ಧಾರವಾಡ ಸಾಹಿತ್ಯ ಸಮ್ಮೇಳನ ಮುಂದಕ್ಕೆ ?
Team Udayavani, Oct 18, 2018, 7:44 AM IST
ಧಾರವಾಡ: ನಗರದಲ್ಲಿ ಮುಂಬರುವ ಡಿಸೆಂಬರ್ನಲ್ಲಿ ನಡೆಸಲು ಉದ್ದೇಶಿಸಿರುವ ಅಖೀಲ ಭಾರತ 84ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡುವ ಸಾಧ್ಯತೆಗಳಿವೆ. ಜಿಲ್ಲಾ ಉಸ್ತುವಾರಿ ಸಚಿವ ಆರ್. ವಿ.ದೇಶಪಾಂಡೆ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡಿದ್ದ ಸಾಹಿತಿಗಳು 2019ರ ಜನವರಿಯಲ್ಲಿ ಸಮ್ಮೇಳನ ನಡೆಸಲು ಸರ್ಕಾರ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿಗೆ ಸಲಹೆ ನೀಡಿದ್ದಾರೆ.
ನಾಡೋಜ ಡಾ.ಪಾಟೀಲ ಪುಟ್ಟಪ್ಪ ಮಾತನಾಡಿ, ವಿದ್ಯಾರ್ಥಿಗಳ ಪರೀಕ್ಷೆ ಸಮಯ ನೋಡಿಕೊಂಡು ಸಾಹಿತ್ಯ ಸಮ್ಮೇಳನದ ಸಮಯ, ದಿನಾಂಕ ನಿಗದಿ ಮಾಡಬೇಕು. ಅವಸರದಲ್ಲಿ ಸಮ್ಮೇಳನ ಆಯೋಜಿಸಬಾರದು. ಅರ್ಥಪೂರ್ಣವಾಗಿ ಆಚರಿಸಬೇಕು.ಯಾರೂ ತರಾತುರಿ ಮಾಡಬಾರದು ಎಂದು ಸಲಹೆ ನೀಡಿದರು. ಇದಕ್ಕೆ ಸಂಸದ ಪ್ರಹ್ಲಾದ ಜೋಶಿ, ಹಿರಿಯ ವಕೀಲರಾದ ಪ್ರಕಾಶ ಉಡಿಕೇರಿ, ಡಾ.ರಾಜೇಶ್ವರಿ ಮಹೇಶ್ವರಯ್ಯ, ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ ಸೇರಿದಂತೆ ಅನೇಕರು ಮಾತನಾಡಿ ಮುಂದೂಡುವುದೇ ಸೂಕ್ತ ಎಂದು ಸಲಹೆ ನೀಡಿದರು. ಸರ್ಕಾರದಿಂದ ಸೂಕ್ತ ನೆರವು ಸಿಗಲಿದೆ. ಸಮ್ಮೇಳನಕ್ಕೆ ಕುರಿತಂತೆ ಹಿರಿಯ ಸಾಹಿತಿಗಳು, ಕಸಾಪ ಪದಾಧಿಕಾರಿಗಳು, ಜಿಲ್ಲಾಧಿಕಾರಿ ಜತೆ ಒಂದು ವಾರದೊಳಗೆ ಸಭೆ ನಡೆಸಿ, ನೀಲನಕ್ಷೆ ತಯಾರಿಸಿ ತಮಗೆ ತಲುಪಿಸಬೇಕು ಎಂದು ಸಚಿವ ದೇಶಪಾಂಡೆ ಸೂಚಿಸಿದರು. ಪೂರ್ವಸಿದಟಛಿತೆಗೂ ಗಮನ ನೀಡುವಂತೆ ಸಲಹೆಯಿತ್ತರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Shimoga; ಜಮೀರ್ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
Karkala: ಅಣ್ಣನ ತಿಥಿಗೆ ಬಂದಿದ್ದ ತಂಗಿ ವಿದ್ಯುತ್ ಆಘಾತದಿಂದ ಮೃ*ತ್ಯು
Mangaluru: ಪಂಪ್ವೆಲ್-ಪಡೀಲ್ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Kundapura: ಅಕಾಲಿಕ ಮಳೆ; ಭತ್ತ ಕಟಾವಿಗೆ ಅಡ್ಡಿ; ಬೆಳೆ ನಾಶದ ಭೀತಿಯಲ್ಲಿ ರೈತರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.