ಮಡಿಕೇರಿ: ಭೂಕುಸಿತ ಸ್ಥಳಗಳಿಗೆ ಪೇಜಾವರ ಶ್ರೀ ಭೇಟಿ; ಸಾಂತ್ವನ
Team Udayavani, Oct 26, 2018, 9:42 AM IST
ಉಡುಪಿ/ಮಡಿಕೇರಿ: ಪ್ರಾಕೃತಿಕ ವಿಕೋಪದಿಂದ ಹಾನಿಗೊಳಗಾದ ಕೊಡಗು ಜಿಲ್ಲೆಯ ಮೂರ್ನಾಡು ಮತ್ತು ಕೇರಳದ ಎರ್ನಾಕುಳಂ, ತ್ರಿಪುಣತ್ರಯಿಗೆ ಉಡುಪಿ ಶ್ರೀ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಭೇಟಿ ನೀಡಿ ಜನರಿಗೆ ಸಾಂತ್ವನ ಹೇಳಿದರು.
ಬುಧವಾರ ಎರ್ನಾಕುಳಂ ಸಂತ್ರಸ್ತರಿಗೆ 3.6 ಲ.ರೂ., ತ್ರಿಪುಣತ್ರಯಿಯಲ್ಲಿ 5.1 ಲ.ರೂ. ಮೊತ್ತವನ್ನು ಪೇಜಾವರ ಶ್ರೀಗಳು ವಿತರಿಸಿದರು. ಗುರುವಾರ ಮೂರ್ನಾಡು ಸಮೀಪದ ಬಲಮುರಿಯಲ್ಲಿ ಸಂತ್ರಸ್ತರನ್ನು ಭೇಟಿ ಮಾಡಿದ ಶ್ರೀಗಳು ತಾವು ಘೋಷಿಸಿದ 10 ಲ.ರೂ. ಮೊತ್ತವನ್ನು ಹೇಗೆ ವಿನಿಯೋಗಿಸಬೇಕೆಂದು ಚರ್ಚಿಸಿದರು. ಸ್ವ ಉದ್ಯೋಗ ಕೈಗೊಳ್ಳಲು ಮತ್ತು ಯಾವುದಾದರೂ ಒಂದು ಶಾಲೆಗೆ ಬೇಕಾದ ಪರಿಕರಗಳನ್ನು ನೀಡಲು ನಿರ್ಧರಿಸಲಾಯಿತು.
ಮಕ್ಕಂದೂರು, ಉದಯಗಿರಿ ಮತ್ತು ಮದೆನಾಡು ಗ್ರಾಮ ಗಳಲ್ಲಿನ ಭೂಕುಸಿತ ಪ್ರದೇಶಗಳಿಗೆ ಸ್ವಾಮೀಜಿ ಭೇಟಿ ನೀಡಿ ಅನಾಹುತಗಳನ್ನು ವೀಕ್ಷಿಸಿದರು. ಶ್ರೀ ಓಂಕಾರೇಶ್ವರ ದೇವಾಲಯ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಜಗದೀಶ್, ಕಾರ್ಯನಿರ್ವಹಣಾಧಿಕಾರಿ ಎಸ್.ಎಸ್. ಸಂಪತ್ ಕುಮಾರ್, ಮಾಜಿ ಅಧ್ಯಕ್ಷ ಕೆ.ಎಸ್. ರಮೇಶ್ ಹೊಳ್ಳ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Putturu: ಠಾಣೆ ಮುಂಭಾಗದಲ್ಲಿ ಜನರ ಆಕ್ರೋಶ; ಶಾಸಕ ಅಶೋಕ್ ಕುಮಾರ್ ರೈ ಭೇಟಿ
Explained:ಈ ವರ್ಷ ಸೌದಿ ಅರೇಬಿಯಾ 100ಕ್ಕೂ ಅಧಿಕ ವಿದೇಶಿಯರನ್ನು ನೇಣಿಗೇರಿಸಲು ಕಾರಣ ಏನು!
ಹೋಮ್ ವರ್ಕ್ ಮಾಡದ್ದಕ್ಕೆ ಥಳಿಸಿದ ಶಿಕ್ಷಕ; ಕಣ್ಣ ದೃಷ್ಟಿಯನ್ನೇ ಕಳೆದುಕೊಂಡ ವಿದ್ಯಾರ್ಥಿ
Mudhol: ಎರಡೂ ಬಣಗಳಿಂದ ಪ್ರತಿಭಟನೆ ಬಿಸಿ; ಸ್ಥಳದಲ್ಲೇ ಬೀಡುಬಿಟ್ಟಿರುವ ಎಸ್ಪಿ; ಹೈ ಅಲರ್ಟ್
Belagavi: ಹೊಸಬರು, ಹಳಬರನ್ನೂ ಬಿಜೆಪಿಯವರು ಟಚ್ ಮಾಡ್ತಿದ್ದಾರೆ: ಶಾಸಕ ಬಾಬಾಸಾಹೇಬ ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.