ಸಮ ಸಮಾಜ ಚಿಂತನೆ ಮುಖ್ಯ
Team Udayavani, Oct 21, 2018, 11:52 AM IST
ಕಲಬುರಗಿ: ಪದವಿ ಪಡೆದು ಕೇವಲ ವಿದ್ಯಾವಂತರಾದರೆ ಯಾವುದೇ ಪ್ರಯೋಜನವಿಲ್ಲ. ನಾವೆಲ್ಲರೂ ಒಂದೇ ಎನ್ನುವ ಭಾವನೆಯೊಂದಿಗೆ ಮತ್ತೂಬ್ಬರ ಏಳ್ಗೆಗೆ ಬಯಸುವ ಮನಸ್ಥಿತಿ, ಚಿಂತನೆಯನ್ನು ವಿದ್ಯಾವಂತರು ಹೊಂದಬೇಕು. ಸಮ ಸಮಾಜದ ಗುರಿ ಇಲ್ಲದ ಶಿಕ್ಷಣಕ್ಕೆ ಬೆಲೆ ಇಲ್ಲ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ನಗರದ ಕರ್ನಾಟಕ ಪೀಪಲ್ಸ್ ಶಿಕ್ಷಣ ಸಂಸ್ಥೆಯ ಡಾ| ಅಂಬೇಡ್ಕರ್ ಪದವಿ ಮಹಾವಿದ್ಯಾಲಯದಲ್ಲಿ ಸಿದ್ಧಾರ್ಥ ಕಾನೂನು ಕಾಲೇಜು ಹಾಗೂ ಬೆಂಗಳೂರಿನ ತಳಸಮುದಾಯಗಳ ಅಧ್ಯಯನ ಕೇಂದ್ರ ಭಾರತ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾನೂನು ಶಾಲೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಡಾ| ಬಿ.ಆರ್. ಅಂಬೇಡ್ಕರ್ ಚಿಂತನೆಗಳು ಮತ್ತು ಯುವಜನ’ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ಡಾ| ಬಿ.ಆರ್. ಅಂಬೇಡ್ಕರ್ ದೇಶದ ಸಾರ್ವಭೌಮತೆ, ಸಮಾನತೆ ಹಾಗೂ ಭಾತೃತ್ವಕ್ಕೆ ಸಂವಿಧಾನದ ಮೂಲಕ ಬಹುದೊಡ್ಡ ಕೊಡುಗೆ ನೀಡಿದ್ದಾರೆ. ಅಂಬೇಡ್ಕರ್ ವಿಚಾರ ಹಾಗೂ ಚಿಂತನೆಗಳನ್ನು ಮಾತಿನಲ್ಲಿ ಹೇಳಿದರೆ ಸಾಲದು. ಅವುಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದರು.
ಆಹಾರ, ಶಿಕ್ಷಣ, ಉದ್ಯೋಗ ಸೇರಿದಂತೆ ಎಲ್ಲ ವಿಚಾರಗಳನ್ನು ಒಳಗೊಂಡು ದೇಶದ ಸಮಗ್ರ ಜನತೆಗಾಗಿ ಅಂಬೇಡ್ಕರ್ ಸಂವಿಧಾನ ರಚಿಸಿದ್ದಾರೆ. ಸಂವಿಧಾನವು ಒಳ್ಳೆಯದು, ಕೆಟ್ಟದ್ದೆಂಬುದು ಆಡಳಿತ ನಡೆಸುವವರ ಮೇಲೆ ಅವಲಂಬಿತವಾಗಿದೆ. ಸಂವಿಧಾನ ಒಳ್ಳೆಯದಿದ್ದರೂ ಆಡಳಿತ ನಿರ್ವಹಿಸುವವರು ಕೆಟ್ಟವರಾಗಿದ್ದರೆ, ಅದು ಕೆಟ್ಟ ಸಂವಿಧಾನವಾಗಿರುತ್ತದೆ.
ಆಡಳಿತ ನಡೆಸುವವರು ಒಳ್ಳೆಯವರಾಗಿದ್ದರೆ ಸಂವಿಧಾನವೂ ಒಳ್ಳೆಯದು ಎಂಬ ಅಂಬೇಡ್ಕರ್ ಮಾತನ್ನು ಯಾರೂ ಮರೆಯಬಾರದು ಎಂದರು. ಸಂಸ್ಥೆ ಪ್ರಧಾನ ಕಾರ್ಯದರ್ಶಿ ಡಾ| ಮಾರುತಿರಾವ್ ಮಾಲೆ ಅಧ್ಯಕ್ಷತೆ ವಹಿಸಿದ್ದರು. ತಳಸಮುದಾಯಗಳ ಅಧ್ಯಯನ ಕೇಂದ್ರ ರಾಷ್ಟ್ರೀಯ ಕಾನೂನು ಶಾಲೆ ಸಹಾಯಕ ಪ್ರಾಧ್ಯಾಪಕ ಡಾ| ಆರ್.ವಿ. ಚಂದ್ರಶೇಖರ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ| ಐ.ಎಸ್. ವಿದ್ಯಾಸಾಗರ ನಿರೂಪಿಸಿದರು.
