ರೈಲ್ವೆ ಇಲಾಖೆ ಅಸಹಕಾರಕ್ಕೆ ಆಕ್ರೋಶ

Team Udayavani, Oct 23, 2018, 3:30 PM IST

vij-1.jpg

ವಿಜಯಪುರ: ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ವಿವಿಧ ಇಲಾಖೆಗಳ ರೈಲ್ವೆ ಅಧಿಕಾರಿಗಳು ಅಸಹಕಾರ ನೀಡುತ್ತಿದ್ದಾರೆ. ಭೀಕರ ಬರ ಇದ್ದರೂ ರೈತರ ಜಮೀನಿಗೆ ನೀರು ಹರಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ. ಕೂಡಲೇ 15 ದಿನಗಳ ಕಾಲ ಸೊಲ್ಲಾಪುರ-ಗದಗ ಮಾರ್ಗದ ಸಂಚಾರ ಸ್ಥಗಿತಗೊಳಿಸಬೇಕು.

ಇಲ್ಲವಾದಲ್ಲಿ ಅ. 29ರಂದು ಕೂಡಗಿ ರೈಲು ನಿಲ್ದಾಣದಲ್ಲಿ ಪಕ್ಷಾತೀತವಾಗಿ ರೈತರೊಂದಿಗೆ ಪ್ರತಿಭಟನೆ ನಡೆಸುವುದಾಗಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಸೋಮನಗೌಡ ಪಾಟೀಲ ಮನಗೂಳಿ ಎಚ್ಚರಿಸಿದ್ದಾರೆ.

ಸೋಮವಾರ ನಗರದಲ್ಲಿ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಬಹುತೇಕ ನೀರಾವರಿ ಯೋಜನೆಗಳು ಹಿಂದಿನ ಸರ್ಕಾರದಲ್ಲಿ ಸಚಿವ ಡಾ| ಎಂ.ಬಿ. ಪಾಟೀಲ ಅವರಿಂದಾಗಿ ಶರವೇಗಲ್ಲಿ ನಡೆಯುತ್ತಿದ್ದವು. ಈ ಸರ್ಕಾರದಲ್ಲಿ ಜಿಲ್ಲೆಯ ಕಾಮಗಾರಿಗಳೆಲ್ಲ ಅರ್ಧಕ್ಕೆ ನಿಂತಿದ್ದು ಬಾರಾಕಮಾನ್‌ನಂತೆ ದುಸ್ಥಿತಿಯಲ್ಲಿವೆ ಎಂದು ದೂರಿದರು. ಮಲಘಾಣ ಯೋಜನೆಯ ಬಹುತೇಕ ಕಾಮಗಾರಿ ಮುಗಿದಿವೆ. ರೈತರ ಜಮೀನಿಗೆ ನೀರು ಹರಿಸಲು ಸಿದ್ಧವಾಗಿವೆ. ಆದರೆ ಕೂಡಗಿ ಬಳಿ ರೈಲ್ವೆ ಮಾರ್ಗದ ತಳಭಾಗದಲ್ಲಿ ಕಾಲುವೆ ಮಾರ್ಗದ ಕಾಮಗಾರಿ ಬಾಕಿ ಇದ್ದು, ರೈಲ್ವೇ ಅಧಿಕಾರಿಗಳ ಅಸಹಕಾರದಿಂದ ಇಡಿ ಯೋಜನೆ ಮೂಲೆಗುಂಪಾಗಿದೆ. ಪರಿಣಾಮ ಭೀಕರ ಬರದಿಂದ ತತ್ತರಿಸಿರಿರುವ ಮಸೂತಿ, ಮಲಘಾಣ, ಮುತ್ತಗಿ ಭಾಗದ ಲಕ್ಷಾಂತರ ಎಕರೆ ಜಮೀನಿನಲ್ಲಿ ರೈತರು ಬಿತ್ತಿದ ಬೆಳೆ ನೀರಿಲ್ಲದೇ ಒಣಗುತ್ತಿದ್ದು, ಆರ್ಥಿಕ ಸಂಕಷ್ಟ ಅನಭವಿಸುವಂತಾಗಿದೆ ಎಂದು ಕಿಡಿ ಕಾರಿದರು.

ಕೂಡಗಿ ಬಳಿ 24 ಗಂಟೆ ರೈಲು ಸಂಚಾರ ಸ್ಥಗಿತಗೊಳಿಸಿದರೆ ಕಾಮಗಾರಿ ಮುಗಿಸಿ ಕೊಡುವುದಾಗಿ ಗುತ್ತಿಗೆದಾರರು ಹೇಳುತ್ತಿದ್ದರೂ ರೈಲ್ವೇ ಇಲಾಖೆ ಅಧಿಕಾರಿಗಳು ಸಹಕಾರ ನೀಡುತ್ತಿಲ್ಲ. ಹೀಗಾಗಿ ರೈತರ ಹಿತ ದೃಷ್ಟಿಯಿಂದ ಜಿಲ್ಲಾಡಳಿತಕ್ಕೆ ತಕ್ಷಣ ಸಮಸ್ಯೆ ಪರಿಹಾರಕ್ಕಾಗಿ 15 ದಿನ ವಿಜಯಪುರ ಮಾರ್ಗದಲ್ಲಿನ ಎಲ್ಲ ರೈಲು ಸಂಚಾರದ ಮಾರ್ಗ ಬದಲಿಸಲು ಕ್ರಮ ಕೈಗೊಳ್ಳಬೇಕು. ತಕ್ಷಣ ಈ ಬಗ್ಗೆ ಸರ್ಕಾರ ಸ್ಪಂದಿಸದಿದ್ದಲ್ಲಿ ಅ. 29ರಂದು ಪಕ್ಷಾತೀತವಾಗಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.

