ಇಂದು ಮಧು, ಉಗ್ರಪ್ಪ, ಆನಂದ್ ನಾಮಪತ್ರ ಸಲ್ಲಿಕೆ
Team Udayavani, Oct 16, 2018, 6:05 AM IST
ಬೆಂಗಳೂರು:ಶಿವಮೊಗ್ಗ ಉಪ ಚುನಾವಣೆಯಲ್ಲಿ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿರುವ ಮಧು ಬಂಗಾರಪ್ಪ ಹಾಗೂ ಬಳ್ಳಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ವಿ.ಎಸ್.ಉಗ್ರಪ್ಪ ಸಹ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದಾರೆ.
ಮಧು ಬಂಗಾರಪ್ಪ ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಉಪಸ್ಥಿತರಲಿದ್ದಾರೆ. ಕಾಂಗ್ರೆಸ್ ಪರವಾಗಿ ಆರ್.ವಿ.ದೇಶಪಾಂಡೆ ಜತೆಗಿರಲಿದ್ದಾರೆ. ವಿ.ಎಸ್.ಉಗ್ರಪ್ಪ ನಾಮಪತ್ರ ಸಲ್ಲಿಕೆ ವೇಳೆ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹಾಗೂ ಬಳ್ಳಾರಿಯ ಜೆಡಿಎಸ್ ನಾಯಕರು ಉಪಸ್ಥಿತರಲಿದ್ದಾರೆ.
ಮಧು ಬಂಗಾರಪ್ಪ ಅವರು ಸೋಮವಾರವೇ ನಾಮಪತ್ರ ಸಲ್ಲಿಸಬೇಕಿತ್ತಾದರೂ ವಿದೇಶದಲ್ಲಿದ್ದ ಅವರು ಭಾನುವಾರ ಮಧ್ಯರಾತ್ರಿ ವಾಪಸ್ಸಾಗಿ ದೇವೇಗೌಡರಿಂದ ಬಿ ಫಾರಂ ಪಡೆದಿದ್ದರು. ಆದರೆ, ದಾಖಲಾತಿ ಸಿದ್ಧಪಡಿಸಿಕೊಳ್ಳಬೇಕಾದ ಹಿನ್ನೆಲೆಯಲ್ಲಿ ಮಂಗಳವಾರ ನಾಮಪತ್ರ ಸಲ್ಲಿಸಲು ತೀರ್ಮಾನಿಸಲಾಯಿತು.
ಮತ್ತೂಂದೆಡೆ ಜಮಖಂಡಿ ವಿಧಾನಸಭೆ ಕ್ಷೇತ್ರಕ್ಕೆ ಆನಂದ್ ನ್ಯಾಮಗೌಡ ಮಂಗಳವಾರ ನಾಮಪತ್ರ ಸಲ್ಲಿಸಲಿದ್ದು ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿರುವ ಸಿದ್ದರಾಮಯ್ಯ ಹಾಜರಿರಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
Bus Service launch: ಮಂಗಳೂರು, ಕುಂದಾಪುರಕ್ಕೆ “ಅಂಬಾರಿ ಉತ್ಸವ’
CID Inquiry: ಪರಿಷತ್‌ನಲ್ಲಿ ನಡೆದ ಘಟನೆ ಎಂದು ಉಲ್ಲೇಖಿಸಿದ್ದು ತಪ್ಪು: ಬಸವರಾಜ ಹೊರಟ್ಟಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
A.B.Vajapayee Birth Century: ಸರಳತೆಯ ಸಾಕಾರಮೂರ್ತಿ ನಮ್ಮ ವಾಜಪೇಯಿ
ಮೇಲ್ಮನೆಗೆ ನಾನೇ ಫೈನಲ್, ನನ್ನ ಹಕ್ಕುಚ್ಯುತಿ ಬಗ್ಗೆ ಕಾನೂನು ತಜ್ಞರ ಜತೆ ಸಮಾಲೋಚಿಸಿ ಕ್ರಮ
ISRO: ಬಾಹ್ಯಾಕಾಶ ಯೋಜನೆಯ ಪ್ರತಿ 1.ರೂ.ಗೂ ಭಾರತಕ್ಕೆ2.52 ರೂ. ಲಾಭ
UK: ಒಂದೇ ನಿಮಿಷದಲ್ಲಿ 49 ಗ್ರಾಂ ಕಾಟನ್ ಕ್ಯಾಂಡಿ ಸೇವಿಸಿ ದಾಖಲೆ ಬರೆದ ಮಹಿಳೆ
Belekeri Mining Case: ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಜೈಲು ಶಿಕ್ಷೆಗೆ ಹೈಕೋರ್ಟ್ ತಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.