ತೆಲಂಗಾಣದ ಸಮಾಜ ಕಲ್ಯಾಣ ಇಲಾಖೆ ವಸತಿ ಶಾಲೆಗಳ ಸಂಸ್ಥೆ ಕಾರ್ಯದರ್ಶಿ ಡಾ| ಆರ್.ಎಸ್. ಪ್ರವೀಣಕುಮಾರ, ಬೆಂಗಳೂರಿನ ತಳಸಮುದಾಯಗಳ ಅಧ್ಯಯನ ಕೇಂದ್ರ ರಾಷ್ಟ್ರೀಯ ಕಾನೂನು ಶಾಲೆ ಸಂಚಾಲಕ ಪ್ರದೀಪ ರಮಾವತ್, ಡಾ| ಅಂಬೇಡ್ಕರ್ ಪದವಿ ಮಹಾವಿದ್ಯಾಲಯ ಪ್ರಾಂಶುಪಾಲ ಡಾ| ಚಂದ್ರಶೇಖರ ಶೀಲವಂತ, ಸಿದ್ಧಾರ್ಥ ಕಾನೂನು ಕಾಲೇಜಿನ ಡಾ| ಚಂದ್ರಶೇಖರ ಹಾಗೂ ಶಿಕ್ಷಕರು, ವಿದ್ಯಾರ್ಥಿಗಳು ಹಾಜರಿದ್ದರು.
“ದಲಿತ ಪದ ತರುತ್ತೆ ನೋವು’ ಅಂಬೇಡ್ಕರ್ ಅವರನ್ನು ಕೇವಲ ಒಂದೇ ಜಾತಿಗೆ ಸೀಮಿತಗೊಳಿಸುವುದು ಸರಿಯಲ್ಲ. ಅಂಬೇಡ್ಕರ್ ಅವರನ್ನು ಕೇವಲ ದಲಿತರ ನಾಯಕ, ಅಸ್ಪೃಶ್ಯರ ನಾಯಕ ಎಂದು ಹೇಳಬಾರದು. ಅನೇಕ ಸಭೆ, ಸಮಾರಂಭಗಳಲ್ಲಿ ದಲಿತ ನಾಯಕ ಅಂಬೇಡ್ಕರ್ ಎಂದು
ಸಂಬೋ ಧಿಸುತ್ತಾರೆ. ಅಲ್ಲದೇ, ನನಗೂ ದಲಿತ ನಾಯಕ ಎಂದೇ ಕರೆಯುತ್ತಾರೆ. ನನಗೆ ಅದನ್ನು ಕೇಳಿ ಬಹಳ ನೋವಾಗುತ್ತದೆ ಎಂದು ಸಂಸದ ಖರ್ಗೆ ನುಡಿದರು. ಅದೇ ಸಮಾರಂಭದಲ್ಲಿ ಬೇರೆ ಯಾವುದೇ ಸಮಾಜದ ನಾಯಕರಿದ್ದರೂ ಅವರನ್ನು ಜಾತಿಗೆ ಸೀಮಿತಗೊಳಿಸಿ ಸಂಬೋಧಿ ಸುವುದಿಲ್ಲ. ದಲಿತ ಸಮುದಾಯದ ನಾಯಕರನ್ನು ಮಾತ್ರ ಜಾತಿ ಮೂಲಕ ಬಿಂಬಿಸಲಾಗುತ್ತದೆ. ಸಂಸತ್ತಿನಲ್ಲೂ ಪದೇ ಪದೇ ಇಂತಹ ಪ್ರಶ್ನೆ ಉದ್ಭವಿಸುತ್ತದೆ. ದಲಿತ ನಾಯಕ ಎಂದಾಗ ಆಗುವ ನೋವು ನನಗೆ ಮಾತ್ರ ಗೊತ್ತು. ಬೇರೆ ಸಮುದಾಯದವರಿಗೆ ಆ ನೋವು ಅರ್ಥವಾಗಲು ಸಾಧ್ಯವಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu- Kashmir: ಆಯ್ಕೆಯಾಗಿ 2 ತಿಂಗಳಾದ್ರೂ ಶಾಸಕರಿಗೆ ಮೊದಲ ವೇತನ ಸಿಕ್ಕಿಲ್ಲ!
Police System: ಕರ್ನಾಟಕ ಪೊಲೀಸರ ಘನತೆ ಕಾಂಗ್ರೆಸ್‌ನಿಂದ ಸರ್ವನಾಶ: ಎಚ್.ಡಿ.ಕುಮಾರಸ್ವಾಮಿ
Koteshwara: ಟಯರ್‌ಗೆ ಗಾಳಿ ತುಂಬುತ್ತಿದ್ದ ವೇಳೆ ಸ್ಫೋ*ಟಗೊಂಡು ಯುವಕ ಗಂಭೀರ; ಕಾರಣಗಳೇನು?
2nd ODI: ವನಿತಾ ಏಕದಿನ ಸರಣಿ: ಇಂದು ಭಾರತ-ವಿಂಡೀಸ್ 2ನೇ ಪಂದ್ಯ
Enforcement Directorate: ಕ್ರಿಮಿನಲ್ ಪಿತೂರಿಯಡಿ ಮಾತ್ರವೇ ಅಕ್ರಮ ಹಣ ವರ್ಗ ಕೇಸು ಬೇಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.