ತಾಪಮಾನ ಬದಲಾವಣೆ ಸತ್ಯ
Team Udayavani, Oct 16, 2018, 6:00 AM IST
ವಾಷಿಂಗ್ಟನ್: ತಾಪಮಾನ ಬದಲಾವಣೆ ಕುರಿತಂತೆ ಪ್ಯಾರಿಸ್ ಒಪ್ಪಂದದಿಂದ ಹಿಂದೆ ಸರಿದಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ, “ವಾತಾವರಣದಲ್ಲಿ ಬದಲಾವಣೆಯಾಗುತ್ತಿರುವುದು ಕಾಣಿಸುತ್ತಿದೆ’ ಎಂದು ಒಪ್ಪಿಕೊಂಡಿದ್ದಾರೆ. ಅದೂ ಭೀಕರ ಚಂಡಮಾರುತದಿಂದ ಅಮೆರಿಕದ ಕೆಲ ರಾಜ್ಯಗಳು ನಲುಗಿದ ಮೇಲೆ ಈ ಹೇಳಿಕೆ ನೀಡಿದ್ದಾರೆ. ಆದರೆ, ತಾಪಮಾನದಲ್ಲಿ ಬದಲಾವಣೆಯಾಗುತ್ತಿದೆ ಎಂಬ ಎಚ್ಚರಿಕೆ ನೀಡಿದ್ದ ವಿಜ್ಞಾನಿಗಳು ರಾಜಕೀಯ ಅಜೆಂಡಾ ಹೊಂದಿದ್ದಾರೆ ಎಂದೂ ಆರೋಪಿಸಿದ್ದಾರೆ. ವಾತಾವರಣ ಬದಲಾವಣೆ ಸತ್ಯವೆಂದು ಒಪ್ಪಿಕೊಂಡರೂ, ವಾತಾವರಣ ದಲ್ಲೇ ಮತ್ತೆ ಬದಲಾಗಬಹುದು, ಹಿಂದಿನ ತಂಪಿನ ಸ್ಥಿತಿಗೆ ಬರಬಹುದು ಎಂದು ಹೇಳುವ ಮೂಲಕ ಟ್ರಂಪ್ ಅಚ್ಚರಿ ಮೂಡಿಸಿದ್ದಾರೆ. ಕಳೆದ ವರ್ಷವಷ್ಟೇ ತಾಪಮಾನ ಬದಲಾವಣೆ ಒಂದು ಸುಳ್ಳು ಎಂದು ಹೇಳಿ ಪ್ಯಾರೀಸ್ ಒಪ್ಪಂದದಿಂದ ಹಿಂದೆ ಸರಿಯುವ ತೀರ್ಮಾನ ತೆಗೆದು ಕೊಂಡಿದ್ದರು.
ಹತ್ಯಾಕಾಂಡದಲ್ಲಿ ಪುಟಿನ್?: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಹತ್ಯಾಕಾಂಡ ಮತ್ತು ವಿಷ ಪ್ರಾಶನ ಪ್ರಕರಣಗಳಲ್ಲಿ ಬಹುಷಃ ಭಾಗಿಯಾಗಿರ ಬಹುದು. ಅದು ಅಮೆರಿಕದಲ್ಲಿ ಅಲ್ಲ ಎಂದಿದ್ದಾರೆ ಟ್ರಂಪ್. ರಷ್ಯಾದಲ್ಲಿ ಪುಟಿನ್ ವಿರೋಧಿಗಳು ನಿಗೂಢವಾಗಿ, ವಿಷ ಪ್ರಾಶನದಿಂದ ಸಾವನ್ನಪ್ಪಿದ್ದಾರೆ. ಹೀಗಾಗಿ, ಅವರ ಹೇಳಿಕೆ ಮಹತ್ವ ಪಡೆದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LignoSat: ಮರದಿಂದ ತಯಾರಿಸಿದ ವಿಶ್ವದ ಮೊದಲ ಉಪಗ್ರಹ ಉಡಾವಣೆ!
US Parliament Election: ಭಾರತ ಮೂಲದ 9 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ
US Election 2024: ಟ್ರಂಪ್,ಕಮಲಾ ಮಧ್ಯೆ ತೀವ್ರ ಪೈಪೋಟಿ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
US Election 2024, Kamala Vs Trump: ಅಮೆರಿಕ ಅಧ್ಯಕ್ಷರ ಚುನಾವಣೆ ಹೇಗೆ? ಏನು? ಎತ್ತ?
MUST WATCH
ಹೊಸ ಸೇರ್ಪಡೆ
Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!
By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್.ಡಿ.ದೇವೇಗೌಡ ಗುಡುಗು
Super App: ರೈಲು ಬುಕಿಂಗ್, ಟ್ರ್ಯಾಕ್ಗೆ ‘’ಸೂಪರ್ಆ್ಯಪ್’: ಮುಂದಿನ ತಿಂಗಳು ಬಿಡುಗಡೆ
Kambala: ಪೆಟಾ ಪಿಐಎಲ್; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್
MUDA Case: ಕೇವಲ 14 ಸೈಟ್ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.