ಯೋಜನೆ ಆರಂಭದ ಸಂದರ್ಭದಲ್ಲಿ ರೈಲ್ವೆ ಇಲಾಖೆಯೊಂದಿಗೆ ಜಲ ಸಂಪನ್ಮೂಲ ಇಲಾಖೆ ಜೊತೆ ಒಪ್ಪಂದ ಮಾಡಿಕೊಳ್ಳಲಾಗಿರುತ್ತದೆ. ಆದರೆ ಇದೀಗ ಹುಬ್ಬಳ್ಳಿ ರೈಲ್ವೆ ಅಧಿ ಕಾರಿಗಳು ರೈಲು ಸಂಚಾರ ಮಾರ್ಗ ಬದಲಿಸಲು ಸಾಧ್ಯವಿಲ್ಲ, ಒಂದೊಮ್ಮೆ ಒತ್ತಡ ಹೇರಿ ಕಾಮಗಾರಿ ಮಾಡಿದರೆ ಭವಿಷ್ಯದಲ್ಲಿ ಎದುರಾಗುವ ದುರಂತಕ್ಕೆ ರೈತರೇ ಹೊಣೆ ಎಂದು ಬೆದರಿಕೆ ಹಾಕುತ್ತಿದ್ದಾರೆ. ಹೀಗಾಗಿ ತಕ್ಷಣ ಜಿಲ್ಲಾಡಳಿತ ಮಧ್ಯ ಪ್ರವೇಶಿಸಬೇಕೆಂದು ಆಗ್ರಹಿಸಿದರು.

ರೈತರು ಬನ್ನಿ ವಿನಿಯಮ ಸಂದರ್ಭದಲ್ಲಿಯೂ ಈಸಮಸ್ಯೆಯನ್ನು ಹೇಳಿಕೊಂಡಿದ್ದಾರೆ, ಈ ಸಮಸ್ಯೆ ನಿವಾರಣೆಯಾದರೆ ಬದುಕು ಬಂಗಾರವಾಗಲಿದೆ ಎಂಬ ಆಶಯ ರೈತರಲ್ಲಿದೆ. ರೈಲ್ವೆ ಇಲಾಖೆ ರೈತರ ಆಶಯಗಳಿಗೆ ತಣ್ಣೀರೆರಚಬಾರದು ಎಂದರು. ಜಿಪಂ ಸದಸ್ಯ ಕಲ್ಲಪ್ಪ ಕೊಡಬಾಗಿ, ಸಂಜಯ ಪಾಟೀಲ ಕನಮಡಿ, ವಿಜಯಕುಮಾರ ಚವ್ಹಾಣ, ಶ್ರೀನಿವಾಸ ಬೇಟಗೇರಿ, ಶ್ರೀಹರಿ ಗೊಳಸಂಗಿ, ಎಸ್‌. ಎಸ್‌. ಗೌರಿ ಇತರರು ಇದ್ದರು.

ಟಾಪ್ ನ್ಯೂಸ್

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಹಿಳಾ ವಿವಿಯಿಂದ ನಟಿ ತಾರಾ, ಮೀನಾಕ್ಷಿ ಬಾಳಿ, ವೇದಾರಾಣಿಗೆ ಗೌರವ ಡಾಕ್ಟರೇಟ್

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Vijayapura: ಮಕ್ಕಳ ಕೊಲೆ ಮಾಡಿ ಆತ್ಮಹತ್ಯೆಗೆ ಯತ್ನಿಸಿದ್ದ ತಾಯಿಗೆ ಜೀವಾವಧಿ ಶಿಕ್ಷೆ

Leopard spotted in Vijayapura city: CCTV footage captured

Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Yathanaa

BJP Inner Politics: ಬಿ.ವೈ.ವಿಜಯೇಂದ್ರ ಬಿಜೆಪಿ ಹಂಗಾಮಿ ರಾಜ್ಯಾಧ್ಯಕ್ಷ: ಬಸನಗೌಡ ಯತ್ನಾಳ್‌

arrested

Vijayapura; ವಿದ್ಯಾರ್ಥಿನಿಯರಿಗೆ ಲೈಂಗಿ*ಕ ಕಿರುಕುಳ: ಸರಕಾರಿ ಕಾಲೇಜು ಪ್ರಾಂಶುಪಾಲ ಸೆರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Bantwal: ಕಾಂಟ್ರಾಕ್ಟ್ ಕ್ಯಾರೇಜ್‌ ಬಸ್‌ ಪ್ರಯಾಣ ದರ ಏರಿಕೆ

Special Train ಮಕರ ಸಂಕ್ರಾಂತಿ:  ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

Special Train ಮಕರ ಸಂಕ್ರಾಂತಿ: ಇಂದು ಬೆಂಗಳೂರಿನಿಂದ ಕರಾವಳಿಗೆ ವಿಶೇಷ ರೈಲು

1-horoscope

Daily Horoscope: ಅನಿರೀಕ್ಷಿತ ಧನಾಗಮ, ಅವಿವಾಹಿತರಿಗೆ ಯೋಗ್ಯ ಸಂಗಾತಿ ಲಭ್ಯ

ಕಾಂಗ್ರೆಸ್‌ಗೆ ಬಿಸಿ ಊಟ: ಪರಂಗೆ ಹೈ ಬುಲಾವ್‌?ವಿವಾದ ಬೆನ್ನಲ್ಲೇ ದಿಲ್ಲಿಗೆ ಕರೆದ ಹೈಕಮಾಂಡ್‌

“ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

California Wildfire: “ಮನೆಯ ಅಂಗಳದಲ್ಲೇ ಬೆಂಕಿ ಕುಣಿದಂತಿದೆ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.