ವೀರ ಮಹಾದೇವಿ ಚಿತ್ರದಲ್ಲಿ ಸನ್ನಿ ಅಭಿನಯ ಬೇಡ; ಕರವೇ ಯುವಸೇನೆ ವಿರೋಧ
Team Udayavani, Oct 22, 2018, 3:19 PM IST
ಬೆಂಗಳೂರು: ಸತಿ ಸಾದ್ವಿ, ಕರ್ನಾಟಕದ ಹೆಮ್ಮೆಯ ವೀರ ವನಿತೆ ವೀರ ಮಹಾದೇವಿ ಅವರ ಕುರಿತ ಚಿತ್ರದಲ್ಲಿ ಫೋರ್ನ್ ಸ್ಟಾರ್ ಸನ್ನಿ ಲಿಯೋನ್ ನಟಿಸುತ್ತಿರುವುದಕ್ಕೆ ಕರವೇ ಯುವಸೇನೆ ಸೋಮವಾರ ಟೌನ್ ಹಾಲ್ ಮುಂಭಾಗ ಪ್ರತಿಭಟನೆ ನಡೆಸುವ ಮೂಲಕ ವಿರೋಧ ವ್ಯಕ್ತಪಡಿಸಿದೆ.
ರಾಷ್ಟ್ರಕೂಟ ಅಮೋಘ ವರ್ಷ ನೃಪತುಂಗ ಅವರ ಕಥೆಯನ್ನಾಧರಿಸಿ ಐದು ಭಾಷೆಗಳಲ್ಲಿ ವೀರ ಮಹಾದೇವಿ ಸಿನಿಮಾ ನಿರ್ಮಾಣವಾಗುತ್ತಿದೆ. ಚಿತ್ರದಲ್ಲಿ ಇತಿಹಾಸವನ್ನು ತಿರುಚಿ, ಕನ್ನಡಿಗರ ಭಾವನೆಗಳಿಗೆ ಧಕ್ಕೆ ಉಂಟು ಮಾಡಲಾಗುತ್ತಿದೆ ಎಂದು ಯುವಸೇನೆಯ ರಾಜ್ಯಾಧ್ಯಕ್ಷ ಹರೀಶ್ ಆರೋಪಿಸಿದ್ದಾರೆ.
ವೀರ ವನಿತೆ ಮಹಾದೇವಿ ಅವರು ನಟಿಸುವುದೇ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುತ್ತದೆ. ಚಿತ್ರದ ನಟಿ ಸನ್ನಿ ಲಿಯೋನ್ ಆ ಪಾತ್ರ ಮಾಡುವುದು ಬೇಡ. ಕೂಡಲೇ ನಟಿಯನ್ನು ಬದಲಾಯಿಸಬೇಕು. ಇಲ್ಲದಿದ್ದರೆ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಯುವಸೇನೆ ಎಚ್ಚರಿಕೆ ನೀಡಿದೆ.
*ವಿಡಿಯೋ: ಫಕ್ರುದ್ದೀನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.