ವೇಣುಗೋಪಾಲ್‌ ಬದಲು?


Team Udayavani, Oct 23, 2018, 6:00 AM IST

venugopal-aaaaa.jpg

ಬೆಂಗಳೂರು: ಲೈಂಗಿಕ ಹಗರಣ ಆರೋಪದ ಸುಳಿಯಲ್ಲಿ ಸಿಲುಕಿರುವ  ಕೆ.ಸಿ.ವೇಣುಗೋಪಾಲ್‌ ಅವರನ್ನು “ರಾಜ್ಯ ಉಸ್ತುವಾರಿ’ಯಿಂದ ಬದಲಾಯಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.

ವೇಣುಗೋಪಾಲ್‌ ಅವರ ಬದಕಲು ಗುಲಾಂ ನಬಿ ಆಜಾದ್‌ ಅಥವಾ ಚೆಲ್ಲಕುಮಾರ್‌ ಅವರನ್ನು ರಾಜ್ಯ ಉಸ್ತುವಾರಿಯಾಗಿ ನೇಮಿಸುವ ಸಂಬಂಧ ಹೈಕಮಾಂಡ್‌ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ ಎಂದು ತಿಳಿದು ಬಂದಿದೆ.

ಐದು ಕ್ಷೇತ್ರಗಳ ಉಪ ಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ವೇಣುಗೋಪಾಲ್‌ ರಾಜ್ಯ ಉಸ್ತುವಾರಿಯಾಗಿ ಮುಂದುವರಿದರೆ ಪಕ್ಷಕ್ಕೆ ಮುಜುಗರ ಉಂಟಾಗಬಹುದು ಎಂಬ ಕಾರಣಕ್ಕೆ ಬದಲಾಯಿಸುವ ಚಿಂತನೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷವು ಜೆಡಿಎಸ್‌ ಜತೆ ಮೈತ್ರಿಯೊಂದಿಗೆ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನ ಗಳಿಸಲು ಕಾರ್ಯತಂತ್ರ ರೂಪಿಸಿದ್ದು, ವೇಣುಗೋಪಾಲ್‌ ವಿರುದ್ಧದ ಲೈಂಗಿಕ ಹಗರಣ ಪ್ರಕರಣವನ್ನು ಬಿಜೆಪಿ ಅಸ್ತ್ರವನ್ನಾಗಿ ಬಳಸುವ ಆತಂಕ ಇರುವುದರಿಂದ ಬದಲಾವಣೆ ಬಗ್ಗೆ ಗಂಭೀರ ಚಿಂತನೆ ನಡೆದಿದೆ ಎಂದು ತಿಳಿದು ಬಂದಿದೆ.

ಮತ್ತೂಂದು ಮೂಲದ ಪ್ರಕಾರ ಕೆ.ಸಿ.ವೇಣುಗೋಪಾಲ್‌ ಅವರೇ ಕರ್ನಾಟಕದ ಉಸ್ತುವಾರಿಯಿಂದ ಬಿಡುಗಡೆ ಮಾಡುವಂತೆ ಕೋರಿದ್ದರು. ಹೀಗಾಗಿ, ಬೇರೆಯವರ ನೇಮಕ ಚರ್ಚೆ ನಡೆಯುತ್ತಿದೆ ಎನ್ನಲಾಗಿದೆ. ಪ್ರಸ್ತುತ ವೇಣುಗೋಪಾಲ್‌ ವಿದೇಶದಲ್ಲಿದ್ದಾರೆ.

ಗುಲಾಂ ನಬಿ ಆಜಾದ್‌ ಅವರು  ಈ ಹಿಂದೆ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ರಾಜ್ಯದ ಉಸ್ತುವಾರಿಯಾಗಿಯೂ ಕೆಲಸ ಮಾಡಿದವರು. ಜತೆಗೆ ಇತ್ತೀಚೆಗೆ ವಿಧಾನಸಭೆ ಚುನಾವಣೆ ನಂತರ ಜೆಡಿಎಸ್‌ ಜತೆಗೂಡಿ ಸಮ್ಮಿಶ್ರ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದವರು. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಜತೆ ಉತ್ತಮ ಸಂಬಂಧ ಹೊಂದಿದ್ದಾರೆ.

ಮುಂದಿನ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್‌-ಜೆಡಿಎಸ್‌ ಜತೆಗೂಡಿ  ಎದುರಿಸುವ ತೀರ್ಮಾನ ಮಾಡಿರುವುದರಿಂದ ಸೀಟು ಹೊಂದಾಣಿಕೆ ಹಾಗೂ ರಡೂ ಪಕ್ಷಗಳ ನಡುವಿನ ಸಮನ್ವಯತೆ ದೃಷ್ಟಿಯಿಂದ ಗುಲಾಂ ನಬಿ ಆಜಾದ್‌ ಅವರಿಗೆ ಕರ್ನಾಟಕದ ಉಸ್ತುವಾರಿ ನೀಡುವುದು ಸೂಕ್ತ ಎಂದು ರಾಜ್ಯದ ನಾಯಕರೂ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗಿದೆ.

ಕೆ.ಸಿ. ವೇಣುಗೋಪಾಲ್‌ ಅವರ ಮೇಲಿನ ರೇಪ್‌ಕೇಸ್‌ ಅರೋಪ ಆಡಳಿತ ಹಾಗೂ ಉಪಚುನಾವಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ರಾಜಕೀಯ ಉದ್ದೇಶಕ್ಕಾಗಿ ಕೇರಳದಲ್ಲಿ ಎಫ್‌ಐಆರ್‌ ದಾಖಲಾಗಿದೆ. ಕಾನೂನಿನ ಪ್ರಕಾರ ಹೋರಾಟ ನಡೆಸಲಾಗುವುದು.
– ಡಾ| ಜಿ.ಪರಮೇಶ್ವರ, ಉಪ ಮುಖ್ಯಮಂತ್ರಿ

ಟಾಪ್ ನ್ಯೂಸ್

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Sagara-Autrity

Sagara: ಹತ್ತು ಎಕರೆ ಜಾಗದಲ್ಲಿ ಆಶ್ರಯ ಲೇ ಔಟ್ ನಿರ್ಮಿಸಿ ಬಡವರಿಗೆ ಹಂಚಿಕೆ: ಶಾಸಕ ಬೇಳೂರು

1-ree

Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

BBK11: ಬಿಗ್‌ ಬಾಸ್‌ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?

Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್‌ ಮದುವೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

Mangaluru: Kumaraswamy will turn whenever, however: Jameer Ahmed

Mangaluru: ಕುಮಾರಸ್ವಾಮಿ ಯಾವಾಗ, ಹೇಗೆ ಬೇಕಾದರೂ ಟರ್ನ್ ಆಗುತ್ತಾರೆ: ಜಮೀರ್‌ ಅಹಮದ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

19

Hockey: ಚೀನ ವಿರುದ್ಧ ಜಯಭೇರಿ; ಸೆಮಿಫೈನಲ್‌ಗೆ ಭಾರತ

18

Men’s Senior Hockey Nationals: ಒಡಿಶಾ ಚಾಂಪಿಯನ್‌

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

Mike Tyson: 58 ವರ್ಷದ ಬಾಕ್ಸಿಂಗ್‌ ದಂತಕಥೆ ಟೈಸನ್‌ಗೆ 27 ವರ್ಷದ ಪೌಲ್‌ ಎದುರು ಸೋಲು

ACC U-19 Asia Cup: ರಾಜ್ಯದ ಮೂವರು

ACC U-19 Asia Cup: ರಾಜ್ಯದ ಮೂವರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.