ಮಳೆ ಭೀತಿ ಮಧ್ಯೆ ಚುರುಕುಗೊಂಡ ಭತ್ತದ ಕಟಾವು ಕಾರ್ಯ


Team Udayavani, Oct 23, 2018, 6:20 AM IST

1910tke2.jpg

ತೆಕ್ಕಟ್ಟೆ: ಭತ್ತದ ಪೈರು ಕಟಾವಿಗೆ ಸಿದ್ಧಗೊಂಡಿರುವ ಹಿನ್ನೆಲೆಯಲ್ಲಿ ಕುಂಭಾಸಿ, ಕೊರವಡಿ, ಕೊಮೆ, ತೆಕ್ಕಟ್ಟೆ ಸುತ್ತಮುತ್ತಲಿನ ಕೃಷಿಭೂಮಿಯಲ್ಲಿ ಯಂತ್ರದ ಸಹಾಯದಿಂದ ಕಟಾವು ಕಾರ್ಯ ಚುರುಕುಗೊಂಡಿದೆ.

ಮಳೆ ಭೀತಿ 
ಕೃಷಿ ಚಟುವಟಿಕೆಗೆ ಎದುರಾದ ಕೃಷಿ ಕೂಲಿ ಕಾರ್ಮಿಕರ ಸಮಸ್ಯೆ, ಅನಿರೀಕ್ಷಿತವಾಗಿ ಮಳೆ ಬರುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕರಾವಳಿಯ ಸಾಂಪ್ರದಾಯಿಕ ಕೃಷಿ ಕುಟುಂಬಿಕರು ಯಾಂತ್ರಿಕೃತ ಕೃಷಿ ಚಟುವಟಿಕೆಯೆಡೆಗೆ ಆಸಕ್ತಿ ತಳೆಯಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಬರದೇ ಇದ್ದಲ್ಲಿ ಕಟಾವು ಕಾರ್ಯ ಇನ್ನು 15 ದಿನಗಳಲ್ಲಿ ಪೂರ್ಣಗೊಳ್ಳುವ ಸಾಧ್ಯತೆ ಇದೆ.

ಬಾಡಿಗೆ ದರ ಗೊಂದಲ
ಹೊರ ಜಿಲ್ಲೆಗಳಿಂದ ಬಂದಿರುವ ಯಾಂತ್ರಿಕ ಕಟಾವು ಯಂತ್ರಗಳು ಅಲ್ಲಲ್ಲಿ ಬೀಡು ಬಿಟ್ಟಿದ್ದು ಈ ನಡುವೆ ಮಧ್ಯವರ್ತಿಗಳ ಮೂಲಕ ಕೆಲವೊಂದು ಕಡೆಗಳಲ್ಲಿ ಯಂತ್ರಗಳ ಸದ್ದು ಶುರುವಾಗಿದೆ. ಆದರೆ ಭತ್ತದ ಕಟಾವಿಗೆ ಪ್ರತಿ ಗಂಟೆಯ ಬಾಡಿಗೆ ಒಂದೊಂದು ಕಡೆಗಳಲ್ಲಿ ಒಂದೊಂದು ರೀತಿಯಲ್ಲಿ ತೆಗೆದುಕೊಳ್ಳುವುದರಿಂದ ರೈತರಲ್ಲಿ ಗೊಂದಲ ಏರ್ಪಟ್ಟಿದೆ. 

ಮಧ್ಯವರ್ತಿಗಳ ಹಾವಳಿಗೆ ಕಡಿವಾಣಕ್ಕೆ ಆಗ್ರಹ  
ಕೃಷಿ ಇಲಾಖೆಯಲ್ಲಿ ಕಟಾವು ಯಂತ್ರಗಳ ಬಾಡಿಗೆ ಕಡಿಮೆ ಇದ್ದರೂ ಕೂಡಾ ಖಾಸಗಿ ಕಟಾವು ಯಂತ್ರಗಳ ದರ್ಬಾರ್‌ ಜೋರಾಗಿದೆ, ಈ ನಡುವೆ ಗ್ರಾಮೀಣ ಭಾಗದಲ್ಲಿನ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿರುವ ಪರಿಣಾಮ ಈ ಹಿಂದೆ ಇಲಾಖೆಯಿಂದ ಕಟಾವು ಯಂತ್ರಗಳ ಬಾಡಿಗೆ ರೂ. 1,800 ಇದ್ದದ್ದು ಏಕಾಏಕಿ ಸ್ಫರ್ಧಾತ್ಮಕವಾಗಿ ಬೆಲೆ ಗಗನಕ್ಕೆ ಏರಿಕೆಯಾಗುತ್ತಿದೆ. ಮಧ್ಯವರ್ತಿಗಳ ಹಾವಳಿ ನಿಯಂತ್ರಿಸುವ ನಿಟ್ಟಿನಿಂದ ಕೃಷಿ ಇಲಾಖೆ ಹಾಗೂ ಸಂಬಂಧಪಟ್ಟ ಸ್ಥಳಿಯಾಡಳಿತ ರೈತರ ಹಿತದೃಷ್ಟಿಯಿಂದ ಕಟ್ಟುನಿಟ್ಟಿನ ಕ್ರಮ ವಹಿಸಬೇಕು ಎನ್ನುವುದು ಗ್ರಾಮೀಣ ರೈತರ ಆಗ್ರಹ.

