“ವಿಕ್ಟರಿ 2′ ಮನೆ ಸಾಂಗ್ ವೈರಲ್: Watch
Team Udayavani, Oct 15, 2018, 5:19 PM IST
“ರ‍್ಯಾಂಬೋ’ 2 ಚಿತ್ರದ ನಂತರ ನಟ ಶರಣ್ ಅಭಿನಯದ “ವಿಕ್ಟರಿ 2′ ಚಿತ್ರದ ಟ್ರೈಲರ್ ಮತ್ತು ಹಾಡುಗಳು ಈಗಾಗಲೇ ಬಿಡುಗಡೆಯಾಗಿ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದರೆ, ಇತ್ತ ಚಿತ್ರತಂಡ ಚಿತ್ರದ “ನಾವ್ ಮನೆಗ್ ಹೋಗೋದಿಲ್ಲ’ ಎಂಬ ಹಾಡನ್ನು ಬಿಡುಗಡೆ ಮಾಡಿದ್ದು, ಯೂಟ್ಯೂಬ್ ಟ್ರೆಂಡಿಂಗ್‍ನಲ್ಲಿದೆ. ಹಾಡಿಗೆ ಯೋಗರಾಜ್ ಭಟ್ಟರು ಸಾಹಿತ್ಯವನ್ನು ರಚಿಸಿದ್ದಾರೆ.
ಅಂದ ಹಾಗೆ ಯೋಗರಾಜ್ ಭಟ್ಟರು ಈವರೆಗೆ ಸಾಕಷ್ಟು ಹಾಡುಗಳನ್ನು ಬರೆದಿದ್ದಾರೆ. ಅದರಲ್ಲೂ ಕುಡಿತದ ಕುರಿತಾಗಿಯೂ ಒಂದಷ್ಟು ಹಾಡುಗಳನ್ನು ಬರೆದಿದ್ದಾರೆ. ಅದರಲ್ಲಿ ಕೆಲವು ದೊಡ್ಡ ಮಟ್ಟದಲ್ಲಿ ಸದ್ದು ಮಾಡಿವೆ. ಆ ತರಹ ಸದ್ದು ಮಾಡಿದ ಹಾಡಲ್ಲಿ “ಖಾಲಿ ಕ್ವಾಟ್ರು ಬಾಟ್ಲಿ ಹಂಗೆ ಲೈಫು’ ಹಾಡು ಕೂಡಾ ಒಂದು. ಶರಣ್ ನಾಯಕರಾಗಿರುವ “ವಿಕ್ಟರಿ’ ಚಿತ್ರದ ಈ ಹಾಡು ದೊಡ್ಡ ಮಟ್ಟದಲ್ಲಿ ಹಿಟ್ ಆಯಿತು.
ಈಗ “ವಿಕ್ಟರಿ-2′ ಬರುತ್ತಿದೆ. ಸಹಜವಾಗಿಯೇ ಒಂದು ಚಿತ್ರದ ಹಾಡು ಹಿಟ್ ಆಗಿರುವಾಗ, ಅದರ ಮುಂದುವರಿದ ಭಾಗದಲ್ಲೂ ಆ ತರಹದ ಹಾಡನ್ನು ಜನ ನಿರೀಕ್ಷಿಸುತ್ತಾರೆ. ಇದನ್ನು ಗಮನದಲ್ಲಿಟ್ಟುಕೊಂಡಿರುವ “ವಿಕ್ಟರಿ-2′ ತಂಡ ಆ ತರಹದ ಒಂದು ಮಾಸ್ ಸಾಂಗ್ ಅನ್ನು ಮಾಡಿದೆ. “ನಾವ್ ಮನೇಗ್ ಹೋಗೋದಿಲ್ಲ..’ ಎಂದು ಆರಂಭವಾಗುವ ಈ ಹಾಡನ್ನು ವಿಜಯ್ ಪ್ರಕಾಶ್ ತಮ್ಮ ಎಂದಿನ ಧ್ವನಿಗಿಂತ ವಿಭಿನ್ನವಾಗಿ ಹಾಡಿದ್ದಾರೆ.
