ಮಂಗಗಳಿಂದ “ಕಲ್ಲೆಸೆದು ಹತ್ಯೆ’
Team Udayavani, Oct 21, 2018, 8:32 AM IST
ಭಾಗಪತ್: ಮಂಗಗಳೇ ಮಾನವ ನನ್ನು ಕಲ್ಲು ಎಸೆದು ಕೊಂದ ಘಟನೆ ಎಲ್ಲಿಯಾದರೂ ನಡೆದದ್ದು ಉಂಟೇ? ವಿಚಿತ್ರವಾದರೂ ಸತ್ಯ ಘಟನೆ ಉತ್ತರ ಪ್ರದೇಶದ ಭಾಗಪತ್ ಜಿಲ್ಲೆಯ ಟಿಕ್ರಿ ಗ್ರಾಮದಲ್ಲಿ ನಡೆದಿದೆ. ಧರ್ಮಪಾಲ್ (72) ಎಂಬವರು ಹವನಕ್ಕೋಸ್ಕರ ಕಟ್ಟಿಗೆ ಗಳನ್ನು ಸಂಗ್ರಹಿಸಲು ತಮ್ಮ ಗ್ರಾಮದಲ್ಲಿ ಶಿಥಿಲವಾಗಿ ಬಿದ್ದಿದ್ದ ಕಟ್ಟಡದ ಸಮೀಪಕ್ಕೆ ತೆರಳಿದ್ದರು. ಅಲ್ಲಿಗೆ ಹೋಗಿ ಕಟ್ಟಿಗೆ ಸಂಗ್ರಹಿಸುತ್ತಿದ್ದಾಗ ಮಂಗಗಳು ಅವರನ್ನು ಗುರಿಯಾಗಿಸಿಕೊಂಡು ಇಟ್ಟಿಗೆ ಎಸೆದಿವೆ. ತಲೆಗೆ, ಎದೆಗೆ ಇಟ್ಟಿಗೆ ಬಿದ್ದು ಗಾಯಗಳಾಗಿವೆ. ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸೂಕ್ತ ಚಿಕಿತ್ಸೆ ನೀಡಿದರೂ ಅವರು ಕೊನೆಯುಸಿರೆಳೆದರು.
ಧರ್ಮಪಾಲ್ ಸಹೋದರ ಕೃಷ್ಣಪಾಲ್ ಸಿಂಗ್ ಪೊಲೀಸರಿಗೆ ನೀಡಿದ ದೂರಿನ ಪ್ರಕಾರ ಮಂಗಗಳು ಈ ಕೃತ್ಯವೆಸಗಿವೆ ಎಂದು ಆರೋಪಿಸಿದ್ದಾರೆ. ಪೊಲೀಸರಿಗೆ ಯಾವ ಆಧಾರದ ಮೇಲೆ ಕೇಸು ದಾಖಲಿಸ ಬೇಕೆಂದು ಗೊಂದಲಕ್ಕೆ ಒಳಗಾಗಿದ್ದಾರೆ. ಕೇಸ್ ಡೈರಿಯಲ್ಲಿ ಅದನ್ನೊಂದು ಅಪಘಾತ ಎಂದು ದಾಖಲಿಸಿದ್ದಾರೆ. ಇದರಿಂದ ತೃಪ್ತರಾಗದ ಧರ್ಮಪಾಲ್ ಸಹೋದರ ಇಲಾಖೆಯ ಹಿರಿಯ ಅಧಿಕಾರಿಗಳಿಗೆ ಮನವಿ ಮಾಡಲು ನಿರ್ಧರಿಸಿದ್ದಾರೆ. ಅವರ ಪ್ರಕಾರ ಮಂಗಗಳು 20 ಇಟ್ಟಿಗೆಗಳನ್ನು ಸಹೋದರನ ಮೇಲೆ ಎಸೆದಿವೆ. ಹಣೆ, ಎದೆ, ಕಾಲುಗಳಿಗೆ ಅದರಿಂದ ಜಖಂ ಆಗಿದೆ. ಅವುಗಳ ವಿರುದ್ಧ ಲಿಖೀತ ದೂರು ನೀಡಿದ್ದೇವೆ. ಆದರೆ ಪೊಲೀಸರು ಅದನ್ನು ಒಪ್ಪಿಕೊಳ್ಳಲು ತಯಾರಿಲ್ಲ.
ಗ್ರಾಮಸ್ಥರು ಕೂಡ ಮಂಗಗಳ ಹಾವಳಿ ಬಗ್ಗೆ ಮಾಹಿತಿ ನೀಡಿದ್ದಾರೆ. ಠಾಣಾಧಿಕಾರಿ ಚಿತ್ವಾನ್ ಸಿಂಗ್ ಪ್ರತಿಕ್ರಿಯೆ ನೀಡಿ ಮಂಗಗಳ ಮೇಲೆ ಕೇಸು ದಾಖಲಿಸಲು ಹೇಗೆ ಸಾಧ್ಯ? ಒಂದು ವೇಳೆ ಹಾಗೆ ಮಾಡಿದರೆ ನಾವೇ ನಗೆಪಾಟಲಿ ಗೀಡಾಗುತ್ತೇವೆ. ಘಟನೆ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ’ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್
West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ
Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್
Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ
By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!
Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್ ಗೆಲುವು: ಬೊಮ್ಮಾಯಿ ಆರೋಪ
Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ
Pakistan: ಪಾಕ್‌ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.