ನಟ ಶಿವರಾಜಕುಮಾರ್ ಮಲ್ಯ ಆಸ್ಪತ್ರೆಗೆ ದಾಖಲು


Team Udayavani, Oct 15, 2018, 3:14 PM IST

shivanna.jpg

ಸ್ಯಾಂಡಲ್​ವುಡ್‍ನ ಹ್ಯಾಟ್ರಿಕ್​ ಹೀರೋ ಶಿವರಾಜಕುಮಾರ್ ಇಂದು ಮಲ್ಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ನಿರಂತರ ಸಿನಿಮಾ ಶೂಟಿಂಗ್, “ದಿ ವಿಲನ್​​’ ಚಿತ್ರದ ಪ್ರಮೋಶನ್ನಲ್ಲಿ ಬ್ಯುಸಿಯಿದ್ದ ಶಿವರಾಜಕುಮಾರ್ ಈಗ ಜ್ವರದಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಭಾನುವಾರ ಕಾಣಿಸಿಕೊಂಡ ತೀವ್ರ ಜ್ವರದಿಂದ ಶಿವಣ್ಣನ ಆರೋಗ್ಯದಲ್ಲಿ ಏರುಪೇರಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಮಲ್ಯ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜ್ವರ ಮತ್ತು ಕೆಮ್ಮು ಹೆಚ್ಚಾದ ಕಾರಣ ಸೆಂಚುರಿ ಸ್ಟಾರ್ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕುಟುಂಬ ಮೂಲಗಳು ತಿಳಿಸಿದೆ.

ಶಿವರಾಜಕುಮಾರ್ ಆಪ್ತರು ಹೇಳುವ ಪ್ರಕಾರ ಅವರು ಜ್ವರದಿಂದ ಬಳುತ್ತಿದ್ದರಿಂದ ಭಾನುವಾರವೇ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆದಿದ್ದರು. ಆದರೆ ಇಂದು ಜ್ವರ ಹೆಚ್ಚಾದ ಹಿನ್ನೆಲೆಯಲ್ಲಿ ಮುಂಜಾನೆಯೇ ಮಲ್ಯ ಆಸ್ಪತ್ರೆಗೆ ಶಿವಣ್ಣ ದಾಖಲಾಗಿದ್ದಾರೆ. ಸದ್ಯಕ್ಕೆ ಗ್ಲೂಕೋಸ್ ಡ್ರಿಪ್ಸ್ ಹಾಕಿದ್ದು ಬೆಳಗ್ಗೆ ಲಘು ಉಪಹಾರ ಸೇವಿಸಿದ್ದಾರೆ ಎನ್ನಲಾಗಿದೆ. ರಾಘವೇಂದ್ರ ರಾಜಕುಮಾರ್ ಹಿರಿಯ ಪುತ್ರ ವಿನಯ್ ರಾಜ್​​​​ಕುಮಾರ್ ಆಸ್ಪತ್ರೆಗೆ ಬಂದು ಆರೋಗ್ಯ ವಿಚಾರಿಸಿ ಹೋಗಿದ್ದಾರೆ.

ಜೊತೆಗೆ ಶಿವರಾಜ​​​ಕುಮಾರ್ ಪುತ್ರಿ ನಿವೇದಿತಾ ಕೂಡಾ ತಂದೆ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಪುನೀತ್ ರಾಜಕುಮಾರ್ ಕೂಡಾ ಪತ್ನಿ ಅಶ್ವಿನಿ ಜೊತೆ ಆಸ್ಪತ್ರೆಗೆ ಭೇಟಿ ನೀಡಿದ್ದು ಶಿವಣ್ಣನ ಆರೋಗ್ಯ ವಿಚಾರಿಸಿದ್ದಾರೆ. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅಪ್ಪು, ಶಿವಣ್ಣಗೆ ಏನೂ ಆಗಿಲ್ಲ. ಸ್ವಲ್ಪ ಜ್ವರ ಹೆಚ್ಚಾಗಿರುವುದರಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ ಅಷ್ಟೇ. ನಮ್ಮೆಲ್ಲರೊಂದಿಗೆ ಆರಾಮವಾಗಿ ಮಾತನಾಡಿದ್ದಾರೆ. ಸಂಜೆ ವೇಳೆಗೆ ಡಿಸ್ಚಾರ್ಜ್​ ಆಗುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ. 

