ನಗರದಲ್ಲಿ ಮತ್ತೆ ಕಾಂಪೋಸ್ಟ್ ಸಂತೆ
Team Udayavani, Oct 19, 2018, 1:13 PM IST
ಬೆಂಗಳೂರು: ನಗರದಲ್ಲಿ ವೈಜ್ಞಾನಿಕ ತ್ಯಾಜ್ಯ ವಿಂಗಡಣೆ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಮತ್ತೆ “ಕಾಂಪೋಸ್ಟ್ ಸಂತೆ’ ಆರಂಭಿಸುವ ಕುರಿತಂತೆ ಬಿಬಿಎಂಪಿಯಲ್ಲಿ ಚರ್ಚೆಗಳು ಆರಂಭವಾಗಿವೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ನಿತ್ಯ ನಾಲ್ಕು ಸಾವಿರ ತ್ಯಾಜ್ಯ ಸೃಷ್ಟಿಯಾಗುತ್ತಿದೆ.
ಆದರೆ, ಶೇ.40ರಷ್ಟು ಪ್ರಮಾಣದ ತ್ಯಾಜ್ಯ ಮಾತ್ರ ವಿಂಗಡಣೆಯಾಗುತ್ತಿದ್ದು, ಉಳಿದ ತ್ಯಾಜ್ಯವನ್ನು ಕ್ವಾರಿಗಳಿಗೆ ನೇರವಾಗಿ ಸುರಿಯಲಾಗುತ್ತಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ತ್ಯಾಜ್ಯ ಸಮಸ್ಯೆ ಉದ್ಭವವಾಗುವ ಸಾಧ್ಯತೆಯಿದ್ದು, ಕೂಡಲೇ ಪಾಲಿಕೆಯ ಎಲ್ಲ ವಾರ್ಡ್‌ಗಳಲ್ಲಿ ಕಾಂಪೋಸ್ಟ್ ಸಂತೆಗಳನ್ನು ಆರಂಭಿಸುವ ಬಗ್ಗೆ ಆಡಳಿತ ಪಕ್ಷ ನಾಯಕ ಆಯುಕ್ತರಿಗೆ ಪತ್ರ ಬರೆದಿದ್ದಾರೆ.
ನಗರದಲ್ಲಿ ದಿನದಿಂದ ದಿನಕ್ಕೆ ತ್ಯಾಜ್ಯ ಪ್ರಮಾಣ ಹೆಚ್ಚಾಗುತ್ತಿದ್ದು, ವಿಂಗಡಣೆ ಪ್ರಮಾಣ ಮಾತ್ರ ಕಡಿಮೆಯಾಗುತ್ತಿದೆ. ಇದರಿಂದಾಗಿ ಮುಂದಿನ ದಿನಗಳಲ್ಲಿ ತ್ಯಾಜ್ಯ ಸಮಸ್ಯೆ ಸೃಷ್ಟಿಯಾಗುವ ಆತಂಕ ಎದುರಾಗಿದೆ. ಆ ಹಿನ್ನೆಲೆಯಲ್ಲಿ ಪಾಲಿಕೆಯ ಎಲ್ಲ 198 ವಾರ್ಡ್‌ಗಳಲ್ಲಿ ತ್ಯಾಜ್ಯ ವಿಂಗಡಣೆಯ ಕುರಿತು ಜನರಿಗೆ ಜಾಗೃತಿ ಮೂಡಿಸುವ ಕಾಂಪೋಸ್ಟ್ ಸಂತೆಗಳನ್ನು ಆರಂಭಿಸುವಂತೆ ಪತ್ರದಲ್ಲಿ ಕೋರಿದ್ದಾರೆ.
ಜಿ.ಪದ್ಮಾವತಿ ಅವರು ಮೇಯರ್ ಆಗಿದ್ದ ಸಂದರ್ಭದಲ್ಲಿ ಪ್ರತಿ ಭಾನುವಾರ ಒಂದೊಂದು ವಾರ್ಡ್‌ನಲ್ಲಿ ಕಾಂಪೋಸ್ಟ್ ಸಂತೆ ನಡೆಸಲಾಗುತ್ತಿತ್ತು. ಆದರೆ, ಪಾಲಿಕೆಯ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕಳೆದ ಒಂದು ವರ್ಷದಿಂದ ಯಾವುದೇ ವಾರ್ಡ್‌ನಲ್ಲಿ ಸಂತೆಗಳನ್ನು ಆಯೋಜನೆ ಮಾಡಿಲ್ಲ. ಇದರೊಂದಿಗೆ ತ್ಯಾಜ್ಯ ವಿಂಗಡಣೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನೂ ಹಮ್ಮಿಕೊಂಡಿಲ್ಲ.
ಈ ಕುರಿತು ಸಾರ್ವಜನಿಕರು ಹಾಗೂ ಹಿರಿಯ ಪಾಲಿಕೆ ಸದಸ್ಯರು ಪಾಲಿಕೆಯ ಸಭೆಗಳಲ್ಲಿ ಮಾತನಾಡಿದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ಆ ಹಿನ್ನೆಲೆಯಲ್ಲಿ ಎಂ.ಶಿವರಾಜು ಅವರು ಆಯುಕ್ತರಿಗೆ ಪತ್ರ ಬರೆದಿದ್ದು, ನಗರದಲ್ಲಿ ತ್ಯಾಜ್ಯ ಸಮಸ್ಯೆ ತಪ್ಪಿಸಲು ಹಾಗೂ ವಿಂಗಡಣೆ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ ಸಮರ್ಪಕವಾಗಿ ಸಂತೆಗಳನ್ನು ಆಯೋಜಿಸುವಂತೆ ತಿಳಿಸಿದ್ದಾರೆ.
