ಸಾಮಾಜಿಕ ಹೊಣೆಗಾರಿಕೆ ಅತ್ಯಗತ್ಯ
Team Udayavani, Oct 17, 2018, 12:53 PM IST
ಬೆಂಗಳೂರು: ಸಾಮಾಜಿಕ ಹೊಣೆಗಾರಿಕೆ ಮಾಧ್ಯಮ ರಂಗದ ಪ್ರಮುಖ ಭಾಗವಾಗಿದ್ದು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶವೊಂದರ ಅಭಿವೃದ್ಧಿಗೆ ಇದು ಸಹಕಾರಿಯಾಗಿದೆ ಎಂದು ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಆರ್.ವೇಣುಗೋಪಾಲ್ ಹೇಳಿದರು.
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದ ಸಂವಹನ ವಿಭಾಗದಲ್ಲಿ ಮಂಗಳವಾರ ಸಂವಹನ ಕೂಟದ ಉದ್ಘಾಟನೆ ಹಾಗೂ ಕಿರಿಯ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಸಂವಹನ ಕೌಶಲತೆ ಅತ್ಯವಶ್ಯಕ. ವಿದ್ಯಾರ್ಥಿಗಳು ಪರಿಶ್ರಮಪಟ್ಟು ಓದಬೇಕು. ಸಮಾಜದ ಎಲ್ಲ ಕ್ಷೇತ್ರಗಳ ಬಗೆಗೆ ತಿಳಿವಳಿಕೆ ಹೊಂದಿರಬೇಕು. ಓದುವ ಮನಸ್ಸಿದ್ದರೆ ವಿದ್ಯಾರ್ಥಿ ಪ್ರಗತಿ ಹೊಂದಲು ಸಾಧ್ಯ ಎಂದರು.
ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಎಂ.ಸಿದ್ದರಾಜು ಮಾತನಾಡಿ, ದೃಶ್ಯ ಮತ್ತು ಪತ್ರಿಕಾ ಮಾಧ್ಯಮದ ಬಂಡಾವಳ ಹೊಡಿಕೆದಾರರು ಗ್ರಾಹಕರನ್ನು ಸೃಷ್ಟಿಮಾಡುವ ಭರದಲ್ಲಿ ಸುದ್ದಿಯ ಗುಣಮಟ್ಟಕ್ಕೆ ಆದ್ಯತೆ ನೀಡುತ್ತಿಲ್ಲ. ಇಡೀ ಪತ್ರಿಕೋದ್ಯಮವೇ ಇಂದು ಒತ್ತಡದಲ್ಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಕುಲಸಚಿವ ಪ್ರೊ.ಬಿ.ಕೆ.ರವಿ ಮಾತನಾಡಿ, ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ವಿಭಾಗ ದೇಶದಲ್ಲಿ ತನ್ನದೇ ಆದ ಛಾಪು ಮೂಡಿಸಿದೆ. ಪತ್ರಿಕೋದ್ಯಮ ವಿದ್ಯಾರ್ಥಿಗಳು ಸದಾ ಅಧ್ಯಯನ ಶೀಲರಾಗಿರಬೇಕು, ಸಾಮಾಜಿಕ ಸ್ವಾಸ್ಥ್ಯ ಕಾಪಾಡುವಂತೆ ತಮ್ಮ ವೃತ್ತಿ ಬದುಕು ರೂಪಿಸಿಕೊಳ್ಳಬೇಕು ಎಂದು ಹೇಳಿದರು.
ಪತ್ರಕರ್ತ ಅಗ್ನಿ ಶ್ರೀಧರ್, ಮೌಲ್ಯಮಾಪನ ಕುಲಸಚಿವ ಪ್ರೊ.ಸಿ.ಶಿವರಾಜು, ಸಂವಹನ ವಿಭಾಗದ ಮುಖ್ಯಸ್ಥ ಪ್ರೊ.ಎನ್.ಎಸ್. ಅಶೋಕ್ ಕುಮಾರ್, ಪ್ರಾಧ್ಯಾಪಕರಾದ ಡಾ.ಎನ್. ಸಂಜೀವರಾವ್, ಡಾ.ಶೈಲಶ್ರೀ, ಪ್ರವೀಣ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Bengaluru: ಏರ್ಪೋರ್ಟ್ ಟಿ-2ಗೆ ವರ್ಟಿಕಲ್ ಗಾರ್ಡನ್ ರಂಗು
Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ
Bengaluru: 19 ಕಡೆ ಫ್ಲಿಪ್ ಕಾರ್ಟ್, ಅಮೆಜಾನ್ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ
Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ
MUST WATCH
ಹೊಸ ಸೇರ್ಪಡೆ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Muddebihal: ವಕ್ಫ್ ಆಸ್ತಿ ವಿವಾದ: ಸಿಎಂಗೆ ಬುದ್ದಿಭ್ರಮಣೆ ಆಗಿದೆ… ನಡಹಳ್ಳಿ ವಾಗ್ದಾಳಿ
ಹಾವೇರಿ-ಸಿದ್ದರಾಮಯ್ಯ ಪಂಜರದ ಗಿಳಿ: ಕೇಂದ್ರ ಸಚಿವ ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.