29ರ ವರೆಗೆ ಅಸ್ತಾನಾಗೆ ರಿಲೀಫ್
Team Udayavani, Oct 24, 2018, 3:49 PM IST
ಹೊಸದಿಲ್ಲಿ: ಅಗ್ರಗಣ್ಯ ತನಿಖಾ ಸಂಸ್ಥೆ ಸಿಬಿಐನ ಇಬ್ಬರು ಹಿರಿಯ ಅಧಿಕಾರಿಗಳ ಗುದ್ದಾಟ ಮಂಗಳವಾರವೂ ಮುಂದುವರಿದಿದೆ. ಸಂಸ್ಥೆಯ ವಿಶೇಷ ನಿರ್ದೇಶಕ ರಾಕೇಶ್ ಅಸ್ತಾನಾ ತಮ್ಮ ವಿರುದ್ಧದ ಕಾನೂನು ಪ್ರಕ್ರಿಯೆಗಳ ತಡೆ ಕೋರಿ ದಿಲ್ಲಿ ಹೈಕೋರ್ಟ್ಗೆ ಸಲ್ಲಿಸಿರುವ ಮನವಿಗೆ ಮನ್ನಣೆ ಸಿಕ್ಕಿದ್ದು, ಮುಂದಿನ ಸೋಮವಾರ (ಅ.29) ವರೆಗೆ ಅವರನ್ನು ಬಂಧಿಸಬಾರದು. ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂದು ಆದೇಶ ನೀಡಿದೆ. ಆದರೆ ಅವರ ವಿರುದ್ಧ ಇರುವ ಆರೋಪಗಳ ಗಂಭೀರತೆಯನ್ನು ಪರಿಗಣಿಸಿ ತನಿಖೆ ಮುಂದುವರಿಸಲು ನ್ಯಾ| ನಜೀಂ ವಝಿರಿ ಅವರನ್ನೊಳಗೊಂಡ ಪೀಠ ಸೂಚಿಸಿದೆ.
ಅಸ್ತಾನಾ ಜತೆಗೆ ಸಿಬಿಐನ ಬಂಧಿತ ಡಿವೈಎಸ್ಪಿ ದೇವೇಂದ್ರ ಕುಮಾರ್ ಕೂಡ ತಮ್ಮ ವಿರುದ್ಧ ದಾಖಲಾಗಿರುವ ಎಫ್ಐಆರ್ ವಜಾ ಮಾಡುವಂತೆ ಒತ್ತಾಯಿಸಿ ಹೈಕೋರ್ಟ್ಗೆ ಮನವಿ ಸಲ್ಲಿಸಿದ್ದರು. ಈ ಮನವಿಗಳ ಪರಿಶೀಲನೆ ನಡೆಸಿರುವ ಹೈಕೋರ್ಟ್, ಸಿಬಿಐ ನಿರ್ದೇಶಕ ಆಲೋಕ್ ಕುಮಾರ್ ವರ್ಮಾ ಮತ್ತು ಜಂಟಿ ನಿರ್ದೇಶಕ ಎ.ಕೆ.ಶರ್ಮಾ, ಕೇಂದ್ರ ಸಿಬಂದಿ ಮತ್ತು ತರಬೇತಿ ನಿರ್ದೇಶನಾ ಲಯಕ್ಕೂ ನೋಟಿಸ್ ನೀಡಿದೆ. ಮೊಬೈಲ್ ಫೋನ್ ಸೇರಿದಂತೆ ಎಲ್ಲ ದಾಖಲೆಗಳನ್ನೂ ಹೈಕೋರ್ಟ್ಗೆ ನೀಡುವಂತೆಯೂ ಸೂಚಿಸಿದೆ.
7 ದಿನ ಅವಕಾಶ: ಈ ನಡುವೆ ಬಂಧಿತ ಡಿವೈಎಸ್ಪಿ ದೇವೇಂದ್ರ ಕುಮಾರ್ರನ್ನು ವಿಚಾರಣೆ ನಡೆಸಲು ಸಿಬಿಐಗೆ 7 ದಿನಗಳ ಅವಕಾಶ ನೀಡಿದೆ ವಿಶೇಷ ಕೋರ್ಟ್. ಆರೋಪಗಳನ್ನು ಗಂಭೀರ ಎಂದು ಪರಿಗಣಿಸಿರುವ ಕೋರ್ಟ್ ಬಂಧಿತ ಕುಮಾರ್ ಸಹಿತ ಸರಕಾರಿ ಅಧಿಕಾರಿಗಳ ವಿರುದ್ಧ ವಸೂಲಿ ಆರೋಪ ಸಹಿತ ಇತರ ಗುರುತರ ಆರೋಪಗಳು ಕಳವಳಕಾರಿ ಎಂದಿದೆ. ಬಿಕ್ಕಟ್ಟು ಬಿಗಡಾಯಿಸಿದ ಹಿನ್ನೆಲೆಯಲ್ಲಿ ಸೋಮವಾರವೇ ಪ್ರಧಾನಿ ನರೇಂದ್ರ ಮೋದಿಯವರು ಸಿಬಿಐ ನಿರ್ದೇಶಕ ಆಲೋಕ್ ಕುಮಾರ್ ಮತ್ತು ರಾಕೇಶ್ ಅಸ್ತಾನಾರನ್ನು ಭೇಟಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.