ಚೈತ್ರಾ, ಬೆಂಬಲಿಗರ ಹಲ್ಲೆ ಖಂಡಿಸಿ ಸುಬ್ರಹ್ಮಣ್ಯ ಬಂದ್
Team Udayavani, Oct 26, 2018, 10:32 AM IST
ಸುಬ್ರಹ್ಮಣ್ಯ: ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು ಪ್ರಧಾನ ಕಾರ್ಯದರ್ಶಿ ಗುರುಪ್ರಸಾದ್ ಪಂಜ ಅವರ ಮೇಲೆ ಚೈತ್ರಾ ಕುಂದಾಪುರ ಹಾಗೂ ಅವರ ಬೆಂಬಲಿಗರು ಬುಧವಾರ ರಾತ್ರಿ ಕುಕ್ಕೆ ಸುಬ್ರಹ್ಮಣ್ಯದ ಕಾಶಿಕಟ್ಟೆ ಬಳಿ ನಡೆಸಿದ ಹಲ್ಲೆಯನ್ನು ಖಂಡಿಸಿ ಮತ್ತು ದೇವಸ್ಥಾನಕ್ಕೆ ಧಕ್ಕೆ ತರುವ ನಡೆಯನ್ನು ವಿರೋಧಿಸಿ ಕುಕ್ಕೆ ಸುಬ್ರಹ್ಮಣ್ಯ ನಗರದ ವರ್ತಕರು ನೀಡಿದ ಕುಕ್ಕೆ ಸುಬ್ರಹ್ಮಣ್ಯ ಬಂದ್ ಕರೆಗೆ ಗುರುವಾರ ಭಾರೀ ಸ್ಪಂದನೆ ದೊರಕಿದೆ. ಎಲ್ಲ ವರ್ತಕರು ಅಂಗಡಿ-ಮುಂಗಟ್ಟುಗಳನ್ನು ಸ್ವಯಂಪ್ರೇರಿತವಾಗಿ ಮುಚ್ಚಿದ್ದರು.
ಘಟನೆ ನಡೆದ ಬುಧವಾರ ರಾತ್ರಿ ನಗರದ ವರ್ತಕರೆಲ್ಲ ದಿಢೀರ್ ಸಭೆ ನಡೆಸಿ, ಚೈತ್ರಾ ಹಾಗೂ ಅವರ ಸಂಗಡಿಗರ ಕೃತ್ಯವನ್ನು ಖಂಡಿಸಿದರು. ಬಳಿಕ ಮೆರವಣಿಗೆ ಮೂಲಕ ನಗರದ ಅಂಗಡಿ ಮುಂಗಟ್ಟುಗಳಿಗೆ ತೆರಳಿ, ಗುರುವಾರ ಒಂದು ದಿನ ಅಂಗಡಿ ಮುಂಗಟ್ಟು ಬಂದ್ ಮಾಡಿ ಬೆಂಬಲಿಸುವಂತೆ ಮನವಿ ಮಾಡಿದರು.
ನಗರದ ವರ್ತಕರು, ಆಟೋ ರಿಕ್ಷಾ, ಖಾಸಗಿ ವಾಹನಗಳ ಚಾಲಕ – ಮಾಲಕರು, ವಿವಿಧ ಸಂಘಟನೆಗಳ ಸದಸ್ಯರು ದೇವಸ್ಥಾನದ ಆದಿಶೇಷ ವಸತಿಗೃಹದ ಬಳಿ ಬೆಳಗ್ಗೆ 10 ಗಂಟೆಗೆ ಜಮಾಯಿಸಿ, ಬಳಿಕ ಪ್ರತಿಭಟನ ಮೆರವಣಿಗೆ ನಡೆಸಿದರು. ವಸತಿಗೃಹದಿಂದ ರಥಬೀದಿ ಮೂಲಕ ಕುಮಾರಧಾರಾ ತನಕ ಮೆರವಣಿಗೆ ಸಾಗಿತು.
ಭಕ್ತರಿಗೆ, ಸಾರ್ವಜನಿಕರಿಗೆ ಅಡಚಣೆಯಾಗಿಲ್ಲ
ಪ್ರತಿಭಟನೆಯಲ್ಲಿ ನಗರದ ವರ್ತಕರು, ಸಂಘ – ಸಂಸ್ಥೆಗಳು ಅಲ್ಲದೆ ಕಡಬ, ಗುತ್ತಿಗಾರು, ಹರಿಹರ, ಕೊಲ್ಲಮೊಗ್ರು, ಐನಕಿದು, ಪಂಜ, ಬಳ್ಪ ಮೊದಲಾದ ಕಡೆಗಳಿಂದ ಸಾರ್ವಜನಿಕರು ಆಗಮಿಸಿದ್ದರು. ಬಂದ್ ಶಾಂತಿಯುತವಾಗಿ ನಡೆದಿದ್ದು, ಕ್ಷೇತ್ರಕ್ಕೆ ಬಂದಿದ್ದ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಪ್ರತಿಭಟನಕಾರರು ಸಹಕರಿಸಿದರು. ಹೊಟೇಲ್‌ಗಳನ್ನು ತುಸು ತಡವಾಗಿ ಮುಚ್ಚುವ ಜತೆಗೆ, ದೇವಸ್ಥಾನದಿಂದಲೂ ಭಕ್ತರಿಗೆ ಉಪಾಹಾರದ ವ್ಯವಸ್ಥೆ ಮಾಡಲಾಗಿತ್ತು. ಮಧ್ಯಾಹ್ನದ ಭೋಜನ ವ್ಯವಸ್ಥೆಯಲ್ಲೂ ವ್ಯತ್ಯಾಸವಾಗಲಿಲ್ಲ. ಶಿಕ್ಷಣ ಸಂಸ್ಥೆಗಳು, ಬ್ಯಾಂಕ್‌ಗಳು ಎಂದಿನಂತೆ ಕಾರ್ಯಾಚರಿಸಿದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL Auction 2025: ಸೇಲ್ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..
Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್ ಸೊರೇನ್ ನ.28ಕ್ಕೆ ಪದಗ್ರಹಣ
Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.