ಶಸ್ತ್ರಾಸ್ತ್ರ ಪ್ರದರ್ಶನ: ಮುತ್ತಪ್ಪ ರೈಗೆ ಸಿಸಿಬಿ ನೋಟಿಸ್
Team Udayavani, Oct 20, 2018, 12:37 PM IST
ಬೆಂಗಳೂರು: ಜಯ ಕರ್ನಾಟಕ ಸಂಘಟನೆ ಅಧ್ಯಕ್ಷ ಮುತ್ತಪ್ಪ ರೈ ಆಯುಧ ಪೂಜೆ ದಿನದಂದು ರಿವಾಲ್ವರ್, ಪಿಸ್ತೂಲ್ ಸೇರಿ ಮತ್ತಿತರ ಶಸ್ತ್ರಾಸ್ತ್ರಗಳನ್ನು ಪೂಜೆಗೆ ಇರಿಸಿದ್ದ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಎಚ್ಚೆತ್ತುಕೊಂಡಿದೆ.
ಪೂಜೆಗಿಟ್ಟಿದ್ದ ಬಂದೂಕು, ರಿವಾಲ್ವರ್, ಪಿಸ್ತೂಲ್ ಸೇರಿ ಮತ್ತಿತರ ಶಸ್ತ್ರಾಸ್ತ್ರಗಳಿಗೆ ಸಂಬಂಧಿಸಿದ ದಾಖಲೆಗಳೊಂದಿಗೆ 24 ಗಂಟೆಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ಮುತ್ತಪ್ಪ ರೈಗೆ ಸಿಸಿಬಿ ಡಿಸಿಪಿ ಗಿರೀಶ್ ಶುಕ್ರವಾರ ನೋಟಿಸ್ ಜಾರಿಗೊಳಿಸಿದ್ದಾರೆ.
ಶಸ್ತ್ರಾಸ್ತ್ರಗಳನ್ನು ಪೂಜೆಗಿಟ್ಟ ಚಿತ್ರವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚುರಪಡಿಸಿ ನಾಗರೀಕರಲ್ಲಿ ಭಯದ ವಾತಾವರಣ ಉಂಟು ಮಾಡುತ್ತಿದ್ದೀರಿ ಎಂದು ಮುತ್ತಪ್ಪ ರೈಗೆ ನೋಟಿಸ್ನಲ್ಲಿ ಸಿಸಿಬಿ ತಿಳಿಸಿದೆ.
ಹೀಗಾಗಿ ನೋಟಿಸ್ ತಲುಪಿದ 24 ಗಂಟೆಗಳಲ್ಲಿ ಪೂಜೆಗಿಟ್ಟಿದ್ದ ಎಲ್ಲ ಶಸ್ತ್ರಾಸ್ತ್ರಗಳು ಹಾಗೂ ಅವುಗಳಿಗೆ ಸಂಬಂಧಿಸಿದ ದಾಖಲೆಗಳ ಸಮೇತ ಎಸಿಪಿ ವಿ.ಮರಿಯಪ್ಪ ಅವರ ಮುಂದೆ ಹಾಜರಾಗಬೇಕು. ಹಾಜರಾಗದಿದ್ದಲ್ಲಿ ಕಾನೂನು ಕ್ರಮ ಜರುಗಿಸಲಾಗುವುದು ಎಂದು ನೋಟಿಸ್ನಲ್ಲಿ ಉಲ್ಲೇಖೀಸಿದೆ. ಮುತ್ತಪ್ಪ ರೈ ಪರವಾಗಿ ರಿಕ್ಕಿ ರೈ ಎಂಬುವವರು ನೋಟಿಸ್ನಲ್ಲಿ ಸಹಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
IPL Auction: ಅಗ್ಗಕ್ಕೆ ಸೇಲಾದ ಪಾಂಡೆ, ಜ್ಯಾಕ್ಸ್ ಗೆ ಬಂಪರ್, ಬೆಂಗಳೂರಿಗೆ ಬಂದ ಡೇವಿಡ್
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.