ಶೃಂಗೇರಿಯಲ್ಲಿ ಚಂಡಿಕಾ ಯಾಗ ಆರಂಭ


Team Udayavani, Oct 15, 2018, 3:19 PM IST

dvg-1.jpg

ಶೃಂಗೇರಿ: ದಕ್ಷಿಣಾಮ್ನಾಯ ಶ್ರೀ ಶಾರದಾ ಪೀಠದಲ್ಲಿ ನಡೆಯುತ್ತಿರುವ ದಸರಾ ಉತ್ಸವ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಉತ್ಸವದ ಐದನೇ ದಿನವಾದ ಭಾನುವಾರ ಆರಾಧ್ಯ ದೇವತೆ ಶ್ರೀ ಶಾರದೆಗೆ ಗರುಡವಾಹನ ಅಲಂಕಾರ (ವೈಷ್ಣವೀ) ಮಾಡಲಾಗಿತ್ತು. ತಾಯಿ ಶಾರದೆ ಕೈಯಲ್ಲಿ ಶಂಖ, ಚಕ್ರ, ಗಧೆ ಮೊದಲಾದ ಆಯುಧಗಳನ್ನು ಧರಿಸಿ, ಗರುಡವನ್ನೇರಿ ವೈಷ್ಣವಿಯಾಗಿ ಶ್ರೀಮಹಾವಿಷ್ಣುವಿನ ಶಕ್ತಿಯಾಗಿ ಭಕ್ತರನ್ನು ಅನುಗ್ರಹಿಸಿದಳು.

ಜಗದ್ಗುರು ಶ್ರೀ ಭಾರತೀತೀರ್ಥ ಸ್ವಾಮೀಜಿಗಳು ಬೆಳಗಿನ ನಿತ್ಯ ವಿಧಿ ಗಳನ್ನು ಪೂರೈಸಿದ ನಂತರ ಶಾರದಾಂಬಾ ದೇಗುಲಕ್ಕೆ ತೆರಳಿ ಜಗನ್ಮಾತೆಗೆ ಪೂಜೆ ಸಲ್ಲಿಸಿದರು. ನಂತರ ಆಗಮಿಸಿದ ಕಿರಿಯ ಶ್ರೀ ವಿಧುಶೇಖರ ಭಾರತೀ ಸ್ವಾಮೀಜಿಗಳು ಎಲ್ಲಾ ದೇಗುಲಗಳಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿ ಮಂಗಳಾರತಿ ಸ್ವೀಕರಿಸಿದರು. ನಂತರ ಶಾರದಾ ಸನ್ನಿಧಿಗೆ ತೆರಳಿ ಶ್ರೀ ಸೂಕ್ತ ಜಪ, ಭುವನೇಶ್ವರಿ ಜಪ, ಜಗನ್ಮಾತೆಯ ಆವಾಸ ಸ್ಥಾನವೆಂದು ಶಾಸ್ತ್ರದಲ್ಲಿ ತಿಳಿಸಿರುವ ಶ್ರೀ ಚಕ್ರಕ್ಕೆ ನವಾವರಣ ಪೂಜೆ ನೆರವೇರಿಸಿದರು.

ನವರಾತ್ರಿ ಅಂಗವಾಗಿ ಶತಚಂಡಿಕಾಯಾಗದ ಅಂಗವಾಗಿ ಶ್ರೀಮಠದಲ್ಲಿ ಯಾಗಶಾಲೆಯಲ್ಲಿ ಶಾಲಾಪ್ರವೇಶ, ಪುರಶ್ಚರಣ ಆರಂಭಗೊಂಡಿತು. ಶ್ರೀಮಠದ ಅರ್ಚಕ ಶಿವಕುಮಾರಶರ್ಮ ನೇತೃತ್ವದಲ್ಲಿ ಅರ್ಚಕರ ತಂಡ ಯಾಗ ನಡೆಸುತ್ತಿದೆ.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನವದೆಹಲಿಯ ಸ್ವರ್ಣಲತಾ ಸುಬ್ರಮಣಿಯನ್‌ ಮತ್ತು ತಂಡದರಿಂದ ಹಾಡುಗಾರಿಕೆ ನಡೆಯಿತು.ಬೇಗಾರು ಗ್ರಾ.ಪಂ.ಭಕ್ತಾದಿಗಳು ಮತ್ತು ತಾಲೂಕಿನ ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿ ಗಳು ರಾಜ ಬೀದಿ ಉತ್ಸವದಲ್ಲಿ ಭಜನಾ ಕಾರ್ಯಕ್ರಮ ನಡೆಸಿಕೊಟ್ಟರು. 

