![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 17, 2018, 12:06 PM IST
ನಟಿ ರಾಧಿಕಾ ಕುಮಾರಸ್ವಾಮಿ “ದಮಯಂತಿ’ ಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ಈಗಾಗಲೇ ಗೊತ್ತಿರುವ ವಿಚಾರ. ಇದೊಂದು ನಾಯಕಿ ಪ್ರಧಾನ ಸಿನಿಮಾವಾಗಿದ್ದು, ದಕ್ಷಿಣ ಭಾರತ ಭಾಷೆಗಳಲ್ಲಿ ಕನ್ನಡದಲ್ಲಿ ಮೊದಲ ಬಾರಿಗೆ ನಿರ್ಮಿಸಲಾಗುತ್ತಿದೆ. ಜೊತೆಗೆ ಉತ್ತಮ ಗ್ರಾಫಿಕ್ಸ್ ಕೂಡ ಅಳವಡಿಸಲಾಗುತ್ತಿದ್ದು, ಇದೀಗ ಚಿತ್ರದಲ್ಲಿನ ರಾಧಿಕಾ ಅವರ ಲುಕ್ ರಿವೀಲ್ ಆಗಿದೆ.
ಹೌದು! ಮಹಿಳಾ ಪ್ರಧಾನ ಚಿತ್ರವಾಗಿರೋ “ದಮಯಂತಿ’ ಫಸ್ಟ್ಲುಕ್ನಲ್ಲಿ ರಾಧಿಕಾ ಮೈ ತುಂಬಾ ಆಭರಣಗಳು, ಬಲಕೆನ್ನೆಯ ಮೇಲೆ ಮಾರ್ಕ್ ಹಾಗೂ ರಗಡ್ ಲುಕ್ ನೋಡುಗರ ಎದೆಯಲ್ಲಿ ನಡುಕ ಹುಟ್ಟಿಸುವಂತಿದೆ. ಇದೊಂದು ಹಾರರ್ ಸಿನಿಮಾವಾಗಿದ್ದು, ಮೊದಲ ಬಾರಿಗೆ ರಾಧಿಕಾ ಈ ಚಿತ್ರದಲ್ಲಿ ತುಂಬಾ ಡಿಫರೆಂಟ್ ಆಗಿ ಕಾಣಿಸಿಕೊಂಡಿರುವುದು, ಫಸ್ಟ್ ಲುಕ್ನಿಂದ ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.
ತೆಲುಗಿನಲ್ಲಿ ತೆರೆಕಂಡ “ಅರುಂಧತಿ’, “ಭಾಗಮತಿ’ ಸಿನಿಮಾಗಳ ಮಾದರಿಯಲ್ಲಿ “ದಮಯಂತಿ’ ಸಿನಿಮಾ ಇರಲಿದ್ದು, ಪ್ರಸ್ತುತ ಕಾಲಘಟ್ಟದ ಕಥೆಯ ಜತೆಗೆ ಐತಿಹಾಸಿಕ ಕಥಾಹಂದರವೂ ಈ ಇರಲಿದೆಯಂತೆ. ತಾರಾಗಣದಲ್ಲಿ ತಬಲಾ ನಾಣಿ, ವಿಜಯ್ ಚೆಂಡೂರ್ ಸೇರಿದಂತೆ ಅನೇಕ ಹಾಸ್ಯ ಕಲಾವಿದರು ಪೋಷಕ ಪಾತ್ರಗಳಿಗೆ ಬಣ್ಣ ಹಚ್ಚಲಿದ್ದಾರೆ.
ಇನ್ನು ನವರಸನ್ ನಿರ್ದೇಶನದಲ್ಲಿ ಮೂಡಿ ಬರಲಿರೋ “ದಮಯಂತಿ’ ಸಿನಿಮಾ ಹಾರರ್ ಕಮ್ ಥ್ರಿಲ್ಲರ್ ಚಿತ್ರವಾಗಿದೆ. ನವೆಂಬರ್ 12ಕ್ಕೆ ಚಿತ್ರದ ಮುಹೂರ್ತ ನೆರವೇರಲಿದ್ದು, ಅಂದೇ ಚಿತ್ರದ ಫಸ್ಟ್ ಲುಕ್ ಟೀಸರ್ ಸಹ ಬಿಡುಗಡೆ ಆಗಲಿದೆ. ಸದ್ಯ ರಾಧಿಕಾ ಕುಮಾರಸ್ವಾಮಿ ಅರ್ಜುನ್ ಸರ್ಜಾ ನಾಯಕತ್ವದ “ಕಾಂಟ್ರಾಕ್ಟ್’ ಮತ್ತು “ಭೈರಾದೇವಿ’ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.