ಗಗನಕ್ಕೆ ಏರಿದ ಡೀಸೆಲ್‌ ದರ
ದಿನಕ್ಕೆ ಸುಮಾರು  10 ಗಂಟೆಗಳ ಕಾಲ ಸುಮಾರು 4 ಎಕರೆಗೂ ಅಧಿಕ ಕೃಷಿ ಭೂಮಿಯನ್ನು ಕಟಾವು ಮಾಡಬೇಕಾದ ಅನಿವಾರ್ಯತೆ ಇದೆ. ಅಲ್ಲದೆ ಯಂತ್ರಗಳು ಹಾಗೂ ಕಾರ್ಮಿಕರ ನಿರ್ವಹಣೆ  ವೆಚ್ಚ ಹೆಚ್ಚಾಗಿರುವುದರಿಂದ ಅಷ್ಟೇನೂ ಲಾಭ ತರುವಂತದಲ್ಲ . ಡೀಸೆಲ್‌ ದರ ಗಗನಕ್ಕೆ ಏರಿಕೆಯಾದ್ದರಿಂದ ಈ ಬಾರಿಯೂ ಕೂಡಾ ಭತ್ತದ ಕಟಾವಿಗೆ ಪ್ರತಿ ಗಂಟೆಗೆ  2,200ರೂ.ಗಳಿಂದ 2,400 ರೂ. ಬೆಲೆ ನಿಗದಿಪಡಿಸಿದ್ದೇವೆ.  
– ಪ್ರಸಾದ್‌ , ಕಟಾವು ಯಂತ್ರದ ಮಾಲಕರು

ರೈತರಿಗೆ ಗಾಯದ ಮೇಲೆ ಬರೆ !
ಕರಾವಳಿಗೆ ಹೊರ ಜಿಲ್ಲೆಗಳಿಂದ ಬಂದಿರುವ ಕಟಾವು ಯಂತ್ರಗಳ ಸಂಖ್ಯೆ ಬಹುತೇಕ ಹೆಚ್ಚಾಗಿದೆ. ಅಕಾಲಿಕ ಮಳೆಯಿಂದಾಗಿ ಗದ್ದೆಯಲ್ಲಿ ನೀರಿನ ಪ್ರಮಾಣ ಹೆಚ್ಚಾಗಿದ್ದು ಬೆಳೆದು ನಿಂತ ಭತ್ತದ ತೆನೆಗಳು ಉದುರಿಗೆ ಭೂಮಿಯ ಪಾಲಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಭತ್ತ ಕಟಾವು ಕಾರ್ಯವನ್ನು ಚುರುಕುಗೊಳಿಸಿದ್ದೇವೆ. ಕಳೆದ ಬಾರಿಗಿಂತಲೂ ಈ ಬಾರಿ ಕಟಾವಿನ ಯಂತ್ರದ ಬಾಡಿಗೆ ಪ್ರತಿ ಗಂಟೆಗೆ ಸುಮಾರು ರೂ. 300 ರಿಂದ ರೂ. 400 ಹೆಚ್ಚಳವಾಗಿರುವುದು ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಗ್ರಾಮೀಣ ರೈತರು ನೇರವಾಗಿ ಯಂತ್ರಗಳ ಮಾಲಕರನ್ನು ಸಂಪರ್ಕಿಸಿ ಬದಲಾಗಿ ಮಧ್ಯವರ್ತಿಗಳನ್ನು ಸಂಪರ್ಕಿಸಬೇಡಿ .
– ಕೆ. ಜಗದೀಶ್‌ ರಾವ್‌ ಕುಂಭಾಸಿ,  
ಕುಂದಾಪುರ ಕಿಸಾನ್‌ ಸಂಘದ ಸದಸ್ಯರು (ಕೋಟೇಶ್ವರ ವಲಯ) 

– ಟಿ. ಲೋಕೇಶ್‌ ಆಚಾರ್ಯ ತೆಕ್ಕಟ್ಟೆ

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

1-chali

Dakshina Kannada and Udupi: ಮುಂಜಾನೆ ಚುಮುಚುಮು ಚಳಿ

1-deee

Udupi; ಪೊಲೀಸ್‌ ಇಲಾಖೆ ವಿರುದ್ಧ ಹಿಂದೂ ಸಂಘಟನೆಗಳ ಪ್ರತಿಭಟನೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.