ರಾತ್ರಿ ಶ್ರೀಮಠದ ಒಳ ಪ್ರಾಂಗಣದಲ್ಲಿ ಜಗದ್ಗುರು ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳು ದರ್ಬಾರ್‌ ನಡೆಸಿದರು. ಸ್ವರ್ಣ ರಥದಲ್ಲಿ ಶಾರದೆಯನ್ನು ಪ್ರತಿಷ್ಠಾಪಿಸಿ, ಮೂರು ಪ್ರದಕ್ಷಿಣೆ ನಂತರ ವೇದ ಪಾರಾಯಣಗಳು, ಪಂಚಾಂಗ ಶ್ರವಣ,ವಾದ್ಯ ಸೇವೆ ಮತ್ತು ಮಹಾಮಂಗಳಾರತಿ ನಡೆಯಿತು.
 
ಸೋಮವಾರದ ಕಾರ್ಯಕ್ರಮ: ಶ್ರೀ ಶಾರದಾಂಬೆಗೆ ವೀಣಾಶಾರದಾಲಂಕಾರ ನೆರವೇರಲಿದೆ. ಉಭಯ ಜಗದ್ಗುರುಗಳಿಂದ ಶ್ರೀ ಶಾರದಾಂಬೆಗೆ ವಿಶೇಷ ಪೂಜೆ, ಸಂಜೆ ಬೀದಿ ಉತ್ಸವ ವಿದ್ಯಾರಣ್ಯಪುರ ಗ್ರಾಪಂ ಭಕ್ತಾದಿಗಳು ಮತ್ತು ವಿವಿಧ ಸಂಘ, ಸಂಸ್ಥೆಯಿಂದ ನಡೆಯಲಿದೆ. ರಾತ್ರಿ ಜಗದ್ಗುರುಗಳ ದರ್ಬಾರ್‌, ದಿಂಡಿ ದೀಪಾರಾಧನೆ, ಅಷ್ಟಾವಧಾನ ಸೇವೆ, ಮಹಾಮಂಗಳಾರತಿ ನಡೆಯಲಿದೆ.

ಸಾಂಸ್ಕೃತಿಕ ಕಾರ್ಯಕ್ರಮ: ಬೆಂಗಳೂರಿನ ವೈ.ಜಿ.ಶ್ರೀಲತಾ ಮತ್ತು ತಂಡದರಿಂದ ವೀಣಾವಾದನ ನಡೆಯಲಿದೆ. 

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-Thirthahalli

Thirthahalli: ಖಾಸಗಿ ಬಾರ್ ಕ್ಯಾಶಿಯರ್ ಬೈಕ್ ಅಪಘಾತದಲ್ಲಿ ನಿಧನ!

9-shivamogga

Shivamogga: ಹೆರಿಗೆ ಬಳಿಕ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಯಲ್ಲಿ ಬಾಣಂತಿ ಸಾವು

6-thirthahalli

Kuppalli: ಅದ್ದೂರಿ ಮಂತ್ರ ಮಾಂಗಲ್ಯ; ಕುವೆಂಪು ಪ್ರತಿಷ್ಠಾನ ಸಮಕಾರ್ಯದರ್ಶಿ ರಾಜೀನಾಮೆ ?

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

Shimoga: ಅಧಿಕಾರಿ ವಿರುದ್ದ ದರ್ಪ ತೋರಿದ ಶಾಸಕರ ಪುತ್ರನ ವಿರುದ್ದ ನಿಖಿಲ್‌ ಗರಂ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

ಈಡಿಗರು ಸತ್ತಿಲ್ಲ, ಮಹಿಳಾ ಅಧಿಕಾರಿ ಹೆದರಬೇಕಿಲ್ಲ: ಪ್ರಣವಾನಂದ ಶ್ರೀ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.