ಎಚ್‌1ಎನ್‌1 ತಡೆಗೆ ಕ್ರಮಕ್ಕೆ ಸೂಚನೆ


Team Udayavani, Oct 15, 2018, 12:43 PM IST

parameshwar.jpg

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಎಚ್‌1ಎನ್‌1 ಸೋಂಕು ಹೆಚ್ಚಾಗುತ್ತಿದ್ದು, ಈವರೆಗೆ ಇಬ್ಬರು ಮೃತರಾಗಿದ್ದಾರೆ. ಈ ಹಿನ್ನಲೆಯಲ್ಲಿ ಸೋಂಕು ತಡೆಗೆ ಅಗತ್ಯ ಕ್ರಮ ಕೈಗೊಳ್ಳುವಂತೆ ಬಿಬಿಎಂಪಿ ವೈದ್ಯಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ತಿಳಿಸಿದರು.

ಎಚ್‌1ಎನ್‌1 ಸೋಂಕು ಹೆಚ್ಚಳ ಹಿನ್ನೆಲೆಯಲ್ಲಿ ಭಾನುವಾರ ಗೃಹಕಚೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದಲ್ಲಿ ಈವರೆಗೂ 100 ಮಂದಿಗೆ ಎಚ್‌1ಎನ್‌1 ಸೋಂಕು ತಗುಲಿದೆ. ಇಬ್ಬರು ಮೃತರಾಗಿದ್ದಾರೆ. ಈ ಕುರಿತು ಪಾಲಿಕೆ ವೈದ್ಯಾಧಿಕಾರಿಗಳಿಗೆ ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ. ಈಗಾಗಲೇ ಪಾಲಿಕೆ ವ್ಯಾಪ್ತಿಯಲ್ಲಿ ಜಾಹೀರಾತು, ಭಿತ್ತಿಪತ್ರಗಳ ಮೂಲಕ ಜನರಿಗೆ ಜಾಗೃತಿ ಮೂಡಿಸುವ ಕೆಲಸ ನಡೆಯುತ್ತಿದೆ.

ಗಾಳಿ ಮೂಲಕ ರೋಗ ಹರಡುವುದರಿಂದ ಸಾರ್ವಜನಿಕರು ಎಚ್ಚರ ವಹಿಸಬೇಕು ಎಂದರು. ಬಿಬಿಎಂಪಿ ಆಯುಕ್ತ ಮಂಜುನಾಥ್‌ ಪ್ರಸಾದ್‌ ಮಾತನಾಡಿ, ಕೊಳಚೆ ಪ್ರದೇಶಗಳಲ್ಲಿ ಮಾತ್ರ ಎಚ್‌1ಎನ್‌1 ಬರುತ್ತದೆ ಎಂಬ ಭ್ರಮೆ ಬೇಡ. ಇದೊಂದು ಗಾಳಿಯಿಂದ ಹರಡುವ ರೋಗವಾಗಿದ್ದು, ಇಂತಹದ್ದೇ ಪ್ರದೇಶ ಎಂದು ಗುರುತಿಸುವುದು ಕಷ್ಟ.

ಇನ್ನು ಮಹದೇವಪುರ ಭಾಗದಲ್ಲಿ ಐಟಿ ಉದ್ಯೋಗಿಗಳು ಬೇರೆ-ಬೇರೆ ಕಡೆಯಿಂದ ಬರುತ್ತಿರುವುದರಿಂದ ಆ ಭಾಗದ ಆಸ್ಪತ್ರೆಗಳಲ್ಲಿ 38 ಪ್ರಕರಣ ದಾಖಲಾಗಿವೆ. ಯಾವುದೇ ವ್ಯಕ್ತಿಯಲ್ಲಿ ಎಚ್‌1ಎನ್‌1 ಸೋಂಕು ಇರುವುದು ಪತ್ತೆಯಾದರೆ, ತಕ್ಷಣ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಗೆ ದಾಖಲಿಸಬೇಕು. ಜತೆಗೆ ಅವರ ಕುಟುಂಬ ವರ್ಗ ಸೂಕ್ತ ಪರೀಕ್ಷೆ ಮಾಡಿಸಿಕೊಳ್ಳಬೇಕು. ಈ ಬಗ್ಗೆ ಅಧಿಕಾರಿಗಳಿಗೆ ಜಾಗೃತಿ ಮೂಡಿಸಲು ತಿಳಿಸಲಾಗಿದೆ ಎಂದರು.

ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಮಾತನಾಡಿ, ಎಚ್‌1ಎನ್‌1ನಿಂದಾಗಿ ಪಾಲಿಕೆ ವ್ಯಾಪ್ತಿಗೆ ಬರುವ ಇಬ್ಬರು ಮೃತಪಟ್ಟಿದ್ದಾರೆ. ಇತರೆ ಭಾಗದಿಂದ ಚಿಕಿತ್ಸೆಗೆಂದು ಬೆಂಗಳೂರಿಗೆ ಬರುವರನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಿ ತಪ್ಪು ಅಂಕಿ ಅಂಶ ವರದಿಯಾಗಿದೆ. ಇನ್ನು ಸೋಂಕಿನ ತಡೆಗೆ ಕಟ್ಟು ನಿಟ್ಟಿನ ಕ್ರಮಕ್ಕೆ ಸೂಚಿಸಿದ್ದೇನೆ ಎಂದರು.

ಸಭೆಯಲ್ಲಿ ಮಹಾಲಕ್ಷ್ಮೀ ಬಡಾವಣೆ ಶಾಸಕ ಗೋಪಾಲಯ್ಯ, ರಾಜೀವ್‌ಗಾಂಧಿ ಆರೋಗ್ಯ ಸಂಸ್ಥೆ ನಿರ್ದೇಶಕ ನಾಗರಾಜ್‌, ಆರೋಗ್ಯ ಇಲಾಖೆಯ ಸಾಂಕ್ರಾಮಿಕ ರೋಗಗಳ ಜಂಟಿ ನಿರ್ದೇಶಕ ಡಾ.ಶಿವಕುಮಾರ್‌ ಸಜ್ಜನ್‌ ಶೆಟ್ಟಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Yakshagana

Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ

EC-Comm-sangreshi1

ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ

Cong-CM-Dinner-Meet

Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್‌ ಡಿನ್ನರ್‌ಗೆ ಹೈ ಕಮಾಂಡ್‌ ತಡೆ

Naxal-Meeting

Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್‌ ಮುಕ್ತವಾಯಿತೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-vitla

Vitla; ನಿವೃತ್ತ ಶಿಕ್ಷಕ, ಅರ್ಥಧಾರಿ ಪಕಳಕುಂಜ ಶ್ಯಾಮ ಭಟ್ ವಿಧಿವಶ

1-donald

Trump warns; ಹಮಾಸ್ ಒತ್ತೆಯಾಳುಗಳನ್ನು ಬಿಡುಗಡೆ ಮಾಡದಿದ್ದರೆ ನರಕ…

Yakshagana

Yakshagana: ಕಾಲಮಿತಿ, ಕಾಲಗತಿಯ ಕಾಲದ ಯಕ್ಷಗಾನ-ಚಿಂತನೆ

EC-Comm-sangreshi1

ಜಿ.ಪಂ.,ತಾ.ಪಂ. ಚುನಾವಣೆ ವಿಳಂಬಕ್ಕೆ ಸರಕಾರವೇ ನೇರ ಹೊಣೆ, ನಾವು ಚುನಾವಣೆಗೆ ಸಿದ್ಧ: ಆಯೋಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.