ಕಾಂಪೋಸ್ಟ್ ಸಂತೆಗಳ ಅನುಕೂಲಗಳೇನು?: ವಾರ್ಡ್‌ವಾರು ಆಯೋಜಿಸುವ ಕಾಂಪೋಸ್ಟ್ ಸಂತೆಗಳಲ್ಲಿ ವಿವಿಧ ಸಂಸ್ಥೆಗಳು, ಎನ್‌ಜಿಒಗಳು ಹಾಗೂ ಸ್ವಯಂ ಸೇವಕ ಸಂಸ್ಥೆಗಳು ಭಾಗವಹಿಸುತ್ತವೆ. ಜತೆಗೆ ಮನೆಯಲ್ಲಿಯೇ ಉಚಿತವಾಗಿ ಹಾಗೂ ಅತ್ಯಂತ ಕಡಿಮೆ ಖರ್ಚಿನಲ್ಲಿ ತ್ಯಾಜ್ಯವನ್ನು ಗೊಬ್ಬರವನ್ನಾಗಿಸುವ ಉಪಾಯಗಳು ಹಾಗೂ ತಂತ್ರಜ್ಞಾನಗಳ ಕುರಿತು ಮಾಹಿತಿ ನೀಡುತ್ತಾರೆ. ಜತೆಗೆ ಗೊಬ್ಬರವನ್ನು ಮನೆಯಲ್ಲಿಯೇ ಹೇಗೆ ಬಳಸಬಹುದು ಹಾಗೂ ಗೊಬ್ಬರದಿಂದ ಹಣ ಸಂಪಾದನೆಯ ಕುರಿತು ಸಹ ಮಾಹಿತಿ ನೀಡುತ್ತಾರೆ. ಇದರಿಂದಾಗಿ ತ್ಯಾಜ್ಯ ವಿಂಗಡಣೆ ಸಮರ್ಪಕವಾಗಿ ಆಗಿ ಪಾಲಿಕೆಯ ಮೇಲಿನ ಹೊರೆ ಕಡಿಮೆಯಾಗುತ್ತದೆ.
ಕೇವಲ 27 ವಾರ್ಡ್‌ಗಳಲ್ಲಿ ಮಾತ್ರ ಸಂತೆ: ತ್ಯಾಜ್ಯ ವಿಂಗಡಣೆಯ ಕುರಿತು ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಮಹತ್ವಾಕಾಂಕ್ಷಿ ಯೋಜನೆಗೆ ಅಧಿಕಾರಿಗಳಿಂದ ಉತ್ತಮ ಬೆಂಬಲ ದೊರೆಯದ ಹಿನ್ನೆಲೆಯಲ್ಲಿ ವಿಫಲವಾಗಿದೆ. ಪದ್ಮಾವತಿ ಅವರು ಮೇಯರ್ ಆಗಿದ್ದ ಅವಧಿಯಲ್ಲಿ ಪ್ರತಿ ವಾರ ಒಂದು ವಾರ್ಡ್‌ನಲ್ಲಿ ಕಡ್ಡಾಯವಾಗಿ ಕಾಂಪೋಸ್ಟ್ ಸಂತೆ ಆಯೋಜನೆ ಮಾಡುತ್ತಿದ್ದರು. ಆನಂತರದಲ್ಲಿ ಮೇಯರ್ ಆಗಲಿ, ಅಧಿಕಾರಿಗಳಾಗಲಿ ಸಂತೆ ನಡೆಸುವ ಆಸಕ್ತಿ ತೋರಿಲ್ಲ.
ಪ್ರತಿಯೊಂದು ವಾರ್ಡ್‌ಗಳಲ್ಲಿ ಕಾಂಪೋಸ್ಟ್ ಸಂತೆ ಆಯೋಜನೆ ಮಾಡುವುದರಿಂದ ತ್ಯಾಜ್ಯ ವಿಂಗಡಣೆ ಪ್ರಮಾಣ ಹೆಚ್ಚಾಗುತ್ತದೆ. ಜತೆಗೆ ಸಾರ್ವಜನಿಕರಿಗೆ ತ್ಯಾಜ್ಯ ವಿಂಗಡಣೆಯ ಬಗ್ಗೆ ಜಾಗೃತಿ ಮೂಡಲಿದ್ದು, ಪಾಲಿಕೆಯ ಮೇಲಿನ ಹೊರೆ ಕಡಿಮೆಯಾಗಲಿದೆ. ಕಾಂಪೋಸ್ಟ್ ಸಂತೆ ನಡೆಸುವಂತೆ ಆಯುಕ್ತರಿಗೆ ಪತ್ರ ಬರೆಯಲಾಗಿದೆ.
-ಎಂ.ಶಿವರಾಜು, ಆಡಳಿತ ಪಕ್ಷ ನಾಯಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್‌ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.