ಶಿವಣ್ಣ ಅಂದ್ರೆ ಡೆಡಿಕೇಷನ್: ನಟ, ನಿರ್ದೇಶಕ ಪ್ರೇಮ್​ ಇಂದು ಮಲ್ಯ ಆಸ್ಪತ್ರೆಗೆ ಭೇಟಿ ನೀಡಿ, ಶಿವಣ್ಣ ಅವರ ಆರೋಗ್ಯ ವಿಚಾರಿಸಿದ್ದಾರೆ, ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ವಲ್ಪ ಜ್ವರ ಇರೋದ್ರಿಂದ ವೈದ್ಯರು ರೆಸ್ಟ್ ತೆಗೆದುಕೊಳ್ಳಲು ತಿಳಿಸಿದ್ದಾರೆ. ಶಿವಣ್ಣ ಇವತ್ತು ಕೂಡ “ದಿ ವಿಲನ್’ ಪ್ರಮೋಷನ್​ಗೆ ಬರುತ್ತೇನೆ ಎಂದು ಫೋನ್​ ಮಾಡಿದ್ದರು.

ಶಿವಣ್ಣ ಅಂದ್ರೆ ಅಷ್ಟು ಡೆಡಿಕೇಷನ್, ಇಂತಹ ಒಂದು ಪೀಸ್​ ಕನ್ನಡದಲ್ಲಿ ಶಿವಣ್ಣ ಒಬ್ಬರೆ ಎಂದು ಹೊಗಳಿದರು. ಅಲ್ಲದೇ ಯಾವುದೇ ಗಾಳಿ ಸುದ್ದಿಗೆ ಯಾರೂ ಕಿವಿ ಕೊಡಬೇಡಿ. ಶಿವಣ್ಣ ಚೆನ್ನಾಗಿದ್ದಾರೆ, ಸಂಜೆ ವೇಳೆಗೆ ಆರೋಗ್ಯವಾಗೇ ಎದ್ದು ಬರುತ್ತಾರೆ ಎಂದರು. ಸದ್ಯ ಶಿವರಾಜ್​ ಕುಮಾರ್ ಅಭಿನಯದ “ರುಸ್ತುಂ’ ಚಿತ್ರದ ಚಿತ್ರೀಕರಣ ನಡೆಯುತ್ತಿದ್ದು, ಶಿವಣ್ಣ-ಸುದೀಪ್ ಜೊತೆಯಾಗಿರುವ  “ದಿ ವಿಲನ್’ ಸಿನಿಮಾ ಇದೇ ತಿಂಗಳು 18ಕ್ಕೆ ಪ್ರಪಂಚದಾದ್ಯಂತ ತೆರೆ ಕಾಣಲಿದೆ.

ಟಾಪ್ ನ್ಯೂಸ್

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

ರಾಜ್ಯದ ಅರಣ್ಯ ವಿಸ್ತರಣೆ, ಸಂರಕ್ಷಣೆಗೆ ವೇಗ ಸಿಗಲಿ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

udupi-Bar-Asso

Udupi: ಸುಪ್ರೀಂ, ಹೈಕೋರ್ಟ್‌ಗಳ ತೀರ್ಪು ಆನ್‌ಲೈನ್‌ನಲ್ಲಿ ಲಭ್ಯ: ನ್ಯಾ.ಸೂರಜ್‌

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ

Udupi: ಯುವ ಗೀತೋತ್ಸವದಲ್ಲಿ ವಿದ್ಯಾರ್ಥಿಗಳಿಗೆ ಕಾರ್ಯಾಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ISRO 2

ISRO; ಬಾಹ್ಯಾಕಾಶದಲ್ಲಿ ಅಲಸಂಡೆ, ಪಾಲಕ್‌ ಬೆಳೆಯಲು ಪ್ಲಾನ್‌!

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

1-ru

PF fraud; ಆರೋಪಿ ಕಂಪೆನಿಗಳಿಗೆ ನಾನು ನಿರ್ದೇಶಕನಲ್ಲ: ರಾಬಿನ್‌ ಉತ್ತಪ್ಪ

1-sambhal

Sambhal; ದೇಗುಲ ಬಳಿಕ 150 ವರ್ಷ ಹಳೆ ಬಾವಿ ಪತ್ತೆ

1-reeeee

Vijay Hazare Trophy Cricket: ಇಂದು ಕರ್ನಾಟಕಕ್ಕೆ ಪುದುಚೇರಿ ಎದುರಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.