ಉದ್ಯೋಗ ಖಾತರಿಯಲ್ಲಿ ಸಾಧನೆ: ಮೆಚ್ಚುಗೆ


Team Udayavani, Oct 20, 2018, 2:40 PM IST

19-october-13.gif

ಕೊಳ್ನಾಡು : ಉದ್ಯೋಗ ಖಾತ್ರಿ ಯೋಜನೆ ಗ್ರಾಮಾಭಿವೃದ್ಧಿಯಲ್ಲಿ ಮಹತ್ವದ ಯೋಜನೆ ಎಂದು ಅರಿತುಕೊಂಡು ಸಮುದಾಯ ತೊಡಗಿಸಿಕೊಂಡಾಗ ಗಾಂಧೀಜಿಯವರ ಗ್ರಾಮ ಸ್ವರಾಜ್ಯದ ಕಲ್ಪನೆ ಈಡೇರಲು ಸಾಧ್ಯ. ಈ ನಿಟ್ಟಿನಲ್ಲಿ ಕೊಳ್ನಾಡು ಗ್ರಾಮ ಪಂಚಾಯತ್‌ ಮಾದರಿ ಕಾರ್ಯಕ್ರಮ ರೂಪಿಸಿಕೊಂಡಿದೆ ಹಾಗೂ ನಮ್ಮ ಗ್ರಾಮ ನಮ್ಮ ಯೋಜನೆಯಲ್ಲಿ ರಾಜ್ಯ ಪ್ರಶಸ್ತಿ ಬಂದಿರುವುದು ಕೂಡ ಅಭಿನಂದನಾರ್ಹ ಎಂದು ಎಂಜಿಎನ್‌ಆರ್‌ ಇಜಿಎಯ ಒಂಬುಡ್ಸ್‌ಮೆನ್‌ ನರಸಿಂಹ ಮೊಗೇರ ಅಭಿಪ್ರಾಯಪಟ್ಟರು.

ಅವರು ಗ್ರಾ.ಪಂ. ವ್ಯಾಪ್ತಿಯ ಕಾಡುಮಠ ಶಾಲಾ ವಠಾರದಲ್ಲಿ ಅಕ್ಷರ ಕೈತೋಟ ಕಾಮಗಾರಿ ವೀಕ್ಷಿಸಿ ಮತ್ತು ವಿಶ್ವ ಕೈ ತೊಳೆಯುವ ದಿನಾಚರಣೆ, ಸ್ವಚ್ಛತಾ ಶ್ರಮದಾನ ಕಾರ್ಯಕ್ರಮದಲ್ಲಿ ಹಾಗೂ ಉದ್ಯೋಗ ಖಾತರಿ ಫ‌ಲಾನುಭವಿಗಳ ಕುಟುಂಬಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ, ಪ್ರತಿ ವಾರ್ಡ್‌ನಲ್ಲಿ ಕಾಯಕ ಸಂಘಗಳನ್ನು ರಚಿಸುವ ಮೂಲಕ ಇನ್ನು ಹೆಚ್ಚಿನ ಗಮನ ನೀಡಲು ಸಲಹೆ ನೀಡಿದರು.

ಮಾಜಿ ಒಂಬುಡ್ಸ್‌ಮೆನ್‌ ಹಾಗೂ ಸ್ವಚ್ಛತಾ ರಾಯಭಾರಿ ಜನಶಿಕ್ಷಣ ಟ್ರಸ್ಟ್‌ ನ ಶೀನ ಶೆಟ್ಟಿ ಮಾತನಾಡಿ, ಉದ್ಯೋಗ ಖಾತ್ರಿ ಯೋಜನೆ ನಿಯಮದಂತೆ ಯೋಜನೆ ಅನುಷ್ಠಾನಗೊಳಿಸಬೇಕಾದಲ್ಲಿ ಸಾರ್ವಜನಿಕರು ಪಂಚಾಯತ್‌ನೊಂದಿಗೆ ಸಹಕರಿಸುವ ಅಗತ್ಯವಿದೆ. ಕರ್ತವ್ಯಗಳ ಬಗ್ಗೆ ಅರಿತು ಎಲ್ಲರೂ ಕೆಲಸ ಮಾಡಿದಲ್ಲಿ ಯೋಜನೆ ಯಶಸ್ವಿಯಾಗಲು ಸಾಧ್ಯ. ಕೊಳ್ನಾಡಿನ ಮಹಿಳೆಯರು ಇದನ್ನು ಅರಿತು ದಿಟ್ಟ ಹೆಜ್ಜೆ ಇಟ್ಟಿದ್ದಾರೆ. ಇದು ಇನ್ನಷ್ಟು ಬೆಳೆಯಲಿ ಎಂದರು.

