ದರ ನಿಗದಿಪಡಿಸುತ್ತದೆ. ಕಳೆದ ಮೇ ತಿಂಗಳಲ್ಲಿ ಕೈಗಾರಿಕಾ ಉದ್ದೇಶಕ್ಕೆ ಬಳಸುವ ನೀರಿನ ದರ ಏರಿಕೆ ಮಾಡಿದ್ದರೂ ನಿಯಮಾವಳಿಗೆ ತಿದ್ದುಪಡಿ ತಂದಿರಲಿಲ್ಲ. ದರ ಏರಿಕೆ ಮಾಡಿದ ಬಳಿಕ ನಿಯಮಾವಳಿಗೆ ತಿದ್ದುಪಡಿ ಮಾಡದೇ ಇದ್ದರೆ ದರ ಏರಿಕೆ ವಿರುದಟಛಿ ಕಾನೂನು ಹೋರಾಟ ನಡೆಸಿದಾಗ ಸರ್ಕಾರಕ್ಕೆ ಹಿನ್ನಡೆಯಾಗುತ್ತದೆ. ದರ ಏರಿಕೆ ಆದೇಶವನ್ನು ನ್ಯಾಯಾಲಯ
ರದ್ದುಗೊಳಿಸುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಜಲ ಸಂಪನ್ಮೂಲ (ನೀರಿನ ದರ ನಿಗದಿ) ನಿಯಮಗಳು-2002ರ ನಿಯಮ 3-ಸಿ(2)ಕ್ಕೆ ತಿದ್ದುಪಡಿ ತಂದು ಜಲ ಸಂಪನ್ಮೂಲ ಇಲಾಖೆ ವ್ಯಾಪ್ತಿಯ ನೀರನ್ನು ಕೃಷಿಯೇತರ ಉದ್ದೇಶಕ್ಕೆ ಹೊರತುಪಡಿಸಿ ಬೇರೆ ಯಾವುದೇ ಉದ್ದೇಶಕ್ಕೆ ಅನುಮತಿಯೊಂದಿಗೆ ಬಳಸುವುದಿದ್ದರೆ ಪ್ರಸ್ತುತ ಏರಿಕೆ ಮಾಡಿರುವ ದರ ವಸೂಲಿ ಮಾಡಲು ಅವಕಾಶ ಮಾಡಿಕೊಡಲಾಗುತ್ತದೆ. ಈ ತಿದ್ದುಪಡಿ ಅಂಗೀಕಾರವಾದರೆ ದರ ಏರಿಕೆಗೆ ಕಾನೂನು ಬಲ ಬಂದಂತಾಗುತ್ತದೆ. ನಂತರ ನ್ಯಾಯಾಲಯಗಳೂ ಮಧ್ಯಪ್ರವೇಶಿಸಲು ಅವಕಾಶ ಇರುವುದಿಲ್ಲ ಎಂದು ಅಧಿಕಾರಿಗಳು ಹೇಳುತ್ತಾರೆ.
ಅನುಮೋದನೆ ಬಳಿಕ ಆದೇಶ
ಜಲ ಸಂಪನ್ಮೂಲ ಇಲಾಖೆ ವ್ಯಾಪ್ತಿಯ ನೀರನ್ನು ಕೈಗಾರಿಕಾ ಉದ್ದೇಶಕ್ಕೆ ಬಳಸಲು ನಿಗದಿಪಡಿಸಿದ್ದ ದರವನ್ನು ಏರಿಕೆ ಮಾಡಲು ಸಚಿವ ಸಂಪುಟ ಅನುಮೋದನೆ ಪಡೆದ ಬಳಿಕ ಆದೇಶ ಹೊರಡಿಸಲಾಗಿತ್ತು. ಆ ಸಂದರ್ಭದಲ್ಲಿ ಕರ್ನಾಟಕ ಜಲ ಸಂಪನ್ಮೂಲ (ನೀರಿನ ದರ
ನಿಗದಿ) ನಿಯಮಗಳು-2002ಕ್ಕೆ ತಿದ್ದುಪಡಿ ತರುವ ಷರತ್ತಿನೊಂದಿಗೆ ದರ ಏರಿಕೆ ಆದೇಶ ಹೊರಡಿಸಲಾಗಿದೆ. ಹೀಗಾಗಿ, ನಿಯಮಾವಳಿ ತಿದ್ದುಪಡಿಗೆ ಕರಡು ಅಧಿಸೂಚನೆ ಹೊರಡಿಸಲಾಗಿದ್ದು, ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಅಧಿಸೂಚನೆ ಹೊರಡಿಸಲಾಗುವುದು ಎಂದು ಜಲ ಸಂಪನ್ಮೂಲ ಇಲಾಖೆ ಉನ್ನತ ಅಧಿಕಾರಿಗಳು “ಉದಯವಾಣಿ’ಗೆ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.