ಅರಮನೆ ಆವರಣದಲ್ಲಿ ಜಂಬೂಸವಾರಿ ತಾಲೀಮು
Team Udayavani, Oct 17, 2018, 11:29 AM IST
ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ ದಿನದಿಂದ ದಿನಕ್ಕೆ ಕಳೆಗಟ್ಟುತ್ತಿದೆ. ವಿಶ್ವವಿಖ್ಯಾತ ದಸರಾ ಮಹೋತ್ಸವದ ಆಕರ್ಷಣೆಯಾದ ವಿಜಯದಶಮಿ ಮೆರವಣಿಗೆಗೆ ದಿನಗಣನೆ ಆರಂಭವಾಗಿದ್ದು, ಮಂಗಳವಾರ ಜಂಬೂಸವಾರಿ ಮೆರವಣಿಗೆಯ ಅಂತಿಮ ಹಂತದ ತಾಲೀಮು ನಡೆಸಲಾಯಿತು.
ಅಂಬಾವಿಲಾಸ ಅರಮನೆ ಆವರಣದಲ್ಲಿ ನಡೆದ ತಾಲೀಮಿನಲ್ಲಿ ಜಂಬೂಸವಾರಿ ಮೆರವಣಿಗೆ ಶಿಸ್ತುಬದ್ಧವಾಗಿ ನಡೆಸಲು ಪೊಲೀಸರಿಗೆ ಪರೇಡ್ ತಾಲೀಮು ನೀಡಲಾಯಿತು. ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ನಡೆದ ತಾಲೀಮಿನಲ್ಲಿ ಪಾಲ್ಗೊಂಡ ವಿವಿಧ ತುಕಡಿಗಳ ಪೊಲೀಸ್ ಸಿಬ್ಬಂದಿ ಶಸ್ತ್ರಾಸ್ತ್ರ ಹಿಡಿದು ಶಿಸ್ತುಬದ್ಧ ಪಥಸಂಚಲನ ನಡೆಸಿದರು.
ಪ್ರಮುಖವಾಗಿ ಕೆಎಸ್‌ಆರ್‌ಪಿ, ಸಿಎಆರ್, ಡಿಎಆರ್, ಅಶ್ವಾರೋಹಿ ದಳ, ಹೋಂ ಗಾರ್ಡ್ ಸೇರಿದಂತೆ ಇನ್ನಿತರ ಪೊಲೀಸ್ ತುಕಡಿಗಳು ಪಥ ಸಂಚಲನ ತಾಲೀಮಿನಲ್ಲಿ ಭಾಗಿಯಾಗಿದ್ದವು. ಪೊಲೀಸ್ ತುಕಡಿಗಳೊಂದಿಗೆ ಗಜಪಡೆ ಸಾರಥಿ ಅಂಬಾರಿ ಆನೆ ಅರ್ಜುನ ಸೇರಿದಂತೆ ಮೊದಲ ತಂಡದ ಆನೆಗಳಿಗೂ ತಾಲೀಮು ನಡೆಸಲಾಯಿತು.
ಅರ್ಜುನ ನೇತೃತ್ವದ ಗಜಪಡೆ ಅಂಬಾರಿ ಕಟ್ಟುವ ಸ್ಥಳದಿಂದ ಅರಮನೆ ಬಲರಾಮ ದ್ವಾರದವರೆಗೆ ಗಜಗಾಂಭೀರ್ಯದಿಂದ ಹೆಜ್ಜೆಹಾಕಿ ಗಮನ ಸೆಳೆದವು. ಈ ಸಂದರ್ಭದಲ್ಲಿ ಸ್ಥಳದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಅರ್ಜುನ ಆನೆಗೆ ಪುಷ್ಪಾರ್ಚನೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.