ಈ ಹಾಡಿಗೆ ಅರ್ಜುನ್ ಜನ್ಯಾ ಸಂಗೀತ ನೀಡಿದ್ದು, ಪುನೀತ್ ರಾಜ್ಕುಮಾರ್, ಶ್ರೀನಗರ ಕಿಟ್ಟಿ, ನೆನಪಿರಲಿ ಪ್ರೇಮ್, ಪ್ರಜ್ವಲ್ ದೇವರಾಜ್, ಯೋಗಿ, ರಿಷಭ್ ಶೆಟ್ಟಿ, ಉಪೇಂದ್ರ, ಚಿರಂಜೀವಿ ಸರ್ಜಾ, ಶ್ರೀ ಮುರಳಿ, ಯಶ್, ಅಜಯ್ ರಾವ್, ಪವನ್ ಒಡೆಯರ್, ಸಿಂಪಲ್ ಸುನಿ ಹಾಗೂ ಇನ್ನಿತರರು ಈ ಹಾಡನ್ನು ಕೇಳಿ ಫಿದಾ ಆಗಿದ್ದಾರೆ. ಅಲ್ಲದೇ ಈ ಹಾಡು ಹಳೆಯ ಹಾಡುಗಳ ದಾಖಲೆಯನ್ನು ಮುರಿಯುವುದು ಗ್ಯಾರಂಟಿ ಎಂದು ಎಲ್ಲರೂ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಚಿತ್ರವು ಪಕ್ಕಾ ಕಾಮಿಡಿ ಎಂಟರ್ಟ್ರೈನರ್ ಆಗಿದ್ದು, ಡಬಲ್ ಮಿನಿಂಗ್ ಡೈಲಾಗ್ ಅಬ್ಬರ ಜೋರಾಗಿದೆ.
ಶರಣ್ ಜತೆ ಸಾಧು ಕೋಕಿಲಾ ಹಾಗೂ ರವಿಶಂಕರ್ ವಿಶೇಷ ಗೆಟಪ್‍ನಲ್ಲಿ ಮಿಂಚಿರುವುದು ಮತ್ತಷ್ಟು ಹಾಸ್ಯಭರಿತವನ್ನಾಗಿಸಿದೆ. ಇನ್ನು ಶರಣ್ ಎದುರಿಗೆ ನಾಯಕಿಯರಾಗಿ ಅಸ್ಮಿತಾ ಸೂದ್ ಹಾಗೂ ಅಪೂರ್ವ ನಟಿಸಿದ್ದಾರೆ. ಚಿತ್ರವನ್ನು ತರುಣ್ ಶಿವಪ್ಪ ನಿರ್ಮಿಸುತ್ತಿದ್ದು, ತರುಣ್ ಸುಧೀರ್ ಅವರ ಕಥೆ ಇದೆ. ಬಹುತೇಕ “ವಿಕ್ಟರಿ’ ತಂಡವೇ ಇಲ್ಲೂ ಕೆಲಸ ಮಾಡಿದೆ. ಹರಿ ಸಂತೋಷ ನಿರ್ದೇಶನ, ಅರ್ಜುನ್ ಜನ್ಯ ಸಂಗೀತ ಚಿತ್ರಕ್ಕಿದ್ದು, ತಬಲಾ ನಾಣಿ, ನಾಸೀನ್, ಅವಿನಾಶ್, ಮಿತ್ರಾ, ಕಲ್ಯಾಣಿ, ಅರಸು ಮತ್ತು ಸಿದ್ದಿ ಸೇರಿದಂತೆ ದೊಡ್ಡ ತಾರಾಬಳಗವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Megha Movie: ನಾನು ಎಂಟು ಸಾರಿ ಕೇಳಿದ ಕಥೆಯಿದು…: ಕಿರಣ್ ರಾಜ್
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.