ಶಕ್ತಿ ಕೇಂದ್ರದಲ್ಲಿ ಆಯುಧ ಪೂಜೆ
Team Udayavani, Oct 19, 2018, 1:13 PM IST
ಬೆಂಗಳೂರು: ಶಕ್ತಿ ಕೇಂದ್ರ ವಿಧಾನಸೌಧ ಹಾಗೂ ವಿಕಾಸಸೌಧದಲ್ಲಿ ಬುಧವಾರ ಸಚಿವರು, ಅಧಿಕಾರಿ, ನೌಕರರು ಆಯುಧ ಪೂಜಾ ಆಚರಣೆಯನ್ನು ಸಂಭ್ರಮದಿಂದ ನಡೆಸಿದರು.
ವಿಧಾನಸೌಧ ಹಾಗೂ ವಿಕಾಸಸೌಧದ ಪ್ರಮುಖ ಪ್ರವೇಶ ದ್ವಾರಗಳನ್ನು ಬಾಳೆಕಂಬ, ಮಾವಿನ ಸೊಪ್ಪು, ವಿಶೇಷ ಹೂವಿನ ಅಲಂಕಾರದಿಂದ ಸಿಂಗರಿಸಲಾಗಿತ್ತು. ಮುಖ್ಯಮಂತ್ರಿಗಳ ಕಚೇರಿ ಸಚಿವರು, ಮುಖ್ಯ ಕಾರ್ಯದರ್ಶಿಗಳು, ಹಿರಿಯ ಅಧಿಕಾರಿಗಳ ಕಚೇರಿ ಸೇರಿದಂತೆ ಎಲ್ಲ ಕಚೇರಿ, ಕೊಠಡಿ, ಉಗ್ರಾಣ, ಭದ್ರತಾ ಕೊಠಡಿಗಳನ್ನು ಹೂವಿನ ಅಲಂಕಾರ ಮಾಡಲಾಗಿತ್ತು.
ಪ್ರವೇಶ ದ್ವಾರಗಳು, ಕಚೇರಿ ಆವರಣ, ಕಾರಿಡಾರ್, ಲಿಫ್ಟ್, ಮೆಟ್ಟಿಲುಗಳ ಬಳಿ ಚಿತ್ತಾಕರ್ಷಕ ರಂಗೋಲಿ ಮೂಡಿದ್ದವು. ಕಂಪ್ಯೂಟರ್, ಲ್ಯಾಪ್‌ಟಾಪ್, ಕಪಾಟು, ಕಚೇರಿ ಸಾಮಗ್ರಿ, ಸಲಕರಣೆಗಳಿಗೂ ಪೂಜೆ ನೆರವೇರಿಸಿದ್ದು ಕಂಡುಬಂತು. ವಿಕಾಸಸೌಧ, ವಿಧಾನಸೌಧ ನಡುವಿನ ಮುನೇಶ್ವರ ದೇವಾಲಯದ ಬಳಿ ಸರ್ಕಾರಿ ಕಾರುಗಳನ್ನು ಸಾಲಾಗಿ ನಿಲ್ಲಿಸಿ ಪೂಜೆ ಮಾಡಲಾಯಿತು.
ಸಚಿವ ಸಂಪುಟದ ಸಭಾಂಗಣದ ಪ್ರವೇಶ ದ್ವಾರವನ್ನು ವಿಶೇಷವಾಗಿ ಅಲಂಕರಿಸಲಾಗಿತ್ತು. ಮಧ್ಯಾಹ್ನ 2.30ರ ಸುಮಾರಿಗೆ ಸಚಿವ ಸಂಪುಟದ ಪ್ರವೇಶ ದ್ವಾರದ ಮುಂದೆ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಸಚಿವರಾದ ಎಚ್.ಡಿ.ರೇವಣ್ಣ, ಬಂಡೆಪ್ಪ ಕಾಶೆಂಪುರ, ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯ ಭಾಸ್ಕರ್, ಗೃಹ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯೆಲ್ ಇತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.