ಮೈತ್ರಿಕೂಟದ ಅಭ್ಯರ್ಥಿಗಳ ಗೆಲುವು ಖಚಿತ’
Team Udayavani, Oct 22, 2018, 6:35 AM IST
ಹೊಸಪೇಟೆ: ರಾಜ್ಯದ 3 ಲೋಕಸಭೆ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಗಳು ಗೆಲ್ಲುವುದು ಖಚಿತ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ನಡೆಯುತ್ತಿರುವ 3 ಲೋಕಸಭೆ ಹಾಗೂ 2 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಮೈತ್ರಿಕೂಟದ ಅಭ್ಯರ್ಥಿಗಳ ಪರ ಒಲವು ಕಂಡು ಬರುತ್ತಿದೆ. ಬಳ್ಳಾರಿ ಲೋಕಸಭೆ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿ.ಎಸ್.ಉಗ್ರಪ್ಪನವರ ಬಗ್ಗೆ ಮತದಾರರಲ್ಲಿ ಹೆಚ್ಚಿನ ಒಲವು ಕಂಡು ಬರುತ್ತಿದೆ. ಶಿವಮೊಗ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಬೇಕು ಎಂಬ ದೃಷ್ಟಿಯಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದಿಂದ ಮಧು ಬಂಗಾರಪ್ಪ ಅವರನ್ನು ಕಣಕ್ಕಿಳಿಸಲಾಗಿದೆ. ಇದರಿಂದಾಗಿ ಗೆಲ್ಲುವ ಹುಮ್ಮಸ್ಸಿನಲ್ಲಿದ್ದ ಬಿಜೆಪಿಗೆ ನಡುಕ ಉಂಟಾಗಿದೆ ಎಂದರು.
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿಯೂ ಮುಂದುವರಿಯಲಿದೆ. ಬಿಜೆಪಿಯನ್ನು ಅಧಿಕಾರದಿಂದ ದೂರವಿಡುವುದೇ ನಮ್ಮ ಉದ್ದೇಶ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟಕ್ಕೆ ಸಿಪಿಐ (ಎಂ) ಸೇರಿದಂತೆ ಎಡಪಕ್ಷಗಳು ಬೆಂಬಲ ಸೂಚಿಸಿವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.