ಗಣ್ಯರ ಮನೆಗೆ ಬಾಂಬ್ ಕಳಿಸಿದವರಿಗಾಗಿ ಶೋಧ
Team Udayavani, Oct 26, 2018, 7:50 AM IST
ವಾಷಿಂಗ್ಟನ್: ಅಮೆರಿಕದ ಮಾಜಿ ಸಚಿವೆ ಹಿಲರಿ ಕ್ಲಿಂಟನ್ ಸೇರಿದಂತೆ ಹಲವು ಗಣ್ಯರ ಮನೆ ಹಾಗೂ ಕಚೇರಿಗಳಲ್ಲಿ ಬಾಂಬ್ ಪಾರ್ಸೆಲ್ ಸಿಕ್ಕ ಪ್ರಕರಣದ ತನಿಖೆ ಆರಂಭವಾಗಿದ್ದು, ಈ ಪಾರ್ಸೆಲ್ ಕಳುಹಿಸಿದವರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಮನೆಗೆ ಹಾಗೂ ಮಾಧ್ಯಮ ಸಂಸ್ಥೆ ಸಿಎನ್‌ಎನ್ ಕಚೇರಿಗೂ ಬಾಂಬ್ ಪಾರ್ಸೆಲ್ ಕಳುಹಿಸಲಾಗಿತ್ತು.
ಈ ಮಧ್ಯೆ ಸಿಎನ್‌ಎನ್ ಹಾಗೂ ಸರಕಾರದ ಮಧ್ಯೆ ಇದೇ ವಿಚಾರಕ್ಕೆ ವಾಕ್ಸಮರ ಆರಂಭವಾಗಿದೆ. ಸನ್ನಿವೇಶವನ್ನು ಅರ್ಥ ಮಾಡಿಕೊಳ್ಳಲು ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಸಿಎನ್‌ಎನ್ ಮುಖ್ಯಸ್ಥ ಜೆಫ್ ಝಕರ್ ಆರೋಪಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಶ್ವೇತಭವನದ ವಕ್ತಾರೆ ಸಾರಾ ಸ್ಯಾಂಡರ್ಸ್, ದೇಶವನ್ನು ಸಿಎನ್‌ಎನ್ ವಿಭಜಿಸುತ್ತಿದೆ ಎಂದು ಆರೋಪಿಸಿದ್ದಾರೆ. ರಾಜಕೀಯ ಹಿಂಸೆಯನ್ನು ವಿರೋಧಿಸುವ ಬಗ್ಗೆ ಟ್ರಂಪ್ ಕಠಿಣ ಶಬ್ದಗಳಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೂ ಸಿಎನ್‌ಎನ್ ದೇಶವನ್ನು ವಿಭಜಿಸುವ ಕೃತ್ಯದಲ್ಲಿ ತೊಡಗಿದೆ. ಎಲ್ಲ ರೀತಿಯ ರಾಜಕೀಯ ಹಿಂಸೆಯ ವಿರುದ್ಧ ಅಮೆರಿಕ ಒಂದಾಗಬೇಕಿದೆ ಎಂದು ಸಾರಾ ಹೇಳಿದ್ದಾರೆ.
ನಿರೋ, ಬಿಡೆನ್‌ಗೆ ಬಾಂಬ್: ಆಸ್ಕರ್ ಪುರಸ್ಕೃತ ನಟ ರಾಬರ್ಟ್ ಡೆ ನಿರೋ ಕಚೇರಿಗೆ ಹಾಗೂ ಮಾಜಿ ಉಪಾಧ್ಯಕ್ಷ ಜೋಯ್ ಬಿಡನ್ ಮನೆಗೂ ಇದೇ ರೀತಿಯ ಪಾರ್ಸೆಲ್ ಬಂದಿರುವುದು ಗುರುವಾರ ವರದಿಯಾಗಿದೆ. ನಿರೋ ಮಾಲೀಕತ್ವದ ಟ್ರಿಬೆಕಾ ಪ್ರೊಡಕ್ಷನ್ಸ್ ಉದ್ಯೋಗಿಯೊಬ್ಬರು ಈ ಬಗ್ಗೆ ಪೊಲೀಸರಿಗೆ ವರದಿ ಮಾಡಿದ್ದರು. ಮೇಲ್ನೋಟಕ್ಕೆ ಇದು ಕ್ಲಿಂಟನ್ ಹಾಗೂ ಒಬಾಮ ಕಚೇರಿಗೆ ಕಳುಹಿಸಿದ ಪ್ಯಾಕೇಜನ್ನೇ ಹೋಲುತ್ತದೆ. ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಆಗಮಿಸಿ ಪ್ಯಾಕೇಜ್ ಅನ್ನು ನಿಷ್ಕ್ರಿಯಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Beirut ಮೇಲೆ ದಾಳಿ…ಇಸ್ರೇಲ್ ಮೇಲೆ 250 ರಾಕೆಟ್ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Sheikh Hasina, ಅದಾನಿ ನಡುವಿನ ಒಪ್ಪಂದದ ಪರಿಶೀಲನೆಗೆ ಸಮಿತಿ ರಚಿಸಿದ ಬಾಂಗ್ಲಾದೇಶ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.