ಕಾಯಕ ಸಂಘದ ಸದಸ್ಯರು ಸಂವಾದದಲ್ಲಿ ಭಾಗವಹಿಸಿ, ತಮಗೆ ಆರ್ಥಿಕತೆಕ್ಕಿಂತಲೂ ಹೆಚ್ಚು ಗ್ರಾಮಾಭಿವೃದ್ಧಿಯಲ್ಲಿ ತೊಡಗಿಸಿಕೊಂಡ ತೃಪ್ತಿ, ಸಂತೋಷ ಇದೆ ಎಂದರು. ಗ್ರಾ.ಪಂ. ಉಪಾಧ್ಯಕ್ಷೆ ಯಮುನಾ ಲಕ್ಷ್ಮಣ ಗೌಡ, ಪಂ. ಸದಸ್ಯರಾದ ಎಸ್‌. ಮಹಮ್ಮದ್‌, ಇಂದ್ರಾವತಿ, ಅನಿತಾ ಹಾಗೂ
ಪವಿತ್ರಾ ಪೂಂಜ ಉಪಸ್ಥಿತರಿದ್ದರು. ಪಂ. ಅಭಿವೃದ್ಧಿ ಅಧಿಕಾರಿ ಸುಧೀರ್‌ ಸ್ವಾಗತಿಸಿ, ಅಂಗನವಾಡಿ ಮೇಲ್ವಿಚಾರಕಿ ರೇಣುಕಾ ವಂದಿಸಿದರು. ಜನಶಿಕ್ಷಣ ಟ್ರಸ್ಟ್‌ ನ ಕೃಷ್ಣ ಮೂಲ್ಯ ಹಾಗೂ ಪ್ರೇರಕ ರಂಜಿತ್‌ ಕಾರ್ಯಕ್ರಮ ನಿರೂಪಿಸಿದರು.

ಪ್ರತಿ ವಾರ್ಡ್‌ಗಳಿಗೂ ವಿಸ್ತರಣೆ
ಅಧ್ಯಕ್ಷತೆ ವಹಿಸಿದ್ದ ಕೊಳ್ನಾಡು ಗ್ರಾ.ಪಂ. ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ ಮಾತನಾಡಿ, ಸಾರ್ವಜನಿಕರು ಈ ರೀತಿ ಯೋಜನೆಯಲ್ಲಿ ತೊಡಗಿಸಿಕೊಂಡಿರುವುದು ನಮಗೂ ಸ್ಫೂರ್ತಿ ನೀಡಿದೆ. ಕಾಡುಮಠ ಎಸ್‌ಸಿ ಕಾಲನಿ ಮಹಿಳೆಯರು ಮಾಡಿದ ಈ ಮಾದರಿ ಕಾರ್ಯವನ್ನು ಗ್ರಾಮದ ಪ್ರತಿ ವಾರ್ಡ್‌ಗಳಿಗೂ ವಿಸ್ತರಿಸಲು ಮಹಿಳಾ ಸ್ವ ಸಹಾಯ ಗುಂಪುಗಳ ಮೂಲಕ ಪ್ರಯತ್ನಿಸಲಾಗುವುದು ಎಂದರು.

ಟಾಪ್ ನ್ಯೂಸ್

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

suicide

Ballari: ಜಿಲ್ಲಾಸ್ಪತ್ರೆಯಲ್ಲಿ ಮತ್ತೊಬ್ಬ ಬಾಣಂತಿ ಸಾವು; ಮೃತರ ಸಂಖ್ಯೆ 4ಕ್ಕೆ

ICC

ICC; ಚಾಂಪಿಯನ್ಸ್ ಟ್ರೋಫಿ ಸುತ್ತಲಿನ ಬಿಕ್ಕಟ್ಟು: ಶುಕ್ರವಾರ ಮಹತ್ವದ ತೀರ್ಮಾನ?

1-bumm

Jasprit Bumrah ನಾಯಕತ್ವದ ಜವಾಬ್ದಾರಿಯನ್ನು ಆನಂದಿಸುತ್ತಾರೆ: ರವಿಶಾಸ್ತ್ರಿ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.