ನವರಾತ್ರಿ ಸಂಪನ್ನ; ವಿಜಯದಶಮಿ ವಿಶೇಷ ಪೂಜೆ
Team Udayavani, Oct 20, 2018, 10:23 AM IST
ಮಹಾನಗರ: ನಗರದ ವಿವಿಧ ದೇವಸ್ಥಾನಗಳಲ್ಲಿ ಅ. 10ರಿಂದ ಆರಂಭಗೊಂಡ ವೈಭವದ ನವರಾತ್ರಿ ಮಹೋತ್ಸವ ಗುರುವಾರ ಸಂಪನ್ನಗೊಂಡಿತು. ಶುಕ್ರವಾರ ವಿಜಯ ದಶಮಿ ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಪೂಜೆ ನೆರವೇರಿಸಲಾಯಿತು. ಬಿಜೈ ಕಾಪಿಕಾಡು ಶ್ರೀ ಗುರು ವೈದ್ಯನಾಥ ಶ್ರೀದೇವಿ ಚಾಮುಂಡೇಶ್ವರಿ ದೈವಸ್ಥಾನದಲ್ಲಿ ಶ್ರೀ ದೈವದ ದರ್ಶನ ಸೇವೆ, ಆಯುಧ ಪೂಜೆ, ಮಹಾಪೂಜೆಯೊಂದಿಗೆ ನವರಾತ್ರಿ ಮಹೋತ್ಸವ ಸಂಪನ್ನಗೊಂಡಿತು.
ಬೋಳಾರ ಹಳೆಕೋಟೆ ಶ್ರೀ ಮಾರಿಯಮ್ಮ ಮಹಿಷಮರ್ದಿನಿ ದೇವಸ್ಥಾನದದಲ್ಲಿ ಗುರುವಾರ ರಾತ್ರಿ ರಥೋತ್ಸವ ನಡೆಯಿತು. ವಿಜಯದಶಮಿ ಪ್ರಯುಕ್ತ ಶ್ರೀ ಸರಸ್ವತಿ ಪೂಜೆಯೊಂದಿಗೆ ವಿದ್ಯಾರಂಭ ನಡೆಯಿತು. ದೇರೆಬೈಲ್ ತೋಟದಮನೆ ಶ್ರೀ ದುರ್ಗಾಪರಮೇಶ್ವರಿ ನಾಗಕನ್ನಿಕಾ ದೇವಸ್ಥಾನ, ದೇರೆಬೈಲ್ ಕಲ್ಬಾವಿ ಬನ ಶ್ರೀ ಶ್ರೀಕುರು ಅಂಬಾರಾಜರಾಜೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನ, ಪೊಲೀಸ್ ಲೇನ್ ಶ್ರೀ ದೇವಿ ದೇವಸ್ಥಾನ, ತೋಡ್ಲಮಜಲು ಶ್ರೀ ದುರ್ಗಾಚಾಮುಂಡೇಶ್ವರೀ ಕ್ಷೇತ್ರ, ಮರಕಡ ಶ್ರೀ ಗುರು ಪರಾಶಕ್ತಿ ಮಠ, ಶ್ರೀ ಪರಾಶಕ್ತಿ ದೇಗುಲ ಸಮುಚ್ಚಯ ಸೇರಿದಂತೆ ವಿವಿಧ ದೇವಸ್ಥಾನಗಳಲ್ಲಿ ಆಯುಧ ಪೂಜೆಯೊಂದಿಗೆ ನವರಾತ್ರಿ ಕೊನೆಗೊಂಡಿತು. ಶುಕ್ರವಾರ ವಿಜಯದಶಮಿಯ ಪ್ರಯುಕ್ತ ವಿವಿಧ ಪೂಜಾವಿಧಿಗಳು ಜರಗಿದವು.
ಮಂಗಳಾದೇವಿ: ಇಂದು ನವರಾತ್ರಿ ಸಮಾರೋಪ
ಮಹತೋಭಾರ ಶ್ರೀ ಮಂಗಳಾದೇವಿ ದೇವಸ್ಥಾನದಲ್ಲಿ ಶುಕ್ರವಾರ ಬೆಳಗ್ಗೆ ರಾತ್ರಿ ರಥೋತ್ಸವ ಜರಗಿತು. ಅ. 20ರಂದು ನವರಾತ್ರಿ ಮಹೋತ್ಸವದ ಸಮಾರೋಪದ ಅಂಗವಾಗಿ ಸಭಾ ಕಾರ್ಯಕ್ರಮ ನಡೆಯಲಿದೆ. ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಶನಿವಾರ ನವರಾತ್ರಿ ಸಮಾರೋಪಗೊಳ್ಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
FIR 6to6 movie: ಆ್ಯಕ್ಷನ್ ಚಿತ್ರದಲ್ಲಿ ವಿಜಯ ರಾಘವೇಂದ್ರ
Birthday Party: ಬರ್ತ್‌ಡೇ ಪಾರ್ಟಿ ಮುಗಿಸಿ ಬರುತ್ತಿದ್ದ ಮೂವರನ್ನು ಗುಂಡಿಕ್ಕಿ ಹ*ತ್ಯೆ…
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.